ಅಡಿಕೆ ಹಾನಿಕಾರಕವಲ್ಲ‌ | ಅಡಿಕೆ ಆಮದು ದರ ಏರಿಕೆ | ಅಡಿಕೆ ಟಾಸ್ಕ್‌ ಫೋರ್ಸ್‌ ಸಭೆಯಲ್ಲಿ ಚರ್ಚೆ|

Advertisement
Advertisement

ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಟಾಸ್ಕ್‌ಫೋರ್ಸ್‌ ಸಭೆ ನಡೆಯಿತು. ಈ ಸಭೆಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಆರೋಗ್ಯ ವರ್ಧಕ ಉತ್ಪನ್ನವೆಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿಪಾದಿಸುವ ಹಾಗೂ ಸಂಶೋಧನಾ ವರದಿ ಸಲ್ಲಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದೇ ವೇಳೆ ಅಡಿಕೆ ಆಮದು ದರ ಏರಿಕೆ ಬಗ್ಗೆಯೂ ಚರ್ಚೆ ನಡೆಯಿತು.

Advertisement

ಆಮದು ಅಡಿಕೆಗೆ ದರವನ್ನು ಕಿಲೋಗೆ 309 ಹಾಗೂ 409 ರೂ. ಕೇಂದ್ರ ಸರ್ಕಾರ ಹೆಚ್ಚಿಸಲು ಕ್ರಮ ಆಗಬೇಕಿದೆ. ಆಮದಾಗುವ ವಿದೇಶಿ ಅಡಿಕೆಯ ಗುಣಮಟ್ಟ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಮನವರಿಕೆ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂಬಂಧ ಕೇಂದ್ರಕ್ಕೆ ತಿಳಿಸಲು ಸಂಸದರನ್ನೊಳಗೊಂಡ ನಿಯೋಗ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದು ಟಾಸ್ಕ್‌ ಫೋರ್ಸ್‌ ಅಧ್ಯಕ್ಷ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶೃಂಗೇರಿ, ತೀರ್ಥಹಳ್ಳಿ, ಕೊಪ್ಪ ತಾಲೂಕಿನಲ್ಲಿ ಎಲೆ ಚುಕ್ಕೆ ರೋಗ ವ್ಯಾಪಕವಾಗಿ ಹಬ್ಬುತ್ತಿದ್ದು, ಅಧಿಕಾರಿಗಳು ಹಾಗೂ ಸಂಶೋಧಕರು, ರೈತರ ಬಳಿ ತೆರಳಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದು ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

Advertisement
Advertisement

ಸಭೆಯಲ್ಲಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಕೆಆರ್‌ಎಎಂ ಅಧ್ಯಕ್ಷ  ಮಂಜಪ್ಪ, ತೋಟಗಾರಿಕೆ ಬೆಳೆ ಸಂಶೋಧನಾ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಪಿ.ಚೌಡಪ್ಪ , ಮ್ಯಾಮ್ಕೋಸ್ ಉಪಾಧ್ಯಕ್ಷ ಸುಬ್ರಹ್ಮಣ್ಯ ವೈ.ಎಸ್, ಪತ್ರಕರ್ತರಾದ ಹರಿಪ್ರಕಾಶ್ ಕೋಣೆಮನೆ, ತೋಟಗಾರಿಕೆ ಇಲಾಖೆ ನಿರ್ದೇಶಕ ನಾಗೇಂದ್ರ ಪ್ರಸಾದ್ ಹಾಜರಿದ್ದರು.

 

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಅಡಿಕೆ ಹಾನಿಕಾರಕವಲ್ಲ‌ | ಅಡಿಕೆ ಆಮದು ದರ ಏರಿಕೆ | ಅಡಿಕೆ ಟಾಸ್ಕ್‌ ಫೋರ್ಸ್‌ ಸಭೆಯಲ್ಲಿ ಚರ್ಚೆ|"

Leave a comment

Your email address will not be published.


*