Advertisement
MIRROR FOCUS

ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ

Share

 ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ”ARECANUT” ಬಿಡುಗಡೆ ಸಮಾರಂಭ ಬುಧವಾರ ನಡೆಯಿತು.

 ‘Areca Nut: History, Constituents, Cancer & Beyond’ ಎಂಬ ಅಡಿಕೆಯ ವೈಜ್ಞಾನಿಕ ಸಂಶೋಧನಾ ಪುಸ್ತಕವನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NITK) ನಿರ್ದೇಶಕರಾದ ಪ್ರೊ. ಬಿ. ರವಿ ಅವರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು. ಅಡಿಕೆಯ ಸಂಶೋಧನೆಗಳಿಗೆ ಬೆಂಬಲ ನೀಡುವುದಾಗಿ ಹೇಳಿದರು.

ಕ್ಯಾಂಪ್ಕೊ ಅಧ್ಯಕ್ಷರಾದ ಎಸ್.ಆರ್. ಸತೀಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಸಹಪ್ರಾಧ್ಯಾಪಕರಾದ ಪ್ರೊ. ವಿಘ್ನೇಶ್ವರ ವರ್ಮುಡಿ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾದ ಮಹೇಶ್ ಪುಚ್ಚಪ್ಪಾಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ಪುಸ್ತಕವನ್ನು NITK ರಾಸಾಯನಿಕ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಮತ್ತು ಜೀವರಾಸಾಯನಿಕ ತಜ್ಞರಾದ ಡಾ. ಪ್ರಸನ್ನ ಬೇಳೂರು ಬರೆದಿದ್ದು, ಅಡಿಕೆಯ ವೈಜ್ಞಾನಿಕ, ಐತಿಹಾಸಿಕ ಮತ್ತು ಸಾಮಾಜಿಕ-ಆರ್ಥಿಕ ಮಹತ್ವವನ್ನು ಸಮಗ್ರವಾಗಿ ಅಧ್ಯಯನ ಮಾಡಿ ಇಲ್ಲಿ ದಾಖಲಿಸಿದ್ದಾರೆ.

ಅಡಿಕೆ ಶತಮಾನಗಳಿಂದ ಭಾರತ ಮತ್ತು ಆಗ್ನೇಯ ಏಷ್ಯಾದ ಸಂಸ್ಕೃತಿಯೊಂದಿಗೆ ಆಳವಾಗಿ ಬೆಸೆದುಕೊಂಡಿದ್ದು, ಧಾರ್ಮಿಕ ಆಚರಣೆಗಳು, ಸಾಮಾಜಿಕ ಪದ್ಧತಿಗಳು ಮತ್ತು ಗ್ರಾಮೀಣ ಆರ್ಥಿಕತೆಯ ಪ್ರಮುಖ ಭಾಗವಾಗಿದೆ. ಭಾರತ, ಚೀನಾ ಮತ್ತು ಇತರ ದೇಶಗಳಲ್ಲಿ ಲಕ್ಷಾಂತರ ರೈತರ ಜೀವನೋಪಾಯಕ್ಕೆ ಅಡಿಕೆ ಆಧಾರವಾಗಿದೆ. ಪುಸ್ತಕದಲ್ಲಿ ಕರ್ನಾಟಕ ಸೇರಿದಂತೆ ಅಡಿಕೆ ಉತ್ಪಾದನಾ ಪ್ರದೇಶಗಳಲ್ಲಿ ಅಡಿಕೆಯು ಕೃಷಿ ವ್ಯವಸ್ಥೆ, ವ್ಯಾಪಾರ ಮಾರ್ಗಗಳು ಮತ್ತು ಪ್ರಾದೇಶಿಕ ಆರ್ಥಿಕತೆಯನ್ನು ಹೇಗೆ ರೂಪಿಸಿದೆ ಎಂಬುದನ್ನು ವಿವರಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಪುಸ್ತಕದಲ್ಲಿ ಅಡಿಕೆಯಲ್ಲಿರುವ ಪ್ರಮುಖ ರಾಸಾಯನಿಕ ಘಟಕಗಳಾದ ಅರೆಕೊಲಿನ್, ಪಾಲಿಫಿನಾಲ್ಸ್, ಫ್ಲೇವನಾಯ್ಡ್ಸ್ ಮತ್ತು ಇತರ ಜೈವಿಕ ಸಕ್ರಿಯ ಸಂಯುಕ್ತಗಳ ಬಗ್ಗೆ ವಿವರಿಸಲಾಗಿದೆ. ಈ ಸಂಯುಕ್ತಗಳು ಆರೋಗ್ಯದ ಮೇಲೆ ಬೀರುವ ಪರಿಣಾಮಗಳ ಕುರಿತು ಜಾಗತಿಕ ಅಧ್ಯಯನಗಳನ್ನು ವಿಶ್ಲೇಷಿಸಲಾಗಿದೆ.

IARC ವರದಿಗಳು ಮುಖ್ಯವಾಗಿ ತೈವಾನ್ ಮತ್ತು ಚೀನಾದ ಅಧ್ಯಯನಗಳನ್ನು ಆಧರಿಸಿವೆ. ಆದರೆ ಭಾರತ ಸೇರಿದಂತೆ ಅಡಿಕೆ ಉತ್ಪಾದನಾ ದೇಶಗಳಲ್ಲಿ ಅಡಿಕೆಯನ್ನು ಬೇಯಿಸಿ ಅಥವಾ ಒಣಗಿಸಿ ಸಂಸ್ಕರಿಸಿದ ನಂತರ ಸೇವಿಸಲಾಗುತ್ತದೆ. ಸಂಶೋಧನೆಯ ಪ್ರಕಾರ ಸಂಸ್ಕರಿಸಿದ ಅಡಿಕೆಯಲ್ಲಿ ಹಾನಿಕಾರಕ ಅರೆಕೊಲಿನ್ ಪ್ರಮಾಣವು ಹಸಿ ಅಡಿಕೆಗಿಂತ 2 ರಿಂದ 7 ಪಟ್ಟು ಕಡಿಮೆಯಿರುತ್ತದೆ ಎಂದೂ ಉಲ್ಲೇಖಿಸಿದ್ದಾರೆ.

ತಾಂಬೂಲ ಸೇವನೆಯಲ್ಲಿ ಬಳಸುವ ಸುಣ್ಣವು ಅರೆಕೊಲಿನ್ ಅನ್ನು ಜಲವಿಚ್ಛೇದನದ ಮೂಲಕ ಅರೆಕಾಡಿನ್ ಆಗಿ ಪರಿವರ್ತಿಸುತ್ತದೆ ಎಂದು ವೈಜ್ಞಾನಿಕ ಅಧ್ಯಯನಗಳು ಸೂಚಿಸುತ್ತವೆ. ಅಡಿಕೆಯಲ್ಲಿ ಕಂಡುಬರುವ ಟ್ಯಾನಿನ್ ಮತ್ತು ಇತರ ಫೈಟೋಕೆಮಿಕಲ್ಸ್‌ಗಳು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿವೆ ಎಂದು ಅಧ್ಯಯನಗಳು ತಿಳಿಸಿವೆ.  ಅಡಿಕೆಯ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಮೂಡುವುದಕ್ಕೆ ಪ್ರಮುಖ ಕಾರಣ ತಂಬಾಕು ಮಿಶ್ರಿತ ಉತ್ಪನ್ನಗಳಾದ ಗುಟ್ಕಾ ಮತ್ತು ತಂಬಾಕು ಬಳಕೆ ಎಂದು ಲೇಖಕರು ಅಭಿಪ್ರಾಯಪಟ್ಟಿದ್ದಾರೆ. ಮಿತ ಸೇವನೆಯ ಶುದ್ಧ ಅಡಿಕೆ ಕ್ಯಾನ್ಸರ್‌ಗೆ ನೇರ ಕಾರಣವಲ್ಲ ಎಂಬ ವೈಜ್ಞಾನಿಕ ದೃಷ್ಟಿಕೋನವನ್ನು ಪುಸ್ತಕ ಮಂಡಿಸುತ್ತದೆ.

ಅಡಿಕೆ ಕುರಿತ ವೈಜ್ಞಾನಿಕ ತಿಳುವಳಿಕೆಯನ್ನು ಹೆಚ್ಚಿಸುವ ಸಂಶೋಧನೆ ಮತ್ತು ಜಾಗೃತಿ ಕಾರ್ಯಕ್ರಮಗಳಿಗೆ ಕ್ಯಾಂಪ್ಕೊ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಇದೇ ವೇಳೆ ಹೇಳಿದರು.

ಕಾರ್ಯಕ್ರಮದಲ್ಲಿ ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಬಿ.ವಿ. ಸತ್ಯನಾರಾಯಣ ಸ್ವಾಗತಿಸಿ  ಡೆಪ್ಯುಟಿ ಜನರಲ್ ಮ್ಯಾನೇಜರ್ ಶ್ಯಾಮ್ ವಂದನಾರ್ಪಣೆ ಮಾಡಿದರು. ಜಯ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

The book “Areca Nut: History, Constituents, Cancer & Beyond” authored by NITK professor Dr Prasanna Belur was released at CAMPCO headquarters, Mangalore. The book presents scientific, historical, and socio-economic perspectives on areca nut and highlights research findings on its chemical constituents, health effects, and global studies. CAMPCO reaffirmed its support for scientific awareness and research on areca nut.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

7 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

8 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

8 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

16 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

1 day ago