Advertisement
MIRROR FOCUS

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

Share

ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆ, ಬಿತ್ತನೆ ಬೀಜ ಇತ್ಯಾದಿ ಗಂಭೀರ ಚಿಂತೆಯ ವಿಷಯವಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಬೇಕು ಎಂದು ಕೇಂದ್ರ ಸಚಿವ  ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ಹಾವೇರಿ-ಧಾರವಾಡ ಭಾಗದ ಭೇಟಿ ವೇಳೆ ಮಾತನಾಡಿದ ಅವರು, ಮಳೆ ಕೊರತೆ ಮುಂದುವರಿದರೆ ಕುಡಿಯುವ ನೀರು ಮತ್ತು ಜಾನುವಾರು ಮೇವು ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಪ್ರಸ್ತುತ ರಾಜ್ಯದಲ್ಲಿ ಕೃಷಿ ಇಲಾಖೆಗೆ ಪೂರ್ಣಾವಧಿ ಸಚಿವರಿಲ್ಲದಿರುವುದು ರೈತರ ಸಮಸ್ಯೆಗಳ ನಿರ್ವಹಣೆಯಲ್ಲಿ ಹಿನ್ನಡೆಯಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮುಂಚಿತ ಪರಿಹಾರ ಕ್ರಮಗಳ ಸಿದ್ಧತೆ ಕುರಿತು ಸೂಚನೆ ನೀಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದೇಶದ ಆಹಾರ ಧಾನ್ಯಗಳ ಸಂಗ್ರಹ ಸಮರ್ಪಕವಾಗಿದ್ದರೂ, ಮಳೆ ಕೊರತೆ ಮುಂದುವರಿದರೆ ಗ್ರಾಮೀಣ ಪ್ರದೇಶಗಳಲ್ಲಿ ನೀರು ಮತ್ತು ಮೇವು ನಿರ್ವಹಣೆ ದೊಡ್ಡ ಸವಾಲಾಗಬಹುದು ಎಂದು ಅವರು ಹೇಳಿದ್ದಾರೆ. ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರ ಸಂಪೂರ್ಣ ಸಚಿವ ಸಂಪುಟದೊಂದಿಗೆ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಜೋಶಿ ಒತ್ತಿ ಹೇಳಿದ್ದಾರೆ.

Rural Mirror Insight | ರೂರಲ್ ಮಿರರ್ ಇನ್‌ಸೈಟ್:

ಪ್ರಸ್ತುತ ದೇಶದಲ್ಲಿ ಮಳೆ ಕೊರತೆ ಸುಮಾರು 40%ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿಯೂ ಹಲವೆಡೆ ಮಳೆಯ ಪ್ರಮಾಣ ನಿರೀಕ್ಷಿತ ಮಟ್ಟ ತಲುಪಿಲ್ಲ. ಇಂತಹ ಸಂದರ್ಭದಲ್ಲಿ ಕೃಷಿ ಇಲಾಖೆಯ ನಿರ್ಧಾರಗಳು ಅತ್ಯಂತ ಮಹತ್ವ ಪಡೆದುಕೊಳ್ಳುತ್ತವೆ. ಹೀಗಾಗಿ ಕೃಷಿ ಇಲಾಖೆ ಸರಿಯಾಗಿ ಕೆಲಸ ಮಾಡಬೇಕು, ಇದಕ್ಕಾಗಿ ಸೂಕ್ತ ಕೃಷಿ ಸಚಿವರ ಅಗತ್ಯ ಇದೆ.  ಪ್ರಾಕೃತಿಕ ವಿಕೋಪ, ಮಳೆ ಕೊರತೆ ಅಥವಾ ಬೆಳೆ ರೋಗದ ಸಂದರ್ಭಗಳಲ್ಲಿ ರೈತರಿಗೆ ಸರ್ಕಾರದೊಂದಿಗೆ ನೇರ ಸಂವಹನ ನಡೆಸುವ ಇಲಾಖೆಯ ಮುಖ್ಯಸ್ಥರ ಅಗತ್ಯವಿರುತ್ತದೆ. ಪೂರ್ಣಾವಧಿ ಸಚಿವರ ನೇಮಕಾತಿಯಿಂದ ನೀತಿ ನಿರ್ಧಾರಗಳ ವೇಗ ಹೆಚ್ಚಾಗಬಹುದು ಎಂಬ ಅಭಿಪ್ರಾಯ ಕೃಷಿ ವಲಯದಲ್ಲಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಅಡಿಕೆ, ಕಾಫಿ, ಕರಿಮೆಣಸು, ರಬ್ಬರ್ ಮತ್ತು ತೆಂಗು ಬೆಳೆಗಾರರು ಈಗಾಗಲೇ ಹವಾಮಾನ ವೈಪರೀತ್ಯದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯದ ವಿವಿದೆಡೆ ಬೆಳೆಗಳ ರೋಗ ನಿರ್ವಹಣೆ, ಬೆಳೆ ಸಲಹೆ, ಪರಿಹಾರ ಯೋಜನೆಗಳು ಹಾಗೂ ವಿಮೆ ವಿಚಾರಗಳಲ್ಲಿ ಕೃಷಿ ಇಲಾಖೆಯ ಸಕ್ರಿಯತೆ ಅಗತ್ಯವಾಗಿದೆ.

ಹೀಗಾಗಿ ಈ ವಿಷಯವನ್ನು ರಾಜಕೀಯ ವಾದ-ಪ್ರತಿವಾದದ ದೃಷ್ಟಿಯಿಂದ ನೋಡುವುದಕ್ಕಿಂತ, ಮುಂಗಾರು ಹಂಗಾಮಿನಲ್ಲಿ ರೈತರ ಹಿತದೃಷ್ಟಿಯಿಂದ ನೋಡುವುದು ಮುಖ್ಯ. ಕೃಷಿ ಕ್ಷೇತ್ರವು ರಾಜ್ಯದ ಆರ್ಥಿಕತೆಯ ಪ್ರಮುಖ ಆಧಾರವಾಗಿರುವುದರಿಂದ ಇಲಾಖೆಯ ನಾಯಕತ್ವದ ಪ್ರಶ್ನೆ ಮಹತ್ವ ಪಡೆಯುತ್ತದೆ.

Union Minister Pralhad Joshi has urged the Karnataka government to immediately appoint a full-time Agriculture Minister, citing concerns over deficient monsoon rainfall and the need for better preparedness to handle potential water and fodder shortages. He stressed that effective agricultural administration is crucial during the ongoing weather uncertainty.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

5 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

12 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

23 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago