ಅಡಿಕೆ ಬೆಳೆಗಾರರ ವಿವಿಧ ಸಮಸ್ಯೆ | ಕ್ಯಾಂಪ್ಕೋದಿಂದ ಮುಖ್ಯಮಂತ್ರಿಗಳಿಗೆ ಮನವಿ

January 18, 2021
8:38 PM

ಮಂಗಳೂರು: ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಕ್ಯಾಂಪ್ಕೊ ನೂತನ ಅಧ್ಯಕ್ಷ  ಎ.ಕಿಶೋರ್ ಕುಮಾರ್ ಕೊಡ್ಗಿ ಅವರು ಉಡುಪಿಯ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.ಮುಖ್ಯವಾಗಿ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವಾಅಡಿಕೆ ಹಳದಿ ಎಲೆ ರೋಗ, ಅಡಿಕೆ ಮಾರುಕಟ್ಟೆಯನ್ನು ತಲ್ಲಣಗೊಳಿಸುವ ಉದ್ದೇಶದಿಂದ ನಡೆಸುವ ಕಾನೂನುಬಾಹಿರ ಚಟುವಟಿಕೆಗಳು, ಆಮದು ನಿಯಂತ್ರಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಕ್ಯಾಂಪ್ಕೋ ಸಂಸ್ಥೆಯ ಪವನ ವಿದ್ಯುತ್ ಉತ್ಪಾದನಾ ಘಟಕದ ವೀಲಿಂಗ್ ಆಂಡ್ ಬ್ಯಾಂಕಿಂಗ್ ವ್ಯವಸ್ಥೆಯ ಮುಂದುವರಿಕೆಯ ಬಗ್ಗೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೊ ಹಿರಿಯ ನಿರ್ದೇಶಕ ದಯಾನಂದ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?
September 29, 2026
12:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror