ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನ

January 4, 2023
9:43 PM

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನವಾಗಿದೆ. ಮಂಡಳಿಯ ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ನೋಂದಣಿಯ ಹಿರಿತನದ ಅಧಾರದಲ್ಲಿ ಟ್ಯಾಬ್ ವಿತರಿಸಲಾಗುವುದು. 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತ್ಯ. ಕೊನೆಯ ದಿನಾಂಕ ಮುಗಿದ ನಂತರ ಬರುವ ಅರ್ಜಿ ಸ್ವೀಕರಿಸಲಾಗುವುದಿಲ್ಲ.

ಅರ್ಜಿ ನಮೂನೆಯೊಂದಿಗೆ ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ ಪ್ರತಿ ಹಾಗೂ ನವೀಕರಣ ಗುರುತಿನ ಚೀಟಿಯ ಪ್ರತಿ, ಫಲಾನುಭವಿ ಹಾಗೂ ಮಗುವಿನ ಆಧಾರ್ ಕಾರ್ಡ್ ಪ್ರತಿ. ವಿದ್ಯಾರ್ಥಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ. ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ಇದುವರೆಗೂ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿಡವಿಟ್ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು, ಮಡಿಕೇರಿ ವೃತ್ತ, ಸೋಮವಾರಪೇಟೆ ವೃತ್ತ, ವಿರಾಜಪೇಟೆ ವೃತ್ತರವರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!
June 18, 2026
10:15 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror