ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯ ಜ್ಯೋತಿ, ಕುಟೀರ, ಜ್ಯೋತಿ ಒಳಗೊಂಡಂತೆ) ಮಾಸಿಕ 75 ಯುನಿಟ್‍ಗಳ ಉಚಿತ ವಿದ್ಯುತ್ ಒದಗಿಸುವ ಕಾರ್ಯಕ್ರಮವನ್ನು ‘ಅಮೃತ ಜ್ಯೋತಿ’ ಕಾರ್ಯಕ್ರಮ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜೆಸ್ಕಾಂ ವ್ಯಾಪ್ತಿಯಲ್ಲಿ ಇದರ ಅನುಷ್ಟಾನ ಆರಂಭವಾಗಿದ್ದು, ಇದಕ್ಕಾಗಿ ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.ಹೊಸಪೇಟೆ ನಗರದ ಉಪ-ವಿಭಾಗ-1ರ ವ್ಯಾಪ್ತಿಯಲ್ಲಿ ಬರುವಂತಹ ಕೆಲವು ಪ್ರದೇಶದ ಗ್ರಾಹಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ‘sevasindhu.karnataka.govt.in’ ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜೆಸ್ಕಾಂ ಕಚೇರಿಗೆ ಸಂಪರ್ಕಿಸಬಹುದು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel