MIRROR FOCUS

ಅಡಿಕೆ ಬೆಳೆ ಸಮಸ್ಯೆ ಬಗೆಹರಿಸುವಂತೆ ಅಯೋಧ್ಯೆ ಶ್ರೀ ರಾಮನ ಮೊರೆ ಹೋದ ಅಡಿಕೆ ಬೆಳೆಗಾರರು | ಮಲೆನಾಡಿನ ರೈತರಿಂದ ಅಡಿಕೆ ಹಿಂಗಾರ ಸಮರ್ಪಣೆಗೆ ಸಿದ್ಧತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರೈತರ(Farmer) ಸಮಸ್ಯೆ ಸದಾ ಇರುತ್ತೆ. ಅದಕ್ಕೆ ಪರಿಹಾರ ಕೊಡಲು ಸರ್ಕಾರಕ್ಕೆ(Govt) ಸಾಧ್ಯವೇ ಆಗುತ್ತಿಲ್ಲ. ಹಾಗಾಗಿ ಈಚೆಗೆ   ರೈತರು ದೇವರ ಮೇಲೆ ಭಾರ ಹಾಕುವಂತಾಗಿದೆ. ಅದರಲ್ಲೂ ಮಲೆನಾಡು(Malenadu), ಕರಾವಳಿ(coastal) ಭಾಗದ ರೈತರು ನಾನಾ ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಮಲೆನಾಡು ಭಾಗದ ರೈತರು ಅಯೋಧ್ಯೆಯ ರಾಮನಲ್ಲಿ (Ayodhya Ram Mandir) ಬೇಡಿಕೊಂಡಿದ್ದಾರೆ. ಅಡಿಕೆ ಬೆಳೆಗೆ(Arecanut) ವಿವಿಧ ಸಮಸ್ಯೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶ್ರೀ ರಾಮನಿಗೆ ಅಡಿಕೆ ಸಿಂಗಾರ ಅರ್ಪಿಸಲು ನಿರ್ಧರಿಸಿದ್ದಾರೆ.

Advertisement

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ 50ಕ್ಕೂ ರಾಮ ಭಕ್ತರು ಅಯೋಧ್ಯೆಯ ಬಾಲರಾಮನ ದರ್ಶನಕ್ಕೆ ಹೊರಟಿದ್ದಾರೆ. ಅಯೋಧ್ಯೆಗೆ ಹೋಗುವ ಮುನ್ನ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮಾರ್ಕಂಡೇಶ್ವರ ದೇವಾಲಯಕ್ಕೆ ಮಲೆನಾಡಿನ ಅಡಿಕೆಯ ಹಿಂಗಾರವನ್ನು ಇಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅದೇ ಹಿಂಗಾರವನ್ನ ಅಯೋಧ್ಯೆಯ ರಾಮನಿಗೆ ಪೂಜೆ ಸಲ್ಲಿಸಲು ಕೊಂಡೊಯ್ದಿದ್ದಾರೆ.

ಮಲೆನಾಡಿನಲ್ಲಿ ನಾನಾ ರೀತಿಯ ಸಮಸ್ಯೆಗಳಿವೆ. ಹಳದಿ ಎಲೆ ರೋಗದಿಂದ ಅಡಿಕೆ ಬೆಳೆಗಾರರ ಬದುಕು ಬೀದಿಗೆ ಬಂದಿದೆ. ಕಸ್ತೂರಿರಂಗನ್ ವರದಿ, ಬಫರ್ ಜ್ಹೋನ್ ಸೇರಿದಂತೆ ಮೀಸಲು ಅರಣ್ಯದ ಹೆಸರಿನಲ್ಲಿ ಆಳುವ ವರ್ಗ ಯೋಚಿಸದೆ ಮಾಡಿದ ಕಾನೂನಿನ ಕುಣಿಕೆಗೆ ಮಲೆನಾಡಿಗರು ಬೆಲೆ ತೆರುವಂತಾಗಿದೆ. ಹಾಗಾಗಿ ನಮ್ಮ ಸಮಸ್ಯೆಯನ್ನು ಬಗೆಹರಿಸು ಭಗವಂತ ಎಂದು ಮಾರ್ಕಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅಯೋಧ್ಯೆಗೆ ಹೊರಟಿದ್ದಾರೆ. ಈಚೆಗೆ ಅಡಿಕೆ ಹಳದಿ ರೋಗ ಕೂಡಾ ಅಡಿಕೆ ಬೆಳೆಗಾರರನ್ನು ಕಾಡುತ್ತಿದೆ. ಹೀಗಾಗಿ ರಾಜಕೀಯ ಪಕ್ಷಗಳು ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಬರುತ್ತಿಲ್ಲ, ರಾಜಕಾರಣಿಗಳು ಆಟವಾಡುತ್ತಿದ್ದಾರೆ. ಇದೆಲ್ಲದರ ನಡುವೆ ದೇವರ ಗತಿ ಎನ್ನುವ ಸ್ಥಿತಿಯಾಗಿದೆ.

ರಾಮಭಕ್ತರು ಮಾರ್ಕಂಡೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ಮಲೆನಾಡಿನ ಹಿಂಗಾರು ಸಮೇತ ಅಯೋಧ್ಯೆಗೆ ಹೊರಟಿದ್ದಾರೆ. ಅದೇ ಹಿಂಗಾರದಲ್ಲಿ ಅಯೋಧ್ಯೆಯ ರಾಮಲಲ್ಲನಿಗೆ ಪೂಜೆ ಸಲ್ಲಿಸಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಬೇಡಿಕೊಳ್ಳಲಿದ್ದಾರೆ.

– ಅಂತರ್ಜಾಲ ಮಾಹಿತಿ

Farmers of Malenadu and coastal areas are suffering from various problems. Farmers of hilly areas have begged Ayodhya Ram Mandir to solve their problems. In the background of various problems appearing in the arecanut crop, it has been decided to offer Arecanut Singara to Sri Rama.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

4 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

9 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

10 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

20 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

21 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

1 day ago