Advertisement
MIRROR FOCUS

ದ ಕ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಸ್ತ್ರೀರೋಗ, ಅರಿವಳಿಕೆ, ಮಕ್ಕಳ ತಜ್ಞರ ಶೀಘ್ರ ನೇಮಕ

Share

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ ತಲಾ ಇಬ್ಬರಂತೆ ಸ್ತ್ರೀರೋಗ, ಅರಿವಳಿಕೆ ಹಾಗೂ ಮಕ್ಕಳ ತಜ್ಞರನ್ನು ಕಡ್ಡಾಯಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೆಚ್ಚಿನ ಒತ್ತಡ ಇಲ್ಲದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿನ  ತಜ್ಞರನ್ನು ತಾಲೂಕು ಆಸ್ಪತ್ರೆಗಳಿಗೆ ವರ್ಗಾಯಿಸುವ ಮೂಲಕ ತಾಲೂಕು ಆಸ್ಪತ್ರೆಗಳನ್ನು ಬಲಪಡಿಸಲಾಗುವುದು. ಅರಿವಳಿಕೆ ಹಾಗೂ ಸ್ತ್ರೀರೋಗ ತಜ್ಞರು ತಲಾ ಇಬ್ಬರು ಇದ್ದಲ್ಲಿ ದಿನದ 24 ಗಂಟೆಯೂ ಸೇವೆ ನೀಡಲು ಸಾಧ್ಯವಾಗಲಿದೆ ಎಂದರು. ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ನೂತನವಾಗಿ ಸಿದ್ಧಗೊಂಡಿರುವ ಕ್ಯಾಥ್‌ಲ್ಯಾಬ್ ಶೀಘ್ರವಾಗಿ ಕಾರ್ಯಾರಂಭಿಸಲಿದೆ. ಇಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಆಂಜಿಯೋಪ್ಲಾಸ್ಟಿ ಮೂಲಕ ಸ್ಟಂಟ್ ಅಳವಡಿಕೆ ಸೇರಿದಂತೆ ಹೃದ್ರೋಗ ಶಸ್ತ್ರ ಚಿಕಿತ್ಸೆಗಳು ಉಚಿತವಾಗಿರಲಿದೆ ಎಂದು ಅವರು ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

20 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

20 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago