ಅಡಿಕೆ ಆಮದು ತಡೆಗೆ ತಕ್ಷಣವೇ ಸೂಕ್ತ ಕ್ರಮಕ್ಕೆ ಬೆಳೆಗಾರರ ಸಂಘ ಒತ್ತಾಯ

December 21, 2023
4:00 PM
ಅಡಿಕೆ ಅಕ್ರಮವಾಗಿ ಆಮದು ವಿರುದ್ಧ ಕ್ರಮಕ್ಕೆ ಅಡಿಕೆ ಬೆಳೆಗಾರರ ಸಂಘ ಒತ್ತಾಯ.

ಕಳೆದ ಕೆಲವು ದಿನಗಳಿಂದ ಅಡಿಕೆ ಆಮದು ಬಗ್ಗೆ ಸುದ್ದಿಗಳು ವಿವಿಧ ಮಾಧ್ಯಮಗಳ ಮೂಲಕ ಬೆಳಕಿಗೆ ಬರುತ್ತಿದೆ.ಇದರ ಜೊತೆಗೇ ಅಡಿಕೆ ಮಾರುಕಟ್ಟೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಹೀಗಾಗಿ ಅಡಿಕೆ ಆಮದು ತಡೆಗೆ ಸರ್ಕಾರಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ. ಈ ಬಗ್ಗೆ ಪ್ರಧಾನಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮತ್ತು ಜಿಲ್ಲೆ ಸಂಸದರಿಗೆ ಪತ್ರದ ಮೂಲಕ ಒತ್ತಾಯಿಸಿದೆ.

Advertisement
Advertisement

ಅಡಿಕೆ ಬೆಳೆಗಾರರು ಈಗಾಗಲೇ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಕೆಲವು ಸಮಯಗಳಿಂದ ಉತ್ತಮ ಧಾರಣೆಯ ಕಾರಣದಿಂದ ಕೃಷಿ ಕೆಲಸಗಳು ಸರಾಗ ಸಾಗುತ್ತಿತ್ತು. ಕೃಷಿ ಬೆಳೆವಣಿಗೆಗೂ ಕಾರಣವಾಗಿತ್ತು. ಧಾರಣೆ ಏರಿಕೆಯ ಬೆನ್ನಲ್ಲೇ ಅಡಿಕೆ ಆಮದು ಸುದ್ದಿಗಳು ಕೇಳಿಬರುತ್ತಿತ್ತು. ಅಲ್ಲಲ್ಲಿ ಇಲಾಖೆಗಳು ಪತ್ತೆ ಕಾರ್ಯ ಮಾಡುತ್ತಿದ್ದರು. ಇದೀಗ ಅಡಿಕೆ ಆಮದು ಸುದ್ದಿಗಳು ಮತ್ತೆ ಅಡಿಕೆ ಬೆಳೆಗಾರರನ್ನು ಕಂಗೆಡಿಸುತ್ತಿದೆ. ಇದು ಅಡಿಕೆ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುತ್ತಿದೆ. ಅಡಿಕೆ ಬೇಡಿಕೆ ಇರುವಿಕೆಯ ಬಗ್ಗೆ ಮಾಹಿತಿ ಇದ್ದರೂ ಅನಧಿಕೃತವಾಗಿ ಈಗ ಅಡಿಕೆ ಆಮದು ಸುದ್ದಿಗಳೇ ಹೆಚ್ಚಾಗಿದೆ. ಹೀಗಾಗಿ ಅಡಿಕೆ ಆಮದು ಬಗ್ಗೆ ಸೂಕ್ತವಾದ ಕ್ರಮ ಅಗತ್ಯ ಇದೆ ಎಂದು ಅಡಿಕೆ ಬೆಳೆಗಾರರ ಸಂಘವು ಮನವಿಯಲ್ಲಿ ಒತ್ತಾಯಿಸಿದೆ.

Advertisement

 

ದಕ್ಷಿಣ ಕನ್ನಡ ಸೇರಿದಂತೆ ಅಡಿಕೆ ಬೆಳೆಯುವ ನಾಡಲ್ಲಿ ಈಗ ಧಾರಣೆ ಏರಿಳಿತವು ಕೃಷಿಕರ ಮನಸ್ಸಿನಲ್ಲಿ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ.ಹೀಗಾಗಿ ತಕ್ಷಣವೇ ಸರ್ಕಾರ , ಜನಪ್ರತಿನಿಧಿಗಳು ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಕಾರಣವಾಗಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ಮನವಿಯಲ್ಲಿ ಒತ್ತಾಯಿಸಿದ್ದಾರೆ.

Advertisement

For the past few days, news about the import of Arecanuts is coming in various media. Along with this, there is a difference in the arecanut market. Therefore, the All India Arecanut Growers Association has demanded that the government should immediately take appropriate action to stop the import of arecanut. It has urged the Prime Minister and Chief Ministers and District MPs in this regard through a letter.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?
April 30, 2024
2:28 PM
by: ಮುರಳಿಕೃಷ್ಣ ಕೆ ಜಿ
Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
April 30, 2024
11:19 AM
by: ಸಾಯಿಶೇಖರ್ ಕರಿಕಳ
ಕೋವಿಡ್‌ ಲಸಿಕೆ ವಿರಳವಾಗಿ ಟಿಟಿಎಸ್‌ಗೆ ಕಾರಣವಾಗುತ್ತದೆ..! | ಕೋವಿಶೀಲ್ಡ್ ‘ಅಪರೂಪದ ಅಡ್ಡ ಪರಿಣಾಮ’ ಬೀರಬಹುದು | ಲಂಡನ್ ಕೋರ್ಟ್‌ಗೆ ಅಸ್ಟ್ರಾಜೆನೆಕಾ ಅಫಿಡವಿಟ್ ಸಲ್ಲಿಕೆ |
April 30, 2024
11:04 AM
by: The Rural Mirror ಸುದ್ದಿಜಾಲ
ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್
April 30, 2024
10:46 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror