ಅಡಿಕೆ ಮಾರುಕಟ್ಟೆ ಏರಿಕೆಯನ್ನು ಕಾಣುತ್ತಿದೆ. ಈ ನಡುವೆಯೇ ಅಡಿಕೆಗೆ ಸಂಬಂಧಿಸಿದ ಸುದ್ದಿಗಳು ಸದ್ದು ಮಾಡುತ್ತಿವೆ. ಮ್ಯಾನ್ಮಾರ್ ಗಡಿಯಲ್ಲಿ ಬೃಹತ್ ಪ್ರಮಾಣದ ಅಡಿಕೆ ವಶವಾಗಿದೆ. ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಬೃಹತ್ ಪ್ರಮಾಣದ ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ತಡೆಹಿಡಿದಿದ್ದಾರೆ.
ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳು ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅರೆಸೇನಾ ಪಡೆಯ ಪಡೆಗಳು ಚಾಂಡೆಲ್ ಜಿಲ್ಲೆಯ ಚೆಹ್ಯಾಂಗ್ ಗ್ರಾಮದಲ್ಲಿ ಅಡಿಕೆ ಸಾಗಿಸುತ್ತಿದ್ದ ವಾಹನಗಳನ್ನು ತಡೆದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 5.29 ಕೋಟಿ ಮೌಲ್ಯದ 61.2 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.
ಈ ನಡುವೆ, ಭಾರತ-ಶ್ರೀಲಂಕಾ ನಡುವಿನ ಮುಕ್ತ ವ್ಯಾಪಾರ ವಹಿವಾಟು ಅಡಿಯಲ್ಲಿ ಕಸ್ಟಮ್ಸ್ ಸುಂಕ ವಿನಾಯಿತಿಗೆ ಅರ್ಹವಾಗಿವೆ ಎನ್ನುವ ವರದಿಯೊಂದು ಬಂದಿದೆ. ಈ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ನ್ಯಾಯಾಲಯ ಪ್ರಕಟಿಸಿದೆ ಎನ್ನುವ ವರದಿಯೊಂದು ಮಾಧ್ಯಮವೊಂದರಲ್ಲಿ ಪ್ರಕಟವಾಗಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…