ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2023 ರ ಮೇ, 02 ರಿಂದ 2024 ರ ಫೆಬ್ರವರಿ, 29 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು 2023ರ ಏಪ್ರಿಲ್, 12 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಕಚೇರಿಯಿಂದ ಅರ್ಜಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂ:8310687707, ಅಂತರ್ಜಾಲ www.horticulture.kar.nic.in ಇಲ್ಲಿ ಪಡೆಯಬಹುದಾಗಿದೆ.
ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಬೇಕು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…