ಅಡಿಕೆಯು ಆರೋಗ್ಯಕ್ಕೆ ಹಾನಿಕಾರಕ ಹಾಗೂ ಕ್ಯಾನ್ಸರ್ ಕಾರಕ ಎಂಬ ಅಪವಾದಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಪ್ರತಿಷ್ಟಿತ ಸಂಸ್ಥೆಗಳಿಂದ ವೈಜ್ಞಾನಿಕ ಸಂಶೋಧನೆಯ ಅಗತ್ಯ ಇದೆ. ಈ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳು ಏನು ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಅವರು ವಿಧಾನಪರಿಷತ್‌ನಲ್ಲಿ ಪ್ರಶ್ನೆ ಕೇಳಿದ್ದರು. ಈ ಪ್ರಶ್ನೆಗೆ ಸರ್ಕಾರ, ಸಚಿವರು ನೀಡಿರುವ ಉತ್ತರ ಅಚ್ಚರಿಗೆ ಕಾರಣವಾಗಿದೆ. ಸರ್ಕಾರವು ಅಡಿಕೆ ಉತ್ಪನ್ನಗಳ ಬಗ್ಗೆ ಸಂಶೋಧನೆ ನಡೆಸಿದೆ..!. ಅದು ಅಂತರಾಷ್ಟ್ರೀಯ ಮಟ್ಟದ ಈಗಿನ ಯಾವ ಸಮಸ್ಯೆಗಳಿಗೂ ಪರಿಹಾರವೇ ಅಲ್ಲ..!
ಅಡಿಕೆಯು ಆರೋಗ್ಯಕ್ಕೆ ಹಾನಿಕಾರಕ ಹಾಗೂ ಕ್ಯಾನ್ಸರ್ ಕಾರಕ ಎಂಬ ಅಪವಾದಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆ ವತಿಯಿಂದ ಅಡಿಕೆಯ ಔಷಧೀಯ ಗುಣಗಳು ಹಾಗೂ ಆರೋಗ್ಯದ ಮೇಲೆ ಪರಿಣಾಮಗಳ ಬಗ್ಗೆ ವೈಜ್ಞಾನಿಕ ದಾಖಲೆಗಳನ್ನು ಒದಗಿಸುವ ಉದ್ದೇಶದಿಂದ ಎಂ.ಎಸ್. ರಾಮಯ್ಯ ವಿದ್ಯಾನಿಲಯ, ಬೆಂಗಳೂರು ಸಂಸ್ಥೆಯಲ್ಲಿ ಸಂಶೋಧನೆ ಕೈಗೊಳ್ಳಲಾಗಿದೆ. ಸಂಸ್ಥೆಯ ವರದಿಯ ಪ್ರಕಾರ, ಅಡಿಕೆಯು ಸ್ವತಃ ಕ್ಯಾನ್ಸರ್ ಕಾರಕವಲ್ಲ,ಮತಂಬಾಕು ಅಥವಾ ಪಾನಮಸಾಲದೊಂದಿಗೆ ಬಳಸಿದರೆ ಅಪಾಯ ಉಂಟಾಗಬಹುದು, ಮಿತ ಪ್ರಮಾಣದಲ್ಲಿ ಸೇವಿಸಿದಲ್ಲಿ ಅದು ಅಪಾಯಕಾರಿಯಲ್ಲ ಎಂದು ಹೇಳಿದೆ.
ಇದೇ ವೇಳೆ ಬಹುಸಂಸ್ಥೆಗಳನ್ನು ಒಳಗೊಂಡ ‘ಅಡಿಕೆ ಸಂಶೋಧನೆ ಮತ್ತು ಮಾನವ ಆರೋಗ್ಯ’ ಯೋಜನೆಯ ಬಗ್ಗೆ ಹಾಗೂ ಅಡಿಕೆ ಕುರಿತು ಸಾಕ್ಷ್ಯಾಧಾರ ಸಹಿತ ಸಂಶೋಧನೆ ನಡೆಸಲು ಸರ್ಕಾರವು ಬಹುಸಂಸ್ಥೆಗಳ ಸಂಯುಕ್ತ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯಲ್ಲಿ ಪ್ರಮುಖ ಸಂಸ್ಥೆಗಳು ಭಾಗವಹಿಸುತ್ತಿವೆ.
ಸದ್ಯ ಅಡಿಕೆ ಸಂಶೋಧನೆ ಪ್ರಗತಿಯಲ್ಲಿದ್ದು, ಅಡಿಕೆ ಉತ್ಪನ್ನಗಳ ಬಗ್ಗೆ ವ್ಯಾಪಕ ವೈಜ್ಞಾನಿಕ ಸಂಶೋಧನೆ ಪ್ರಸ್ತುತ ಪ್ರಗತಿಯಲ್ಲಿದೆ. ಸಂಶೋಧನೆ ಫಲಿತಾಂಶಗಳು ಮತ್ತು ದಾಖಲೆಗಳು ದೊರಕಿದ ನಂತರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಲು ಕ್ರಮವಹಿಸಲಾಗುವುದು ಎಂದು ಸರ್ಕಾರ ಉತ್ತರದಲ್ಲಿ ಹೇಳಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಅಡಿಕೆಯ ಔಷಧೀಯ ಗುಣಗಳ ಅಂತರರಾಷ್ಟ್ರೀಯ ಪ್ರಚಾರಕ್ಕೆ ಸರ್ಕಾರವು ಅಡಿಕೆಯ ಉತ್ತಮ ಗುಣಗಳನ್ನು ದಾಖಲಾತಿ ಆಧಾರದಲ್ಲಿ ಪ್ರಚಾರಗೊಳಿಸಲು ಸಂಶೋಧನೆಯನ್ನು ಮುಂದುವರಿಸಿದೆ. ಮುಖ್ಯವಾಗಿ ಅಡಿಕೆ ಉತ್ಪನ್ನಗಳ ಸಂಶೋಧನೆಯನ್ನು ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಿಂದ ಕೈಗೊಳ್ಳಲಾಗುತ್ತಿದೆ. ಅಡಿಕೆ ಸಿಪ್ಪೆಯನ್ನು ಉತ್ತಮ ಕಾಂಪೋಸ್ಟ್ ಆಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಸಾಮಾನ್ಯ ಕೊಟ್ಟಿಗೆ ಗೊಬ್ಬರಕ್ಕಿಂತ ಹೆಚ್ಚಾಗಿ ಪೌಷ್ಟಿಕಾಂಶ ಇರುವುದನ್ನು ಕಂಡುಹಿಡಿಯಲಾಗಿದೆ. ಅಡಿಕೆ ಉತ್ಪನ್ನಗಳಲ್ಲಿನ ಬಣ್ಣವನ್ನು ಜವಳಿ ಉದ್ಯಮದಲ್ಲಿ ನೈಸರ್ಗಿಕ ಬಣ್ಣದ ರೂಪದಲ್ಲಿ ಬಳಸುವ ಪ್ರಯೋಗಗಳು ನಡೆಯುತ್ತಿವೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…
ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು…