ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

July 31, 2026
9:45 AM
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು ರಾತ್ರಿ ತೋಟಗಳಿಗೆ ಕಾವಲು ಕಾಯುವ ಪರಿಸ್ಥಿತಿ ಎದುರಾಗಿದೆ.

ಅಡಿಕೆಗೆ ಉತ್ತಮ ಬೆಲೆ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸುತ್ತಮುತ್ತ ಅಡಿಕೆ ತೋಟಗಳಲ್ಲಿ ಹೊಂಬಾಳೆ (ಅಡಿಕೆ ಸಿಂಗಾರ) ಕಳ್ಳತನ ಹೆಚ್ಚಾಗಿದೆ. ಇಳುವರಿಗೆ ಸಿದ್ಧವಾಗಿರುವ ಹಿಂಗಾರವನ್ನು ರಾತ್ರಿ ವೇಳೆ ಕಳ್ಳರು ಕತ್ತರಿಸಿ ಕೊಂಡೊಯ್ಯುತ್ತಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ರೈತರು ಹಲವು ತಿಂಗಳುಗಳ ಶ್ರಮದಿಂದ ಬೆಳೆದ ಬೆಳೆಯನ್ನು ಕೆಲವೇ ನಿಮಿಷಗಳಲ್ಲಿ ಕಳ್ಳರು ದೋಚಿಕೊಂಡು ಹೋಗುತ್ತಿರುವುದರಿಂದ ಆರ್ಥಿಕ ನಷ್ಟ ಮಾತ್ರವಲ್ಲ, ಮಾನಸಿಕ ಆತಂಕವೂ ಹೆಚ್ಚುತ್ತಿದೆ. ಹಲವು ತೋಟಗಳಲ್ಲಿ ಒಂದೇ ರಾತ್ರಿ ನೂರಾರು ಅಡಿಕೆ ಗೊನೆಗಳು ಕಳ್ಳತನವಾಗಿರುವ ಪ್ರಕರಣಗಳು ವರದಿಯಾಗಿದ್ದು, ರೈತರು ರಾತ್ರಿ ಪಾಳಿಯಲ್ಲಿ ತೋಟಗಳಿಗೆ ಕಾವಲು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಸ್ಥಳೀಯ ರೈತರು ಪೊಲೀಸ್ ಇಲಾಖೆ ರಾತ್ರಿ ಗಸ್ತು ಹೆಚ್ಚಿಸಬೇಕು ಹಾಗೂ ಕಳ್ಳತನದ ಜಾಲವನ್ನು ಪತ್ತೆಹಚ್ಚಲು ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಕಳ್ಳತನದಿಂದ ಉಂಟಾಗುತ್ತಿರುವ ನಷ್ಟವನ್ನು ತಡೆಯಲು ಗ್ರಾಮ ಮಟ್ಟದಲ್ಲಿ ನಿಗಾ ವ್ಯವಸ್ಥೆ ರೂಪಿಸುವ ಅಗತ್ಯವೂ ಎದುರಾಗಿದೆ.

Arecanut bunch thefts have become a serious concern for growers in the Doddaballapur region of Karnataka. Farmers say thieves are targeting mature arecanut bunches ready for harvest, forcing them to guard their plantations at night and demanding stronger police surveillance.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror