ಭೂತಾನ್‌ನಿಂದ ಅಡಿಕೆ ಆಮದು | ತಕ್ಷಣವೇ ಆಮದು ಆದೇಶ ರದ್ದತಿಗೆ ಅಡಿಕೆ ಬೆಳೆಗಾರರ ಸಂಘ ಒತ್ತಾಯ

September 30, 2022
11:43 AM
ಭೂತಾನ್‌ನಿಂದ 17000 ಟನ್‌ ಹಸಿ ಅಡಿಕೆಯನ್ನು ಯಾವುದೇ ನಿರ್ಬಂಧ ಇಲ್ಲದೆಯೇ ಆಮದಿಗೆ ಕೇಂದ್ರ ಸರ್ಕಾರವು ಡಿಜಿಎಫ್‌ಟಿ ಅನುಮತಿ ನೀಡಿರುವುದು  ಬೆಳಕಿಗೆ ಬಂದಿದೆ. ದೇಶದ ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ತಕ್ಷಣವೇ ಈ ಅನುಮತಿಯನ್ನು ರದ್ದು ಮಾಡಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ    ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಭೂತಾನ್‌ ಮೂಲಕ ಸದ್ಯ ಅಡಿಕೆ ಆಮದು ಕಾರಣದಿಂದ ಇಲ್ಲಿನ ಅಡಿಕೆ ಮಾರುಕಟ್ಟೆಗೆ  , ಅಡಿಕೆ ಬೆಳೆಗೆ ಯಾವುದೇ ಪರಿಣಾಮ ಬೀರದು. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆಯ ಮೇಲೆ, ಅಡಿಕೆ ಬೆಳೆಗಾರರ ಮೇಲೆ ವಿವಿಧ ರೀತಿಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇಲ್ಲಿ ಹಸಿ ಅಡಿಕೆ ಅಥವಾ ಚಾಲಿ ಅಡಿಕೆ ಅಥವಾ ದ್ವಿತೀಯ ದರ್ಜೆಯ ಅಡಿಕೆ ಎಂಬುದರ ಬದಲಾಗಿ ಅಡಿಕೆ ಆಮದು ಯಾವುದೇ ವಿಧದಿಂದ ಆದರೂ ಬೇರೆ ಬೇರೆ ಕಾರಣಗಳಿಂದ ದೇಶದ ಅಡಿಕೆ ಬೆಳೆಗಾರರಿಗೆ ಹಾನಿ ಇದೆ. ಹೀಗಾಗಿ ಅಡಿಕೆ ಆಮದು ಯಾವುದೇ ಕಾರಣದಿಂದ ನಡೆಯಬಾರದು. ಇದರ ಜೊತೆಗೆ ಅಡಿಕೆ ಆಮದು ಕನಿಷ್ಟ ಧಾರಣೆ 350 ರೂಪಾಯಿ ನಿಗದಿ ಮಾಡಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸುತ್ತದೆ ಎಂದು ಅಶೋಕ್‌ ಕಿನಿಲ  ಹೇಳಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror