Advertisement
MIRROR FOCUS

Arecanut | ತೆರಿಗೆ ಉದ್ದೇಶಕ್ಕಾಗಿ ಅಡಿಕೆಯ ದರ್ಜೆಯನ್ನು ಘೋಷಿಸುವ ಅಗತ್ಯವಿಲ್ಲ |

Share

ಶಾಸನಬದ್ಧ ಅಧಿಸೂಚನೆಯು ಅಡಿಕೆಗೆ ನಿರ್ದಿಷ್ಟ ತೆರಿಗೆ ದರವನ್ನು ನಿಗದಿಪಡಿಸಿದಾಗ ಅಡಿಕೆಯ ದರ್ಜೆ ಮತ್ತು ಗುಣಮಟ್ಟವನ್ನು ಸಹ ಘೋಷಿಸಬೇಕು ಎಂಬ ಅಭಿಪ್ರಾಯ ಸರಿಯಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಹೇಳಿದೆ.

ಅಡಿಕೆ (Arecanut ) ಮಾರಾಟಗಾರರಿಗೆ ಸಂಬಂಧಿಸಿದ ತೀರ್ಪಿನ  ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಈ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಅಡಿಕೆ ಮಾರಾಟಗಾರರಿಗೆ ಸಂಬಂಧಿಸಿದ ತೀರ್ಪಿನಲ್ಲಿ ತೆರಿಗೆ ಉದ್ದೇಶಕ್ಕಾಗಿ ಅಡಿಕೆಯ ದರ್ಜೆಯನ್ನು ಘೋಷಿಸುವ ಅಗತ್ಯವಿಲ್ಲ ಎಂಬ ಅಂಶ ಉಲ್ಲೇಖಿಸಿದ್ದಾರೆ.

ಈ ಪ್ರಕರಣದಲ್ಲಿ ಅರ್ಜಿದಾರ ಕಂಪನಿಗೆ ಸೇರಿದ ಏಳು ಟ್ರಕ್‌ಗಳನ್ನು ಸೆಪ್ಟೆಂಬರ್ 2021 ರಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ನಂತರ ತೆರಿಗೆ ವಂಚನೆಗಾಗಿ ಜಪ್ತಿ ಮಾಡಲಾಯಿತು. ಅಡಿಕೆ ಸಾಗಾಟದ ಸಂದರ್ಭ ಅಡಿಕೆಯ ದರ್ಜೆಯಲ್ಲಿನ ವ್ಯತ್ಯಾಸ ಕಂಡುಬರುತ್ತದೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಮೌಲ್ಯ ಹೊಂದಿದ್ದರೂ ಅಡಿಕೆಯ ದರ್ಜೆಯಲ್ಲಿನ ವ್ಯತ್ಯಾಸ ತೋರಿಸಿ ಸಾಗಿಸಲಾಗುತ್ತದೆ. ಹೀಗಾಗಿ ಅಡಿಕೆಯ ದರ್ಜೆಯನ್ನು ಬಹಿರಂಗಪಡಿಸದಿರುವುದು ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್‌ಟಿ) ನಿಯಮಗಳ ಅಡಿಯಲ್ಲಿ ಕಡಿಮೆ ಮೌಲ್ಯಮಾಪನವಾಗಿದೆ. ಇದರಿಂದ ತೆರಿಗೆ ನಷ್ಟವಾಗುತ್ತಿದೆ ಎಂದು ದೂರುಗಳು ಇತ್ತು.

ಸಿಜಿಎಸ್‌ ಟಿ  ಅಡಿಯಲ್ಲಿ ನಿರ್ದಿಷ್ಟ ಸಂದರ್ಭಗಳಲ್ಲಿ ಹೊರತು ಸರಕುಗಳ ಮಾರುಕಟ್ಟೆ ಮೌಲ್ಯವು ಪ್ರಸ್ತುತವಾಗಿರುವುದಿಲ್ಲ. ಎಲ್ಲಾ ಸಾಮಾನ್ಯ ಉದ್ದೇಶಗಳಿಗಾಗಿ, ಕಾಯಿದೆಯ ಸೆಕ್ಷನ್ 15 ರ ಪ್ರಕಾರ ಮೌಲ್ಯವನ್ನು ನಿರ್ಧರಿಸಬೇಕು ಅದು ನಿಜವಾಗಿ ಪಾವತಿಸಿದ ಅಥವಾ ಪಾವತಿಸಬೇಕಾದ ಬೆಲೆಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

12 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

13 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

13 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

23 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

1 day ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

1 day ago