Advertisement
MIRROR FOCUS

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

Share

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಹಾಗೂ ಕೊಳೆ ರೋಗಗಳಿಗೆ ಶಾಶ್ವತ ವೈಜ್ಞಾನಿಕ ಪರಿಹಾರ ಒದಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ನಿಯಮ 377ರಡಿ ಗಂಭೀರವಾಗಿ ವಿಷಯ ಎತ್ತಿಹಿಡಿದಿದ್ದಾರೆ.

ಸದನದಲ್ಲಿ ಮಾತನಾಡಿದ ಅವರು, ಈ ಭಾಗದ ಅಡಿಕೆ ತೋಟಗಳು ಪುನರಾವರ್ತಿತ ರೋಗಬಾಧೆಯಿಂದ ಭಾರೀ ನಷ್ಟ ಅನುಭವಿಸುತ್ತಿವೆ ಎಂದು ತಿಳಿಸಿದರು. ರೋಗ ನಿಯಂತ್ರಣಕ್ಕೆ ಕೇವಲ ಸಾಮಾನ್ಯ ನೆರವು ಸಾಕಾಗದೆ, ರೋಗ ನಿರ್ಣಯ, ತೋಟದ ನೈರ್ಮಲ್ಯ, ಪೋಷಕಾಂಶ ನಿರ್ವಹಣೆ, ಸೂಕ್ತ ಡ್ರೈನೇಜ್ ವ್ಯವಸ್ಥೆ, ನಿರಂತರ ಮೇಲ್ವಿಚಾರಣೆ ಹಾಗೂ ಗಂಭೀರವಾಗಿ ಬಾಧಿತ ತೋಟಗಳಲ್ಲಿ ಪುನರ್ ನೆಡುವಿಕೆ (ರೀಪ್ಲಾಂಟೇಷನ್) ಸೇರಿದಂತೆ ಸಮಗ್ರ ವೈಜ್ಞಾನಿಕ ಕ್ರಮಗಳು ಅಗತ್ಯವಿದೆ ಎಂದು ಒತ್ತಿ ಹೇಳಿದರು.

ಈಗ ‘ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಆಫ್ ಹಾರ್ಟಿಕಲ್ಚರ್ (MIDH)’ ಅಡಿಯಲ್ಲಿ 60:40 ಅನುಪಾತದಲ್ಲಿ ನೀಡಲಾಗುತ್ತಿರುವ ನೆರವು ನಿಗದಿತ ಘಟಕ ವೆಚ್ಚಗಳ ಆಧಾರದಲ್ಲಿದ್ದು, ಪ್ರದೇಶಾನುಸಾರ ಬದಲಾಗುವ ರೋಗ ತೀವ್ರತೆಗೆ ಅನುಗುಣವಾಗಿಲ್ಲ. ಇದರಿಂದ ರೈತರಿಗೆ ಸಂಪೂರ್ಣ ಪರಿಹಾರ ದೊರೆಯುತ್ತಿಲ್ಲ ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ತಕ್ಷಣವೇ ಮಧ್ಯಪ್ರವೇಶಿಸಿ, ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರ್ ರಿಸರ್ಚ್ (ICAR) ಹಾಗೂ ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ, ಡೈರೆಕ್ಟರೇಟ್ ಆಫ್ ಅರೆಕಾನಟ್ ಅಂಡ್ ಸ್ಪೈಸಸ್ ಡೆವಲಪ್‌ಮೆಂಟ್ (DASD), ರಾಜ್ಯ ಸರ್ಕಾರಗಳು ಮತ್ತು ಬೆಳೆಗಾರರ ಸಂಘಟನೆಗಳ ಸಹಯೋಗದಲ್ಲಿ ಕಾಲಬದ್ಧ ವೈಜ್ಞಾನಿಕ ಅಧ್ಯಯನ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಈ ಅಧ್ಯಯನದ ಮೂಲಕ ರೋಗದ ಹಂತಾನುಸಾರ ಚಿಕಿತ್ಸೆ, ಪ್ರತಿ ಹೆಕ್ಟೇರ್‌ಗೆ ತಗುಲುವ ವೆಚ್ಚ, ಔಷಧಿ, ಗೊಬ್ಬರ, ಕೂಲಿ, ರೋಗನಿರ್ಣಯ ಹಾಗೂ ರೀಪ್ಲಾಂಟೇಷನ್ ಅಗತ್ಯತೆಗಳ ವೈಜ್ಞಾನಿಕ ಮಾನದಂಡಗಳನ್ನು ನಿಗದಿಪಡಿಸಬೇಕು ಎಂದು ಅವರು ಹೇಳಿದರು.

ಇದಲ್ಲದೆ, ಈ ವರದಿಯ ಆಧಾರದ ಮೇಲೆ MIDH ನಿಯಮಾವಳಿಗಳಿಗೆ ತಿದ್ದುಪಡಿ ಮಾಡಿ, ರೋಗ-ಆಧಾರಿತ ವಿಶೇಷ ಘಟಕ (disease-specific component) ರೂಪಿಸಬೇಕು. ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಆದ್ಯತೆ ನೀಡುವಂತೆ, ಹಂತ ಹಂತವಾಗಿ ನೆರವು ನೀಡುವ ವ್ಯವಸ್ಥೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು

ಕೇಂದ್ರ ಸಚಿವರಿಗೆ ಪತ್ರ:  ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಈಗಾಗಲೇ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, MIDH ವೆಚ್ಚ ಮಿತಿಗೆ ವಿನಾಯಿತಿ ನೀಡಿ ಸಮಗ್ರ ಬೆಂಬಲ ಪ್ಯಾಕೇಜ್ ಒದಗಿಸಬೇಕು ಹಾಗೂ ಎಲೆ ಚುಕ್ಕೆ ರೋಗಕ್ಕೆ ನೀಡಿದ್ದ ಅನುದಾನವನ್ನು ಮರುಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಹಳದಿ ಎಲೆ ರೋಗದಿಂದ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಸುಮಾರು 16,000 ಹೆಕ್ಟೇರ್ ಪ್ರದೇಶ ಬಾಧಿತವಾಗಿದೆ ಎಂದು ಅವರು ಗಮನಸೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ಸ್ಥಳ ಪರಿಶೀಲನೆ ನಡೆಸಿ, ವಿಜ್ಞಾನಿಗಳು ಹಾಗೂ ರೈತರೊಂದಿಗೆ ಸಂವಾದ ನಡೆಸಬೇಕು ಎಂದು ಅವರು ಪತ್ರದಲ್ಲಿ ಸೂಚಿಸಿದ್ದಾರೆ.

Dakshina Kannada MP Capt. Brijesh Chowta raised the issue of severe arecanut diseases like leaf spot, yellow leaf disease, and rot in Parliament under Rule 377. He demanded a scientific, cost-based disease management framework led by ICAR-CPCRI and reforms in MIDH guidelines to include disease-specific financial support. He emphasized the need for region-specific treatment costs, phased assistance, and priority support for small farmers.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

6 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

11 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago