ಅಡಿಕೆ ಆಮದು ಸಂಗತಿ | ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಇಲ್ಲ | ಅಡಿಕೆ ಬೆಳೆಗಾರರಿಗೆ ಆತಂಕ ಬೇಡ | ಅರಗ ಜ್ಞಾನೇಂದ್ರ ಹೇಳಿಕೆ |

September 30, 2022
2:09 PM

ನೆರೆಯ ಭೂತಾನ್‌ ದೇಶದಿಂದ ಅಡಿಕೆ ಆಮದು(Arecanut Import) ವಿಚಾರಕ್ಕೆ  ಅಡಿಕೆ  ಬೆಳೆಗಾರರು ಯಾವುದೇ ಆತಂಕ ಪಡಬೇಕಾಗಿಲ್ಲ. ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ವಿಚಾರದ ಕುರಿತು ಚರ್ಚಿಸಲು ಸಂಸದರ ನೇತೃತ್ವದಲ್ಲಿ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಅಡಿಕೆ ಟಾಸ್ಕ್‌ ಫೋರ್ಸ್‌ ಸಮಿತಿ ಅಧ್ಯಕ್ಷ, ರಾಜ್ಯ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡ ಅರಗ ಜ್ಞಾನೇಂದ್ರ, ನೆರೆಯ ಭೂತಾನ್ ದೇಶವು ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಯುತ್ತಿದೆ. ಅಡಿ ಮಾರುಕಟ್ಟೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸತತ ಸಂಪರ್ಕದಲ್ಲಿದ್ದು, ಅಡಿಕೆ (Arecanut) ಆಮದು ವಿಚಾರವಾಗಿಯೂ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ. ನೆರೆಯ ಪುಟ್ಟ ದೇಶ ಭೂತಾನ್‌ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರ ಸರ್ಕಾರದ ನಿರ್ಧಾರದಿಂದ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮವಾಗುವುದಿಲ್ಲ. ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ ಸಂಸ್ಕರಿತ ಅಡಿಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿವೆ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ – ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ
October 21, 2026
9:27 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror