ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

March 17, 2026
10:47 PM
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ ಸಂಶೋಧನೆ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಅಧ್ಯಯನದಿಂದ ಅಡಿಕೆ ಬಳಕೆಯ ಕುರಿತು ವೈಜ್ಞಾನಿಕ ಸ್ಪಷ್ಟತೆ ಸಿಗುವ ನಿರೀಕ್ಷೆ ಇದೆ.

ಕರ್ನಾಟಕವು ಅಡಿಕೆ ಬೆಳೆಯು ಪ್ರಮುಖ ವಾಣಿಜ್ಯ ಬೆಳೆ ಆಗಿರುವ ಹಿನ್ನೆಲೆಯಲ್ಲಿ, ಅದರ ಬಳಕೆ, ಆರೋಗ್ಯದ ಮೇಲಿನ ಪರಿಣಾಮ ಹಾಗೂ ರಾಸಾಯನಿಕ ಅಂಶಗಳ ಕುರಿತು ಸಮಗ್ರ ವೈಜ್ಞಾನಿಕ ಅಧ್ಯಯನ ನಡೆಸಲು ಸರ್ಕಾರ ಮುಂದಾಗಿದೆ. ಸದ್ಯದ ಅಧ್ಯಯನದ ಪ್ರಕಾರ, ತಂಬಾಕು ಬೆರೆಸದೆ ಅಲ್ಪ ಪ್ರಮಾಣದಲ್ಲಿ ಅಡಿಕೆ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಿಲ್ಲ ಎಂಬ ಅಂಶ ವೈಜ್ಞಾನಿಕ ಅಧ್ಯಯನದಿಂದ ದೃಢಪಟ್ಟಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ವಿಧಾನಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್‌ ಅವರು ಅಡಿಕೆ ಹಾನಿಕಾರಕ ಎಂಬ ಅಪಪ್ರಚಾರದ ವಿರುದ್ಧ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಅಧಿವೇಶನದಲ್ಲಿ ಕೇಳಿರುವ ಪ್ರಶ್ನೆಗೆ ಉತ್ತರಿಸಿದ  ತೋಟಗಾರಿಕಾ ಸಚಿವರು, ಅಡಿಕೆಯಲ್ಲಿನ ರಾಸಾಯನಿಕ ಹಾಗೂ ಕೀಟನಾಶಕ ಅಂಶಗಳ ಆರೋಗ್ಯ ಪರಿಣಾಮ, ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಅಧ್ಯಯನ ಮಾಡಲು ದೇಶದ ಪ್ರಮುಖ ವೈದ್ಯಕೀಯ ಹಾಗೂ ವೈಜ್ಞಾನಿಕ ಸಂಸ್ಥೆಗಳೊಂದಿಗೆ ಸಂಯುಕ್ತ ಸಂಶೋಧನೆ ಕೈಗೊಳ್ಳಲಾಗುತ್ತಿದೆ ತೋಟಗಾರಿಕಾ ಇಲಾಖೆಯು ಈ ಬಗ್ಗೆ ಮಾಹಿತಿ ಪಡೆಯುತ್ತಿದೆ ಮತ್ತು ನೆರವು ನೀಡುತ್ತಿದೆ ಎಂದು ಹೇಳಿದ್ದಾರೆ.

ಅಡಿಕೆಯಲ್ಲಿನ phytochemical ಹಾಗೂ pesticide ಅಂಶಗಳ ಪರಿಣಾಮವನ್ನು ಅಧ್ಯಯನ ಮಾಡಲು ರಾಜ್ಯ ತೋಟಗಾರಿಕೆ ಇಲಾಖೆಯು ಬೆಂಗಳೂರಿನ ಎಂ.ಎಸ್. ರಾಮಯ್ಯ ವಿಶ್ವವಿದ್ಯಾಲಯಕ್ಕೆ ಸಂಶೋಧನಾ ಜವಾಬ್ದಾರಿ ನೀಡಿದ್ದು, ಸುಮಾರು ₹31.80 ಲಕ್ಷ ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ ಅಡಿಕೆ ಹಾನಿಕಾರಕವಲ್ಲ ಎಂಬ ವರದಿ ಬಂದಿದೆ.  ಮುಂದೆ ಪ್ರಮುಖ ಸಂಸ್ಥೆಗಳು ಸಂಶೋಧನೆಯಲ್ಲಿ ಅಡಿಕೆ ಜಗಿಯುವ ಅಭ್ಯಾಸ, ಬಾಯಿ ಹುಣ್ಣುಗಳ ಪ್ರಮಾಣ ಸೇರಿದಂತೆ ಆರೋಗ್ಯ ಸಂಬಂಧಿತ ಅಂಶಗಳ ಕುರಿತು 15 ಸಾವಿರಕ್ಕೂ ಹೆಚ್ಚು ಜನರನ್ನು ಒಳಗೊಂಡ ಸಮೀಕ್ಷೆಯೂ ನಡೆಯುತ್ತಿದೆ ಎಂದು ತಿಳಿಸಲಾಗಿದೆ, ಇನ್ನಷ್ಟು ಸಂಶೋಧನೆ ನಡೆಯುತ್ತಿದೆ.

ಈ ಸಂಶೋಧನೆಯಡಿ ಅಡಿಕೆಯ Metabolite profiling, metabolism studies, Clinical epidemiology, Cancer-related investigations ಹಾಗೂ Neuro-psychiatric ಅಧ್ಯಯನಗಳು ಸೇರಿದಂತೆ ಹಲವು ವೈಜ್ಞಾನಿಕ ಅಂಶಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಲಾಗಿದೆ. ಇದರಿಂದ ಅಡಿಕೆ ಬಳಕೆಯ ಕುರಿತು ಇರುವ ಅನುಮಾನಗಳಿಗೆ ವೈಜ್ಞಾನಿಕ ಉತ್ತರ ಸಿಗುವ ಸಾಧ್ಯತೆ ಇದ್ದು, ರೈತರು ಹಾಗೂ ಗ್ರಾಹಕರಿಗೂ ಸ್ಪಷ್ಟ ಮಾಹಿತಿ ದೊರಕುವ ನಿರೀಕ್ಷೆ ವ್ಯಕ್ತವಾಗಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.

ಅಡಿಕೆ ಹಾಳೆ ತಟ್ಟೆಗಳ ಬಳಕೆ ಕುರಿತು ಇದ್ದ ಆತಂಕಕ್ಕೂ ಈ ಅಧ್ಯಯನ ತೆರೆ ಎಳೆದಿದ್ದು, ಅವುಗಳಲ್ಲಿ ಇರುವ ಆಲ್ಕಲಾಯ್ಡ್ ಮಟ್ಟ ಅತಿ ಕಡಿಮೆ ಇರುವುದರಿಂದ ಆಹಾರಕ್ಕೆ ಹಾನಿಕಾರಕ ರಾಸಾಯನಿಕಗಳು ಸೇರುವ ಸಾಧ್ಯತೆ ತೀರಾ ಕಡಿಮೆ ಎಂದು ವರದಿ ತಿಳಿಸಿದೆ.

ಅಡಿಕೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಇರುವ ನಕಾರಾತ್ಮಕ ಭಾವನೆಗಳನ್ನು ಹೋಗಲಾಡಿಸಲು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಶೋಧನೆ ಮುಂದುವರಿದಿದೆ. ಅಂತಿಮ ವರದಿ ಬಂದ ಬಳಿಕ ಅಡಿಕೆ ಹಾನಿಕಾರಕವಲ್ಲ ಎಂಬ ವಿಚಾರವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡುವ ಯೋಜನೆಯೂ ಸರ್ಕಾರ ಹೊಂದಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

A Karnataka government-backed research report suggests that consuming areca nut in small quantities without mixing tobacco may not cause adverse health effects. The interim findings have brought relief to arecanut growers, while further national-level scientific studies are ongoing.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ
March 17, 2026
9:35 PM
by: ದ ರೂರಲ್ ಮಿರರ್.ಕಾಂ
ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್
March 17, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!
March 17, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್
March 17, 2026
2:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror