ವಿಪರೀತ ಅಡಿಕೆ ಕಳ್ಳಸಾಗಾಣಿಕೆ | ತ್ರಿಪುರಾ-ಮಿಜೋರಾಂನಲ್ಲೂ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ ಒತ್ತಾಯ |

October 25, 2022
11:03 AM

ತೈವಾನ್, ಥೈಲ್ಯಾಂಡ್, ಮ್ಯಾನ್ಮಾರ್ ಮೊದಲಾದ ದೇಶಗಳಿಂದ ಅಡಿಕೆ ಕಳ್ಳಸಾಗಾಣಿಗೆ ಅವ್ಯಾಹತವಾಗಿ ನಡೆಯುತ್ತಿರುವ ಕಾರಣದಿಂದ ತ್ರಿಪುರಾ ಹಾಗೂ ಮಿಜೋರಾಂ ಅಡಿಕೆ ಬೆಳೆಗಾರರಿಗೂ(Arecanut Growers)  ಈಗ ಸಂಕಷ್ಟ ಎದುರಾಗಿದೆ. ಹೀಗಾಗಿ ತಕ್ಷಣವೇ  ತ್ರಿಪುರಾ, ಮಿಜೋರಾಂ ಮತ್ತು ಅಸ್ಸಾಂ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು ಎಂದು ಅಡಿಕೆ ಬೆಳೆಗಾರರು ಆಗ್ರಹಿಸಿದ್ದಾರೆ.

ವಿದೇಶಿ ಅಡಿಕೆಯು ಮ್ಯಾನ್ಮಾರ್‌ ಮೂಲಕ ಅಸ್ಸಾಂ ಮಾರ್ಗದಲ್ಲಿ  ಹಾಗೂ ಈಚೆಗೆ ಒಳದಾರಿಯ ಮೂಲಕ ಅಡಿಕೆ ಕಳ್ಳಸಾಗಾಟ ವಿಪರೀತವಾಗಿ ನಡೆಯುತ್ತಿದೆ. ಹೀಗಾಗಿ ತ್ರಿಪುರಾ ಮತ್ತು ಮಿಜೋರಾಂನ ಅಡಿಕೆ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಸಾಗಿಸಲು ಮತ್ತು ಮಾರಾಟ ಮಾಡಲು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ತ್ರಿಪುರಾ ಮತ್ತು ಮಿಜೋರಾಂನ ಕೃಷಿಕರಿಗೆ  ಅಡಿಕೆ ಪ್ರಮುಖ ಬೆಳೆಯಾಗಿದೆ. ಈಗ ಪೊಲೀಸ್‌ ದಾಳಿ ಹಾಗೂ ಕೆಲವು ಕಡೆ ಗ್ರಾಮೀಣ ಭಾಗಗಳಲ್ಲಿಯೂ ಅಕ್ರಮ ದಾಸ್ತಾನು ಕಾರಣಗಳಿಂದ ಕೃಷಿಕರ ವಸ್ತುಗಳ ಮಾರಾಟಕ್ಕೂ ಸಂಕಷ್ಟವಾಗಿದೆ. ಕೃಷಿಕರು ನಷ್ಟದತ್ತ ಮುಖ ಮಾಡುತ್ತಿದ್ದಾರೆ.  ತ್ರಿಪುರಾ ಮತ್ತು ಮಿಜೋರಾಂ ರೈತರು ಅಡಿಕೆ ಬೆಳೆಯುತ್ತಿದ್ದರೆ, ವ್ಯಾಪಾರಿಗಳು  ಖರೀದಿಸಲು ಮತ್ತು ಮಾರಾಟ ಮಾಡಲು ಸಂಕಷ್ಟ ಪಡಬೇಕಾಗಿದೆ. ಸದ್ಯ ಅಸ್ಸಾಂ ರಾಜ್ಯವನ್ನು ಬಳಸಬೇಕಾಗಿದೆ. ಆದರೆ ಸಾಗಾಟಕ್ಕೆ ಸಂಕಷ್ಟವಾಗಿದೆ. ಈ ಕಾರಣದಿಂದ ಅಡಿಕೆ ಹಾಳಾಗುವ ಸ್ಥಿತಿ ಬಂದಿದೆ. ಹೀಗಾಗಿ ಅಡಿಕೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಈ ಸಂಕಷ್ಟವನ್ನು ದೂರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ  ತ್ರಿಪುರಾ, ಮಿಜೋರಾಂ ಅಡಿಕೆ ಬೆಳೆಗಾರರು ತಮ್ಮ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರಲು ವಿವಿಧ ಪ್ರತಿಭಟನೆ, ಆಂದೋಲನ ಮಾಡಿದ್ದರು. ಸಂಬಂಧಿಸಿದ ಇಲಾಖೆ ಕೃಷಿಕರಿಗೆ ಗುರುತಿನ ಚೀಟಿ ನೀಡುತ್ತದೆ ಎಂದೂ ಹೇಳಿತ್ತು. ಆದರೆ ಯಾವುದೂ ಜಾರಿಯಾಗಿಲ್ಲ ಎಂದು ಅಡಿಕೆ ಬೆಳೆಗಾರರು ಆರೋಪಿಸಿದ್ದಾರೆ.ತ್ರಿಪುರಾ, ಮಿಜೋರಾಂ ಮತ್ತು ಅಸ್ಸಾಂ ಸರ್ಕಾರಗಳ ನಿಷ್ಕ್ರಿಯತೆ ಮತ್ತು ಕಾಳಜಿಯ ಕೊರತೆಯಿಂದಾಗಿ ಅಡಿಕೆ ಕೃಷಿ ಅಪಾಯವನ್ನು ಎದುರಿಸುತ್ತಿದೆ ಎಂದು ಕೃಷಿಕರು ಆರೋಪಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror