Advertisement
ರಾಜ್ಯ

ಹವಾಮಾನ ವೈಪರೀತ್ಯ | ಉದುರಿದ ಎಳೆ ಅಡಿಕೆ-ಕೊಳೆರೋಗ | ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡುವಂತೆ ಕ್ಯಾಂಪ್ಕೊ ಒತ್ತಾಯ |

Share

ಹವಾಮಾನ ವೈಪರೀತ್ಯದ ಬಗ್ಗೆ ಕ್ಯಾಂಪ್ಕೊ ಅಡಿಕೆ ಬೆಳೆಗಾರರ ಪರವಾಗಿ ಮತ್ತೆ ಗಮನ ಸೆಳೆದಿದೆ. ಹವಾಮಾನದ ಕಾರಣದಿಂದ ಎಳೆಕಾಯಿ ಉದುರುವಿಕೆ ಮತ್ತು ಕೊಳೆರೋಗಕ್ಕೆ ಕಂಗಾಲಾದ ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಮನವಿ ಮಾಡಿದ್ದಾರೆ.

ಕಿಶೋರ್‌ ಕುಮಾರ್‌ ಕೊಡ್ಗಿ

ಬೇಸಿಗೆಯಲ್ಲಿ ಬಿಸಿಲ ಅಡಿಕೆ ಬೆಳೆಗಾರರು ಬಸವಳಿದ್ದರು. ಮುಂಗಾರಿನ ಆರ್ಭಟಕ್ಕೆ ಅಡಿಕೆಗೆ ತಗುಲಿದ ಮಹಾಮಾರಿ ಕೊಳೆರೋಗವು ಆಘಾತವಾಗಿ ಕಾಡಿದೆ.  ಹೀಗಾಗಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಯವರಿಗೆ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ ಕೊಡ್ಗಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಹವಾಮಾನ ವೈಪರೀತ್ಯಗಳಿಂದ ಭೂ ತಾಪಮಾನ ಹೆಚ್ಚಾಗಿ ಎಪ್ರಿಲ್ -ಮೇ ತಿಂಗಳಲ್ಲಿ ಅಡಿಕೆ ಕಾಯಿ ಉದುರುವಿಕೆಯಿಂದಾಗಿ ಅರ್ಧಕ್ಕರ್ಧ ಬೆಳೆ ನಾಶವಾಗಿತ್ತು. ಲಕ್ಷಾಂತರ ಹಣ ವ್ಯಯಿಸಿ ನೀರಿನ ವ್ಯವಸ್ಥೆ ಕಲ್ಪಿಸಿ ಬೆಳೆ ರಕ್ಷಣೆ ಮಾಡಲು ಹೆಣಗಾಡಿದ ರೈತ, ಈಗ ತೀವ್ರತರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಳಿದುಳಿದ ಅಡಿಕೆಗೆ ಕೊಳೆರೋಗ ಹರಡಿ ಬೆಳೆಗಾರರ ಬಾಳನ್ನು ಅಕ್ಷರಶಃ ನರಕಸದೃಶವಾಗಿಸಿದೆ. ಇದರಿಂದ ಜೀವನಾಧಾರವೇ ಕುಸಿದು ಬೆಳೆಗಾರರ ಜೀವನೋತ್ಸಾಹ ಕುಗ್ಗಿ ಹೋಗಿದೆ.

ಕ್ಯಾಂಪ್ಕೊ ಮತ್ತು ಇತರ ಸಹಕಾರಿ ಸಂಸ್ಥೆಗಳು ಸರ್ವ ಪ್ರಯತ್ನಗಳ ಮೂಲಕ ಕೆ.ಜಿ ಗೆ 400 ರೂಪಾಯಿಗಳ ಅಸುಪಾಸಿನಲ್ಲಿ ಅಡಿಕೆಯ ದರವನ್ನು ಸ್ಥಿರೀಕರಿಸಿ ರೈತರ ಬೆಂಬಲಕ್ಕೆ ನಿಂತಿವೆ. ಆದರೂ, ಅಡಿಕೆ ಕೃಷಿಗೆ ತಗುಲಿದ ಅಡಿಕೆ ಉದುರುವಿಕೆ ಮತ್ತು ಕೊಳೆರೋಗ ಬಾಧೆಯಿಂದ ಬೆಳೆ ನಷ್ಟವಾಗಿ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬ ಸ್ಥಿತಿ ಬೆಳೆಗಾರರದ್ದಾಗಿದೆ. ರೈತರ ಸಮಸ್ಯೆಗಳಿಗೆ ಸದಾ ಮಿಡಿಯುತ್ತಿರುವ ಮುಖ್ಯಮಂತ್ರಿಯವರ ಸಹಾಯ ಹಸ್ತಕ್ಕಾಗಿ ಅಡಿಕೆ ಬೆಳೆಗಾರರು ಎದುರು ನೋಡುತ್ತಿದ್ದಾರೆ ಎಂದು ಮನವಿಯಲ್ಲಿ  ತಿಳಿಸಿದ್ದಾರೆ.

ರಾಜ್ಯದಲ್ಲಿ ಅಡಿಕೆ ಬೆಳೆ ನಾಶದ ಬಗ್ಗೆ ತುರ್ತು ಸಮೀಕ್ಷ ನಡೆಸುವಂತೆ ಸಂಬಂಧ ಪಟ್ಟ ಇಲಾಖೆಗೆ ನಿರ್ದೇಶನ ನೀಡಿ, ಆ ಪ್ರಕಾರ ಅಡಿಕೆ ಕೃಷಿಕರಿಗೆ ಪರಿಹಾರ ಘೋಷಣೆ ಮಾಡುವಂತೆ ಪತ್ರ ಮುಖೇನ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಮುಖ್ಯ ಮಂತ್ರಿಯವರಲ್ಲಿ ಕ್ಯಾಂಪ್ಕೊ ವಿನಂತಿ ಮಾಡಿದೆ.

The President of CAMPCO, Kishore Kumar Kodgi, has requested the Chief Ministers of Karnataka and Kerala to offer compensation to the Arecanut farmers affected by weather-induced nutfall and Mahali.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

21 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

21 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago