6 ನೇ ತರಗತಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

January 4, 2023
9:39 PM

ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2023-24ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಜನವರಿ 5 ರಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement

ಜನವರಿ 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮಾರ್ಚ್ 12ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.

Advertisement

ಜಿಲ್ಲೆಯ ಯಾವುದೇ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ತಮಗೆ ಸಮೀಪವಿರುವ ಜಿಲ್ಲೆಯ ಯಾವುದೇ ವಸತಿ ಶಾಲೆಗಳಿಗೆ ಭೇಟಿ ನೀಡಿ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ SATS ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಇತರೆ ಮೀಸಲಾತಿ ಅನ್ವಯವಾದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರಗಳು ಹಾಗೂ ವಿದ್ಯಾರ್ಥಿಯ ಇತ್ತೀಚಿನ ಪಾಸ್‍ಪೋರ್ಟ್ ಭಾವಚಿತ್ರ ಅವಶ್ಯಕವಾಗಿರುತ್ತವೆ.

Advertisement

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೇ ತಾವು ದಾಖಲಾಗಲು ಬಯಸುವ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಬೇಕು. ಅಭ್ಯರ್ಥಿಯ ಮೆರಿಟ್, ಮೀಸಲಾತಿ ಹಾಗೂ ಪ್ರವೇಶ ಬಯಸುವ ಶಾಲೆಗಳ ಆದ್ಯತಾ ಕ್ರಮದ ಮೇಲೆ Computerised Auto Selection ಮೂಲಕ ಸೀಟು ಹಂಚಿಕೆ ಮಾಡಲಾಗುವುದು.

ಜನವರಿ 22ರ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್ 12ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.

Advertisement

ಮಾಹಿತಿ ಪುಸ್ತಕ-2023’ವನ್ನು ಪ್ರಾಧಿಕಾರದ ವೆಬ್‍ಸೈಟ್ www.kea.kar.nic.in ನಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 080-23460460 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |
May 9, 2024
10:10 PM
by: ಮಹೇಶ್ ಪುಚ್ಚಪ್ಪಾಡಿ
ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ
May 9, 2024
8:27 PM
by: ದ ರೂರಲ್ ಮಿರರ್.ಕಾಂ
Karnataka Weather | 09-05-2024 | ಅಲ್ಲಲ್ಲಿ ಗುಡುಗು ಸಹಿತ ಮಳೆ | ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ |
May 9, 2024
12:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror