Advertisement
MIRROR FOCUS

Arecanut | ಅಡಿಕೆ ಸಿಪ್ಪೆ ಶಬ್ದನಿರೋಧಕವಾಗಿಯೂ ಪರಿಣಾಮಕಾರಿ | ಸಂಶೋಧನಾ ವಿದ್ಯಾರ್ಥಿಗಳ ವರದಿ |

Share

ಅಡಿಕೆ ಬೆಳೆಗಾರರಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಅಡಿಕೆಯ ವಿವಿಧ ಬಳಕೆಯ ಬಗ್ಗೆ ಈಗಾಗಲೇ ಹಲವು ಪ್ರಯತ್ನ ನಡೆಯುತ್ತಿದೆ. ಇದೀಗ ಅಡಿಕೆ ಸಿಪ್ಪೆಯ ಬಳಕೆಯಲ್ಲಿ ಇನ್ನೊಂದು ಸಂಶೋಧನಾ ವರದಿ ಬಹಿರಂಗವಾಗಿದೆ. ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ (NITK) ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ.

ಅಡಿಕೆ ಬೆಳೆಗಾರರು ಅಡಿಕೆಯ ಸುಲಿದ ನಂತರ ಸಿಪ್ಪೆಯನ್ನು ತ್ಯಾಜ್ಯವಾಗಿ ಬಳಕೆ ಮಾಡುತ್ತಾರೆ. ಅನೇಕರು ಬೆಂಕಿ ಹಾಕಿದರೆ, ಕೆಲವರು ಗೊಬ್ಬರವಾಗಿ ಬಳಕೆ ಮಾಡುತ್ತಾರೆ. ಗೊಬ್ಬರವಾಗಿ ಬಳಕೆ ಮಾಡುವಾಗಲೂ ಹಲವು ವಿಧಾನಗಳನ್ನು ಅನುಸರಿಸಬೇಕಿದೆ. ಅಡಿಕೆ ಸಿಪ್ಪೆಯನ್ನು ಸೊಳ್ಳೆ ನಿಯಂತ್ರಕ ಕಾಯಿಲ್‌ ಆಗಿಯೂ ಬಳಕೆ ಮಾಡುವ ಪ್ರಯತ್ನ ನಡೆದಿದೆ. ಇದೀಗ ಇನ್ನೂ ಒಂದು ಅಧ್ಯಯನ ನಡೆದಿದೆ, ಆಡಿಟೋರಿಯಂ ಅಥವಾ ಮೀಟಿಂಗ್ ಹಾಲ್​ನಲ್ಲಿ ಬರುವ ಅನಗತ್ಯ ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ  ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್​ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NITK) ಸಂಶೋಧನಾ ವಿದ್ಯಾರ್ಥಿಗಳು  ನಡೆಸಿದ ಸಂಶೋಧನೆಯಿಂದ ಬಹಿರಂಗವಾಗಿದೆ.

ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರೊ.ಪಿ.ಜಯರಾಜ್ ನೇತೃತ್ವದ ಸಂಶೋಧಕರು ಈ ಸಂಶೋಧನೆಯನ್ನು ನಡೆಸಿದ್ದಾರೆ. ಶಬ್ದ ನಿರೋಧಕ ಬೋರ್ಡ್​​ಗಳನ್ನು ರಚಿಸುವ ಮೂಲಕ ಶಬ್ದ ನಿರೋಧಕವಾಗಿ ಬಳಕೆ ಮಾಡಬಹುದು ಎಂದು ವರದಿಯಲ್ಲಿ ತಿಳಿಸಿದ್ದಾರೆ. ಅನಗತ್ಯ ಶಬ್ದವನ್ನು ನಿಯಂತ್ರಿಸಲು ಶಬ್ದ ಹೀರಿಕೊಳ್ಳುವ ವಸ್ತುಗಳನ್ನು ಬಳಸಲಾಗುತ್ತದೆ. ಈಗ ಪ್ಲಾಸ್ಟಿಕ್‌ ವಸ್ತುಗಳನ್ನು, ಮಡಕೆ, ಬೋರ್ಡ್‌ ಇತ್ಯಾದಿಗಳ ಬಳಕೆ ಮಾಡಲಾಗುತ್ತದೆ. ಆದರೆ ಅಡಿಕೆಯ ಸಿಪ್ಪೆ ಪರಿಸರ ಸ್ನೇಹಿಯೂ ಆಗಿದ್ದು, ಯಾವುದೇ ಸಮಸ್ಯೆ ಇಲ್ಲ ಎನ್ನುವುದು ವರದಿ.

“ಶಬ್ದ ಫಲಕಗಳನ್ನು ಹೆಚ್ಚು ಪರಿಸರ ಸ್ನೇಹಿ ಮತ್ತು ಜೈವಿಕ ಸಂಯೋಜನೆಯನ್ನಾಗಿ ಮಾಡಲು, ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಸಂಶೋಧಕರನ್ನು ಒಳಗೊಂಡ ತಂಡವು ಅಡಿಕೆ ಹೊಟ್ಟನ್ನು ಅನ್ವೇಷಿಸಲು ಪ್ರಾರಂಭಿಸಿತು. ಅದರಂತೆ ಫಲಿತಾಂಶವು ಸಕಾರಾತ್ಮಕವಾಗಿ ಬಂದಿದೆ” ಎಂದು ಜಯರಾಜ್ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

21 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

22 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

22 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

2 days ago