ದಕ್ಷಿಣ–ಪೂರ್ವ ಏಷ್ಯಾ ಪ್ರದೇಶದಲ್ಲಿ ಅಡಿಕೆ (Arecanut) ಬಳಕೆಯಿಂದ ಉಂಟಾಗುವ ಆರೋಗ್ಯ ಸವಾಲುಗಳು ಹಾಗೂ ಅವುಗಳನ್ನು ನಿಯಂತ್ರಿಸುವ ನೀತಿ ಹಾಗೂ ಕ್ರಮಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಚರ್ಚಿಸಲು, ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ–ಪೂರ್ವ ಏಷ್ಯಾ ಪ್ರಾದೇಶಿಕ ಕಚೇರಿ ವತಿಯಿಂದ ವಿಶೇಷ ವೆಬಿನಾರ್ ಆಯೋಜಿಸಲಾಗಿದೆ.
“Areca Nut Challenge: Turning Policy into Impact in South-East Asia” ಎಂಬ ಶೀರ್ಷಿಕೆಯಡಿ ನಡೆಯುವ ಈ ವೆಬಿನಾರ್ 2026ರ ಜನವರಿ 30ರಂದು ಬೆಳಿಗ್ಗೆ 11.00 ರಿಂದ 12.30 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ–ಪೂರ್ವ ಏಷ್ಯಾ ಪ್ರಾದೇಶಿಕ ಕಚೇರಿ (WHO-SEARO) ಯ ಆರೋಗ್ಯ ಉತ್ತೇಜನ ಹಾಗೂ ರೋಗ ತಡೆ–ನಿಯಂತ್ರಣ ಇಲಾಖೆ, ಕಿಂಗ್ಸ್ ಕಾಲೇಜಿನ ಓರಲ್ ಕ್ಯಾನ್ಸರ್ ಕುರಿತ WHO ಸಹಯೋಗ ಕೇಂದ್ರ ಹಾಗೂ ಲೇಡಿ ಹಾರ್ಡಿಂಜ್ ಮೆಡಿಕಲ್ ಕಾಲೇಜು( Lady Hardinge Medical College)ನ ದಂತ ಶಸ್ತ್ರಚಿಕಿತ್ಸೆ ಮತ್ತು OPMD ಹಬ್ ಸಹಯೋಗದಲ್ಲಿ ಆಯೋಜಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ವೆಬಿನಾರ್‌ನ ಉದ್ದೇಶಗಳು : ಅಡಿಕೆ ಬಳಕೆಯಿಂದ ಉಂಟಾಗುವ ಆರೋಗ್ಯ ಮೇಲೆ ಉಂಟಾಗುವ ಪರಿಣಾಮ ಕಡಿಮೆ ಮಾಡಲು ಜಾರಿಯಲ್ಲಿರುವ ನೀತಿ ಹಾಗೂ ಕಾರ್ಯಕ್ರಮಗಳ ಅನುಭವ ಹಂಚಿಕೆ ಹಾಗೂ ರಾಷ್ಟ್ರೀಯ ಓರಲ್ ಹೆಲ್ತ್ ಕಾರ್ಯಕ್ರಮಗಳಲ್ಲಿ ಅಡಿಕೆ ಬಳಕೆ ತಡೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಓರಲ್ ಹೆಲ್ತ್ ಕಾರ್ಯಕ್ರಮ ನಿರ್ವಾಹಕರು, NCD ಹಾಗೂ ಕ್ಯಾನ್ಸರ್ ನಿಯಂತ್ರಣ ಕಾರ್ಯಕ್ರಮಗಳ ತಂಡಗಳು ,ವೃತ್ತಿಪರ ಸಂಸ್ಥೆಗಳು, ಎನ್‌ಜಿಒಗಳು ಮತ್ತು ಆಸಕ್ತ ಆರೋಗ್ಯ ವೃತ್ತಿಪರರು ಭಾಗವಹಿಸುತ್ತಾರೆ.
ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ–ಪೂರ್ವ ಏಷ್ಯಾ ಪ್ರಾದೇಶಿಕ ಕಚೇರಿ (WHO-SEARO), ಈ ಪ್ರದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಭಾರತ ಸೇರಿದಂತೆ 11 ರಾಷ್ಟ್ರಗಳನ್ನು ಒಳಗೊಂಡ ಈ ಪ್ರಾದೇಶಿಕ ಕಚೇರಿ, ರೋಗ ನಿಯಂತ್ರಣ, ಆರೋಗ್ಯ ಜಾಗೃತಿ, ತುರ್ತು ಆರೋಗ್ಯ ಪ್ರತಿಕ್ರಿಯೆ ಹಾಗೂ ಆರೋಗ್ಯ ನೀತಿ ಮಾರ್ಗದರ್ಶನದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.
ಈ ಪ್ರಾದೇಶಿಕ ವ್ಯಾಪ್ತಿಯಲ್ಲಿ ಭಾರತ, ನೇಪಾಳ, ಬಾಂಗ್ಲಾದೇಶ, ಭೂತಾನ್, ಶ್ರೀಲಂಕಾ, ಮ್ಯಾನ್ಮಾರ್, ಥೈಲ್ಯಾಂಡ್, ಇಂಡೋನೇಷಿಯಾ, ಮಾಲ್ದೀವ್ಸ್, ಟಿಮೋರ್-ಲೆಸ್ಟೆ ಮತ್ತು ಉತ್ತರ ಕೊರಿಯಾ ಸೇರಿವೆ. ತಾಯಿ-ಮಗು ಆರೋಗ್ಯ, ಲಸಿಕೆ ಕಾರ್ಯಕ್ರಮ, ಅಸಾಂಕ್ರಾಮಿಕ ಮತ್ತು ಸಾಂಕ್ರಾಮಿಕ ರೋಗ ನಿಯಂತ್ರಣ, ಹವಾಮಾನ ಬದಲಾವಣೆ–ಆರೋಗ್ಯ ಸಂಬಂಧಿತ ಸವಾಲುಗಳು WHO-SEARO ಕಾರ್ಯಚಟುವಟಿಕೆಗಳ ಪ್ರಮುಖ ಕೇಂದ್ರೀಯ ವಿಷಯಗಳಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…
ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು…