Advertisement
MIRROR FOCUS

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

Share

ಅಸ್ಸಾಂ ರೈಫಲ್ಸ್‌ ಹಾಗೂ ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್ ತಂಡವು ಮಿಜೋರಾಂದಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣವನ್ನು ಪತ್ತೆ ಮಾಡಿದೆ. ಚಂಪೈ ಲ್ಲೆಯ ರುವಾಂಟ್ಲಾಂಗ್ ಪ್ರದೇಶದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ,  98 ಚೀಲದಲ್ಲಿ ಸುಮಾರು 7,840 ಕೆಜಿಯ  ಅಂದಾಜು ಮೌಲ್ಯ ₹54.88 ಲಕ್ಷದ ಅಡಿಕೆಯನ್ನು ವಶಕ್ಕೆ ಪಡೆದಿದೆ.

ಈ ಕಾರ್ಯಾಚರಣೆ ಇಂಡೋ-ಮ್ಯಾನ್ಮಾರ್ ಗಡಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಸಾಗಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮವನ್ನು ಸಾಬೀತುಪಡಿಸಿದೆ. ಪತ್ತೆಯಾದ ಅಡಿಕೆಯನ್ನು ಕಸ್ಟಮ್ಸ್ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಪ್ರಕರಣದ ಕುರಿತು ತನಿಖೆ ಹಾಗೂ ಕಾನೂನು ಕ್ರಮಗಳು ಮುಂದುವರಿದಿವೆ.

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಡಿಕೆ ಕಳ್ಳಸಾಗಣೆ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಇದು ದೇಶೀಯ ಮಾರುಕಟ್ಟೆ ಬೆಲೆಗಳ ಮೇಲೆ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಕರ್ನಾಟಕದ ಅಡಿಕೆ ರೈತರಿಗೆ ಬೆಲೆ ಅಸ್ಥಿರತೆ, ಮಾರುಕಟ್ಟೆ ಒತ್ತಡಕ್ಕೆ ಕಾರಣವಾಗುತ್ತಿದೆ.  ಇಂತಹ ಕಾರ್ಯಾಚರಣೆಗಳು ಕಳ್ಳಸಾಗಣೆ ನಿಯಂತ್ರಣಕ್ಕೆ ನೆರವಾಗುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಳೆದ ಎರಡು ವಾರಗಳಿಂದ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ವಾರ ದೋಣಿಯ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಪತ್ತೆಯಾಗಿತ್ತು. ಇದೇ ಸಮಯಕ್ಕೆ ಅಡಿಕೆ ಧಾರಣೆ ಕೂಡಾ ಏರಿಳಿತ ಕಾಣುತ್ತಿದೆ.

Assam Rifles, along with the Customs Preventive Force, seized 98 bags of areca nuts weighing 7,840 kg worth ₹54.88 lakh in Champhai district of Mizoram. The operation reflects ongoing efforts to curb illegal smuggling along the Indo-Myanmar border.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

2 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

10 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

14 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

2 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

3 days ago