ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ

December 29, 2025
6:54 AM

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳಸೂತ್ರ ಹಾಗೂ ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಾಧಿಕಾರಿ  ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು ಹದಿಮೂರು ಸಾವಿರ ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು 2026ರ ಏಪ್ರಿಲ್ 25 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ. 9663464648, 8147263422

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror