ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಕಾರಣದಿಂದ ದೇಶದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗದು, ಈ ಬಗ್ಗೆ ಆತಂಕ ಅಗತ್ಯವಿಲ್ಲ ಎಂದು ಅಡಿಕೆ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ, ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
Advertisement
ಭೂತಾನ್ ದೇಶದಿಂದ ಅಡಿಕೆ ಆಮದು ಹೆಸರಲ್ಲಿ ಕೆಲವರು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಈ ಹಿಂದೆ ಮಾಡಿರುವ ಒಪ್ಪಂದದ ಪ್ರಕಾರ ಈಗ ಅಡಿಕೆ ಆಮದು ಮಾಡಿಕೊಳ್ಳಲು ಕಾರಣವಾಗುತ್ತಿದೆ. ಭೂತಾನ್ ಜೊತೆ ನಾವು ಉತ್ತಮ ಸಂಬಂಧ ಇಟ್ಟಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.
Advertisement
ಭೂತಾನ್ ದೇಶದವು ಚೀನಾ ಪಕ್ಕದಲ್ಲಿ ಇರುವ ರಾಷ್ಟ್ರ. ಈ ದೇಶದ ಜೊತೆ ಉತ್ತಮ ಸಂಬಂಧ ಅಗತ್ಯವಿದೆ. ಒಣ ಅಡಿಕೆ ಮತ್ತು ಅದರ ಉಪ ಉತ್ಪನ್ನಗಳನ್ನು ಅಲ್ಲಿಗೆ ರಪ್ತು ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಹಾಗಾಗಿ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement