ಪುತ್ತೂರಿನಲ್ಲಿ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ | ಅಡಿಕೆ ಬೆಳೆಗಾರರ ಪರವಾಗಿ ಧ್ವನಿ | ಶಾಸಕ ಸಂಜೀವ ಮಠಂದೂರು |

January 4, 2023
10:37 PM

ವಿಜಯಕರ್ನಾಟಕ ಪತ್ರಿಕೆ ವತಿಯಿಂದ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಉದ್ಘಾಟಿಸಿದರು.

Advertisement
Advertisement

ಕಾರ್ಯಕ್ರಮ ಉದ್ಘಾಟಿಸಿದ ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ, ಕ್ಯಾಂಪ್ಕೋ ಅಡಿಕೆ ಬೆಳೆಗಾರರ ಪರವಾಗಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದೆ. ಅಡಿಕೆ ಬೇಡಿಕೆ ಹಾಗೂ ಪೂರೈಕೆಗಳನ್ನು ಗಮನಿಸಿಕೊಂಡು ಬೆಳೆಗಾರರಿಗೆ ಸಕಾಲದಲ್ಲಿ ಎಚ್ಚರಿಕೆಯನ್ನು ನೀಡುತ್ತಾ ಬಂದಿದೆ. ಉಪಬೆಳೆಗಳ ಕಡೆಗೂ ಮಾಹಿತಿ ನೀಡುತ್ತಿದೆ. ಈಗಾಗಲೇ ಕೊಕೋ, ರಬ್ಬರ್‌ , ಕಾಳುಮೆಣಸು ಖರೀದಿ ನಡೆಸುತ್ತಿದೆ. ಮುಂದೆ ಔಷಧೀಯ ಗಿಡಗಳ ಕಡೆಗೂ ಗಮನಹರಿಸಲಿದೆ ಎಂದರು.

Advertisement

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಅಡಿಕೆ ಬೆಳೆಗಾರರು ಸಂಘಟಿತರಾಗಬೇಕು. ಆಗ ಮಾತ್ರಾ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ. ಈಗ ಅಡಿಕೆಯ ಬಗ್ಗೆ ವಿವಿಧ ಚರ್ಚೆಗಳು ನಡೆಯುತ್ತಿದೆ, ಈ ಸಮಯದಲ್ಲಿ ಅಡಿಕೆ ಬೆಳೆಗಾರರು ಒಂದಾಗಬೇಕಿದೆ ಎಂದರು.

Advertisement

ಸಭಾಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಟಂದೂರು ಮಾತನಾಡಿ, ಅಡಿಕೆ ಬೆಳೆಗಾರನಾಗಿ ಜಿಲ್ಲೆಯ ಬೆಳೆಗಾರರ ಪರವಾಗಿ ಧ್ವನಿ ಎತ್ತುವೆ. ಅಡಿಕೆ ಬೆಳೆಯ ಜೊತೆ ಇತರ ಬೆಳೆಗಳೂ ಇಂದು ಅನಿವಾರ್ಯವಾಗಿ ಬೆಳೆಯಬೇಕಿದೆ. ಅಡಿಕೆಯ ವಿವಿಧ ರೋಗಗಳ ಕಡೆಗೂ ವಿಜ್ಞಾನಿಗಳು ಗಮನಹರಿಸಬೇಕು, ಇದಕ್ಕಾಗಿ ಅಗತ್ಯ ನೆರವು ನೀಡಲು ಬದ್ಧರಾಗಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಸಿಪಿಸಿಆರ್‌ಐ ವಿಜ್ಞಾನಿ ಡಾ.ನಾಗರಾಜ್‌ , ತೋಟಗಾರಿಕಾ ಇಲಾಖಾ ಅಧಿಕಾರಿಗಳಾದ ಪ್ರದೀಪ್‌, ರೇಖಾ , ವಿಜಯಕರ್ನಾಟಕ ಸ್ಥಾನೀಯ ಸಂಪಾದಕ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು, ಕೃಷಿಕರು ಭಾಗವಹಿಸಿದ್ದರು.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ
April 28, 2024
9:24 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |
April 28, 2024
4:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror