ಅಡಿಕೆ ಬೆಳೆಗಾರರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಡಿಕೆ ಕೃಷಿಕರೂ ಆಗಿರುವ ಗೃಹಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ಇದನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಕೃಷಿಕರು ಯಾವುದೇ ಗೊಂದಲ ಪಡುವುವುದು ಬೇಡ, ಬೆಳೆಗಾರರ ಪರವಾಗಿ ಸರ್ಕಾರ ಇದೆ ಎಂದು ಸಚಿವ ಎಸ್ ಅಂಗಾರ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಡಿಕೆ ಕೃಷಿಗೆ ಭವಿಷ್ಯವಿಲ್ಲ ಎಂದು ಗೃಹ ಸಚಿವರು ಹೇಳಿರುವ ಹೇಳಿಕೆಯನ್ನು ಕೆಲವು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಕಾಂಗ್ರೆಸ್ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ. ಕೃಷಿಕರಲ್ಲಿ ಗೊಂದಲ ಮೂಡಿಸುತ್ತಿದೆ. ಅಡಿಕೆ ಬೆಳೆಗಾರರ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡೇ ಸಚಿವರು ಹೇಳಿಕೆ ನೀಡಿದ್ದಾರೆ. ಕೆಲವು ರಾಜ್ಯಗಳಲ್ಲಿ ಒಂದೇ ಬೆಳೆಯನ್ನು ಬೆಳೆಯಲು ಅವಕಾಶ ಇಲ್ಲ, ಆಯಾ ಪ್ರದೇಶಕ್ಕೆ ಅನುಗುಣವಾಗಿ ಬೆಳೆ ಬದಲಾವಣೆ ಆಗುತ್ತದೆ ಎಂದ ಸಚಿವರು ಅಡಿಕೆ ಅಭಿವೃದ್ಧಿ, ಸಂಶೋಧನೆಗೆ ಸರ್ಕಾರ ನೆರವು ನೀಡುತ್ತಿದೆ. ಅಡಿಕೆಯ ಧಾರಣೆಯನ್ನು ಉಳಿಸಿಕೊಳ್ಳುವ ಅಗತ್ಯ ಇದೆ. ಸರ್ಕಾರಕ್ಕೂ ಜವಾಬ್ದಾರಿ ಇದೆ ಎಂದರು.