ಮಂಗಳೂರು: ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಕ್ಯಾಂಪ್ಕೊ ನೂತನ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅವರು ಉಡುಪಿಯ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.ಮುಖ್ಯವಾಗಿ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವಾಅಡಿಕೆ ಹಳದಿ ಎಲೆ ರೋಗ, ಅಡಿಕೆ ಮಾರುಕಟ್ಟೆಯನ್ನು ತಲ್ಲಣಗೊಳಿಸುವ ಉದ್ದೇಶದಿಂದ ನಡೆಸುವ ಕಾನೂನುಬಾಹಿರ ಚಟುವಟಿಕೆಗಳು, ಆಮದು ನಿಯಂತ್ರಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಕ್ಯಾಂಪ್ಕೋ ಸಂಸ್ಥೆಯ ಪವನ ವಿದ್ಯುತ್ ಉತ್ಪಾದನಾ ಘಟಕದ ವೀಲಿಂಗ್ ಆಂಡ್ ಬ್ಯಾಂಕಿಂಗ್ ವ್ಯವಸ್ಥೆಯ ಮುಂದುವರಿಕೆಯ ಬಗ್ಗೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪ್ಕೊ ಹಿರಿಯ ನಿರ್ದೇಶಕ ದಯಾನಂದ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.