Advertisement
ಕೃಷಿ

ಅಡಿಕೆ ಕೃಷಿಕ ಆತ್ಮಹತ್ಯೆ | ಅಡಿಕೆ ಎಲೆಚುಕ್ಕಿ ಹಾಗೂ ಸಾಲಬಾಧೆ ಕಾರಣವೇ ?

Share

ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಅಡಿಕೆ ಬೆಳೆಗಾರನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ಹಾಗೂ ಇತ್ತೀಚೆಗೆ ಅಡಿಕೆ ಮರವು ಎಲೆಚುಕ್ಕೆರೋಗದಿಂದ ಅಡಿಕೆ ಫಸಲು ನಾಶವಾಗುತ್ತಿತ್ತು. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂದು ಸಂದೇಹ ವ್ಯಕ್ತವಾಗಿದೆ. ಕರಿಮನೆ ಗ್ರಾಪಂ ಕಿಳಂದೂರು ಗ್ರಾಮದ ಕೃಷ್ಣಪ್ಪಗೌಡ (60) ಮೃತ ವ್ಯಕ್ತಿ.

ಅಡಿಕೆ ತೋಟ ಮತ್ತು ಭತ್ತದ ಕೃಷಿ ಮಾಡಿಕೊಂಡಿದ್ದ ಕೃಷ್ಣಪ್ಪಗೌಡ ಎಂಬವರು  ಅವರ ಸಹೋದರ ಯೋಗೇಂದ್ರ ಗೌಡ ಜಂಟಿ ಹೆಸರಿನಲ್ಲಿ 4 ಎಕರೆ 11 ಗುಂಟೆ, ಕೃಷ್ಣಪ್ಪಗೌಡ ಹೆಸರಿನಲ್ಲಿ 2 ಎಕರೆ 20 ಗುಂಟೆ ಜಮೀನು ಹೊಂದಿದ್ದರು. ಎಲೆಚುಕ್ಕೆ ರೋಗದಿಂದ ಅಡಿಕೆ ತೋಟ ಸಂಪೂರ್ಣ ಹಾಳಾಗಿದ್ದು ತೊಂದರೆಗೆ ಸಿಲುಕಿದ್ದರು. ಕೃಷಿ ಅಭಿವೃದ್ಧಿಗಾಗಿ ಬ್ಯಾಂಕ್‌ ಗಳಲ್ಲಿ ಸಾಲ ಮಾಡಿದ್ದರು. ಅಡಿಕೆ ಬೆಳೆ ಎಲೆಚುಕ್ಕೆ ರೋಗಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಮಾಡಿದ ಸಾಲ ಹೇಗೆ ತೀರಿಸೋದು ಎಂದು ಯೋಚನೆಗೀಡಾಗಿ‌ ಮನೆಯಲ್ಲಿ ಹೇಳಿಕೊಂಡಿದ್ದರು. ಈ ಕಾರಣವೇ ನಮ್ಮ ತಂದೆಯ ಆತ್ಮಹತ್ಯೆಗೆ ಕಾರಣ. ಅದು ಬಿಟ್ಟು ಬೇರೆ ಯಾವುದೇ ಕಾರಣ ಇರಲಿಲ್ಲ ಎಂದು ಅವರ ಮಗ ಸತೀಶ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು  ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

16 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

17 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

17 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

17 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

18 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

2 days ago