ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು(Arecanut Import) ವಿಚಾರಕ್ಕೆ ಅಡಿಕೆ ಬೆಳೆಗಾರರು ಯಾವುದೇ ಆತಂಕ ಪಡಬೇಕಾಗಿಲ್ಲ. ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ವಿಚಾರದ ಕುರಿತು ಚರ್ಚಿಸಲು ಸಂಸದರ ನೇತೃತ್ವದಲ್ಲಿ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಅಡಿಕೆ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ, ರಾಜ್ಯ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಅರಗ ಜ್ಞಾನೇಂದ್ರ, ನೆರೆಯ ಭೂತಾನ್ ದೇಶವು ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಯುತ್ತಿದೆ. ಅಡಿ ಮಾರುಕಟ್ಟೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸತತ ಸಂಪರ್ಕದಲ್ಲಿದ್ದು, ಅಡಿಕೆ (Arecanut) ಆಮದು ವಿಚಾರವಾಗಿಯೂ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ. ನೆರೆಯ ಪುಟ್ಟ ದೇಶ ಭೂತಾನ್‌ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರ ಸರ್ಕಾರದ ನಿರ್ಧಾರದಿಂದ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮವಾಗುವುದಿಲ್ಲ. ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ ಸಂಸ್ಕರಿತ ಅಡಿಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿವೆ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.
ನೆರೆಯ ಪುಟ್ಟ ದೇಶ ಭೂತಾನ್‌ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರ ಸರ್ಕಾರದ ನಿರ್ಧಾರದಿಂದ ದೇಶೀಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮವಾಗುವುದಿಲ್ಲ. ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿವೆ. pic.twitter.com/Z3GI9hn9cg
— Araga Jnanendra (@JnanendraAraga) September 30, 2022
Advertisement