Advertisement
MIRROR FOCUS

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

Share

ಅಡಿಕೆ ಎಲೆಚುಕ್ಕಿ ರೋಗಕ್ಕೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ವಿಧಾನಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅಧಿವೇಶನದಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ………ಮುಂದೆ ಓದಿ……..

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ವಿಪರೀತವಾಗಿ ಬಾಧಿಸಿದೆ. ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಈ ಬಗ್ಗೆ ವಿಧಾನಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅಧಿವೇಶನದಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ರೋಗಗಳಿಗೆ ಔಷಧಿ ಹಾಗೂ ಸೂಕ್ತ ಪರಿಹಾರ ನೀಡುವ ಪ್ರಸ್ತಾವನೆಯ ಬಗ್ಗೆ ಕೇಳಿದ್ದಾರೆ. ಸರ್ಕಾರದ ಮುಂದೆ ಯಾವುದೇ ಪ್ರತ್ಯೇಕ ಪರಿಹಾರ ನೀಡುವ ಪ್ರಸ್ತಾವನೆ ಇಲ್ಲ ಎಂದು ಸರ್ಕಾರ ಸ್ಫಷ್ಟಪಡಿಸಿದೆ.

ಆದರೆ, ಎಲೆಚುಕ್ಕೆ ರೋಗಕ್ಕೆ ಸರ್ಕಾರವು 2023-24ನೇ ಸಾಲಿನಲ್ಲಿ ರೈತರಿಗೆ ಪ್ರತಿ ಹೆಕ್ಟೇ‌ರ್ ಗೆ  4000 ರೂಪಾಯಿ  ಗರಿಷ್ಠ ರೂ.6000 ಮೊತ್ತದ ಸಸ್ಯ ಸಂರಕ್ಷಣಾ ಔಷಧಿಗಳನ್ನು 6250 ಹೆಕ್ಟೇರ್ ಪ್ರದೇಶಕ್ಕೆ ವಿತರಿಸಲಾಗಿದೆ. ಸುಮಾರು 250 ಲಕ್ಷಗಳ ಅನುದಾನವನ್ನು 12,300 ಅಡಿಕೆ ಬೆಳೆಗಾರರಿಗೆ ಸಹಾಯಧನವನ್ನು ನೀಡಲಾಗಿರುತ್ತದೆ ಎಂದು ಉತ್ತರದಲ್ಲಿ ಸರ್ಕಾರ ತಿಳಿಸಿದೆ. ಅಡಿಕೆ ಎಲೆಚುಕ್ಕೆ ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕಾರ್ಯಾಗಾರಗಳು ಹಾಗೂ ಪ್ರಾತ್ಯಕ್ಷತೆಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದೂ ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ. ತಜ್ಞರು ನೀಡಿರುವ ಶಿಫಾರಸುಗಳನ್ನು ಹಾಗೂ ಔಷಧಿಗಳನ್ನು ಕೃಷಿಕರಿಗೆ ಇಲಾಖೆಗಳ ಮೂಲಕ ನೀಡಲಾಗುತ್ತಿದೆ.

ಎಲೆಚುಕ್ಕಿ ರೋಗದಿಂದ ಪೀಡಿತವಾಗಿರುವ 53977 ಹೆಕ್ಟೇರ್‌ ಪ್ರದೇಶಕ್ಕೆ 225 ಕೋಟಿ ರೂಪಾಯಿ ಪ್ರಸ್ತಾವನೆ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ.ಕೇಂದ್ರ ಹಾಗೂ ರಾಜ್ಯ ಅನುದಾನ 60:40  ಅನುಪಾತದಲ್ಲಿದ್ದು ಈ ಕಾರ್ಯಕ್ರಮವು 2 ವರ್ಷಗಳ ಅವಧಿಯದ್ದಾಗಿರುತ್ತದೆ ಎಂದು ಉತ್ತರದಲ್ಲಿ ಸಚಿವರು ಉಲ್ಲೇಖಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ  3700 ಲಕ್ಷ ರೂಪಾಯಿ ಅನುದಾನ  ಅನುಷ್ಠಾನಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಅಡಿಕ ಎಲೆಚುಕ್ಕೆ ರೋಗದ ನಿಯಂತ್ರಣ ಕುರಿತು ಸಂಶೋಧನೆ ಕೈಗೊಳ್ಳಲು ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯ ಶಿವಮೊಗ್ಗ ಇವರಿಗೆ 43.61 ನೀಡಲಾಗಿದ್ದು ಲಕ್ಷಗಳ ಅನುದಾನ ನೀಡಲಾಗಿತ್ತು ಸಂಶೋಧನೆಯು ಪ್ರಗತಿಯಲ್ಲಿರುತ್ತದೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.

ಉತ್ತರದ ಬಳಿಕ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ, ಉತ್ತರ ತೃಪ್ತಿದಾಯಕವಲ್ಲ, ಅಡಿಕೆ ಬೆಳೆಗಾರರಿಗೆ ಉಪಯೋಗದ ದೃಷ್ಟಿಯಿಂದ ಈ ಅಂಶಗಳು ಅನುಷ್ಟಾನವು ಸರಿಯಾಗಿ ಆಗಿಲ್ಲ ಎಂದು ಹೇಳಿದ್ದಾರೆ. ಆಗಸ್ಟ್ – ಸೆಪ್ಟೆಂಬರ್ ಅವಧಿಯಲ್ಲಿ ಗುಣಮಟ್ಟದ ಸುಣ್ಣದ ಲಭ್ಯತೆಗೆ ಆದ್ಯತೆ ನೀಡಬೇಕು ಹಾಗೂ ಡಿಸೀಸ್‌ ಫಾರ್ಕಾಸ್ಟ್‌ (ರೋಗ ಮುನ್ಸೂಚನೆ) ಅಂದರೆ ಯಾವ ಸಮಯದಲ್ಲಿ ರೋಗ ಬರಬಹುದು, ಅಡಿಕೆ ಬೆಳೆಗಾರರು ಯಾವಾಗ ಔಷಧಿ ಸಿಂಪಡಣೆಗೆ ಸಿದ್ಧರಾಗಬೇಕು ಎನ್ನುವುದರ ಮಾಹಿತಿಯನ್ನು ನೀಡುವ ಕೆಲಸ ಇಲಾಖೆಗಳು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ ಹವಾಮಾನದಲ್ಲಿ ರೋಗ ಉಲ್ಭಣವಾಗುತ್ತದೆ, ರೋಗ ಬರುವ ಸಾಧ್ಯತೆ ಇದೆ ಎನ್ನುವ ರೋಗ ಮಾಹಿತಿ ನೀಡುವ ಕೆಲಸ ಸರ್ಕಾರ ಇಲಾಖೆಗಳ ಮೂಲಕ‌ ಮುಂಚಿತವಾಗಿ ಮಾಡಬೇಕು ಎಂದು ಒತ್ತಾಯಿಸಿ ಈ ಬಗ್ಗೆ ಸುದೀರ್ಘ ಚರ್ಚೆ ಅಗತ್ಯ ಇದೆ ಎಂದು ಸದನದಲ್ಲಿ ಒತ್ತಾಯಿಸಿದರು.

During the session, MLC Kishore Kumar Botyadi urged the government to conduct disease forecasting in order to understand the prognosis of arecanut leaf Spot disease.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

21 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago