Advertisement
ಸುದ್ದಿಗಳು

ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಲು ಅಡಿಕೆ ಬೆಳೆಗಾರರ ಸಂಘ ಒತ್ತಾಯ

Share

ಈಚೆಗೆ ಜಾರ್ಖಂಡ್‌ ಸಂಸದ ನಿಶಿಕಾಂತ್‌ ಅವರು  ‘ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಹಾನಿಕಾರಕ’ ಎಂದು ಹೇಳಿರುವುದು  ಖಂಡಿನೀಯ. ಕಳೆದ ಹಲವು ವರ್ಷಗಳಿಂದ ಇಂತಹ ಹೇಳಿಕೆಗಳು ಆಗಾಗ ಕೇಳಿಬರುತ್ತಿದೆ. ಭಾರತೀಯ ಪರಂಪರೆಯಲ್ಲಿ ಅಡಿಕೆಯು ಪರಂಪರಾಗತವಾಗಿ ಬಳಕೆಯಾಗುತ್ತಿದೆ. ಅನ್ಯಾನ್ಯ ವೈಜ್ಞಾನಿಕ ವರದಿಗಳು ‘ಅಡಿಕೆ ಮಾತ್ರವೇ ಹಾನಿಕಾಕರವಲ್ಲ’ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ವರದಿಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ‘ವೈಜ್ಞಾನಿಕವಾದ ಸಂಶೋಧನೆ’ ನಡೆಯಬೇಕು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ.

ಭಾರತದಲ್ಲಿ ಸುಮಾರು ಐದರಿಂದ ರಿಂದ ಆರು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ  ಅಡಿಕೆಯನ್ನು ಬೆಳೆಯಲಾಗುತ್ತಿದೆ.  ಏಳರಿಂದ ಎಂಟು ಲಕ್ಷ ಮೆಟ್ರಿಕ್‌ ಟನ್‌ ಅಡಿಕೆ ಉತ್ಪಾದನೆಯಾಗುತ್ತಿದೆ.  ದೇಶದಲ್ಲಿ  ಸುಮಾರು ಐದು ಲಕ್ಷ ಕೃಷಿಕರು ಅಡಿಕೆಯನ್ನೇ ನಂಬಿ ಬದುಕುತ್ತಿದ್ದಾರೆ. ಇಷ್ಟು ಮಾತ್ರವಲ್ಲ, ಅಡಿಕೆ ಮಾರುಕಟ್ಟೆಯ ಮೂಲಕವೂ ಲಕ್ಷಾಂತರ ಮಂದಿ ಬದುಕು ಸಾಗಿಸುತ್ತಿದ್ದಾರೆ. ದೇಶದಲ್ಲಿ  ಕರ್ನಾಟಕ ಹಾಗೂ ಕೇರಳದಲ್ಲಿ  ಅಡಿಕೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಕರ್ನಾಟಕದ ಶೇ 60 ಭಾಗದಲ್ಲಿ ಅಡಿಕೆ ಬೆಳೆಯು ವಿಸ್ತಾರಗೊಂಡಿದೆ. ಅಡಿಕೆಯಿಂದಾಗಿ ಸರಕಾರಕ್ಕೂ ತೆರಿಗೆ ಹಾಗೂ ಇತರ ಮೂಲಗಳಿಂದ ಆದಾಯವೂ ಸಂದಾಯವಾಗುತ್ತಿದೆ.

ಇದೀಗ ‘ಅಡಿಕೆ ಹಾನಿಕಾರಕ’ ಎನ್ನುವ ವರದಿಗಳಿಂದ ಅಡಿಕೆ ಬೆಳೆಗಾರರು ಗೊಂದಲಕ್ಕೀಡಾಗಿದ್ದಾರೆ. ಕೃಷಿ ಬದುಕಿನ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ.  ಹೀಗಾಗಿ ಸರಕಾರವು ಮಧ್ಯಪ್ರವೇಶ ಮಾಡಿ ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಬೇಕು ಎಂದು ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸುತ್ತದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಅಧ್ಯಕ್ಷ ಅಶೋಕ್‌ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

3 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

4 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

4 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

14 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

21 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

22 hours ago