Advertisement
ಮಾಹಿತಿ

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

Share

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ (2025-26) ಸಹ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು  ಕೆ-ಕಿಸಾನ್   ಪೋರ್ಟಲ್‍ ನ Citizen Login  ಅಥವಾ RSK Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ/ ನಾಗರೀಕ ಸೇವಾ ಕೇಂದ್ರ/ ಸ್ವತಃ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ FID( Fruits Identification) ಯನ್ನು ಬಳಸಿಕೊಂಡು ಆನ್‍ಲೈನ್ ಮೂಲಕ  ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ನಿಬಂಧನೆಗಳು: ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು. ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ/ ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿರುತ್ತದೆ.  ತಾಲ್ಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಸ್ಪರ್ಧಿಸಬಹುದು ಮತ್ತು ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ.  ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ. ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕವನ್ನು ತಿಳಿಸಬೇಕು.

ತಾಲ್ಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ ರೂ.15000, ದ್ವಿತೀಯ ಬಹುಮಾನ ರೂ.10000,  ತೃತೀಯ ಬಹುಮಾನ ರೂ.5000 ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ರೂ.30000, ದ್ವಿತೀಯ ಬಹುಮಾನ ರೂ.25000, ತೃತೀಯ ಬಹುಮಾನ ರೂ.20000 ನೀಡಲಾಗುತ್ತದೆ. ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ  ರೂ.50000, ದ್ವಿತೀಯ ಬಹುಮಾನ ರೂ.40000, ತೃತೀಯ ಬಹುಮಾನ    ರೂ.35000 ನೀಡಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

11 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago