ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

July 4, 2026
12:16 PM
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದ್ದಾರೆ. ಅಡಿಕೆಯಲ್ಲಿ ರಾಸಾಯನಿಕ ಮಿಶ್ರಣವೇ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು ಎಂದು ಅವರು ತಿಳಿಸಿದ್ದಾರೆ.

ಉತ್ತಮ ಗುಣಮಟ್ಟದ ಅಡಿಕೆಯ ಬಳಕೆಯಿಂದ ಆರೋಗ್ಯಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಆದರೆ ಅಡಿಕೆಗೆ ರಾಸಾಯನಿಕಗಳನ್ನು ಮಿಶ್ರಣ ಮಾಡಿದಾಗ ಮಾತ್ರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಕ್ಯಾಂಪ್ಕೋದ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಠಾರದಲ್ಲಿ ಆಯೋಜಿಸಿದ್ದ ಅಡಿಕೆ ತೋಟ ನಿರ್ವಹಣೆ ಕುರಿತ ಕೃಷಿಕರ ಸಂವಾದ ಕಾರ್ಯಕ್ರಮದಲ್ಲಿ ವ್ಯಕ್ತಪಡಿಸಿದರು.

ಅಡಿಕೆ ಬೆಳೆಗಾರರು ಒಂದೇ ಬೆಳೆಯನ್ನೇ ಅವಲಂಬಿಸದೆ ಮಿಶ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಅಡಿಕೆ ಕುರಿತು ಅಪಪ್ರಚಾರ ಮತ್ತು ಷಡ್ಯಂತ್ರಗಳು ನಡೆಯುತ್ತಿರುವುದು ಗಮನಕ್ಕೆ ಬರುತ್ತಿದ್ದು, ಅವುಗಳನ್ನು ಎದುರಿಸಲು ಕ್ಯಾಂಪ್ಕೋ ಹಾಗೂ ಅಡಿಕೆ ಮಾರುಕಟ್ಟೆ ನಿರ್ವಹಿಸುವ ವಿವಿಧ ಸಂಸ್ಥೆಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿವೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಇತ್ತೀಚಿನ ಹವಾಮಾನ ವೈಪರೀತ್ಯದಿಂದ ಅಡಿಕೆಯ ಗುಣಮಟ್ಟದ ಮೇಲೆ ಪರಿಣಾಮ ಬೀಳುತ್ತಿರುವುದರಿಂದ ರೈತರು ತೋಟ ನಿರ್ವಹಣೆಯಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕ್ಯಾಂಪ್ಕೋದ ಕೃಷಿ ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಎನ್.ಆರ್. ಅಡಿಕೆ ತೋಟ ನಿರ್ವಹಣೆ ಕುರಿತು ಮಾಹಿತಿ ನೀಡಿದರೆ, ಡಿಜಿಎಂ ಗೋವಿಂದ ಭಟ್ ಅಡಿಕೆ ಮಾರುಕಟ್ಟೆಯ ಬೆಳವಣಿಗೆ ಮತ್ತು ನಿರ್ವಹಣೆ ಕುರಿತು ಮಾತನಾಡಿದರು. ಕೃಷಿಕರು ಸಂವಾದದಲ್ಲಿ ತಮ್ಮ ಪ್ರಶ್ನೆಗಳು ಮತ್ತು ಅಭಿಪ್ರಾಯಗಳನ್ನು ಹಂಚಿಕೊಂಡರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

CAMPCO President S.R. Satishchandra said that good-quality arecanut does not harm health and that health risks mainly arise when harmful chemicals are mixed with arecanut products. He also urged farmers to adopt mixed farming and maintain better arecanut gardens in view of changing climatic conditions.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror