ಭೂತಾನ್ ದೇಶವು ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಯಾವುದೇ ಬದಲಾವಣೆ ಆಗದು ಎಂದು ಕೃಷಿ ಮತ್ತು ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಭಾರತದಲ್ಲಿ ಸುಮಾರು 15 ಲಕ್ಷ ಟನ್ ಅಡಿಕೆ ಬೆಳೆಯಲಾಗುತ್ತದೆ. ಭೂತಾನ್ ದೇಶದಲ್ಲಿ ಕೇವಲ 17 ಸಾವಿರ ಟನ್ ಅಡಿಕೆ ಬೆಳೆಯಲಾಗುತ್ತಿದೆ. ನಮ್ಮ ದೇಶದ ಬೆಳೆಯ 0.02 ಪ್ರಮಾಣದಷ್ಟು ಮಾತ್ರಾ ಅಲ್ಲಿ ಅಡಿಕೆ ಇದೆ. ಹೀಗಾಗಿ ಈ ಅಡಿಕೆ ಆಮದು ಕಾರಣದಿಂದ ಭಾರತದ ಅಡಿಕೆ ಮಾರುಕಟ್ಟೆಗೆ ಪರಿಣಾಮವಾಗದು. ಭೂತಾನ್ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಭೂತಾನ್ ಕೇಂದ್ರ ಸರ್ಕಾರಕ್ಕೆ ಮಾಡಿಕೊಂಡ ಕೋರಿಕೆಯಂತೆ ಒಂದು ವರ್ಷದ ಮಟ್ಟಿಗೆ ಅಡಿಕೆ ಆಮದು ಮಾಡಿಕೊಳ್ಳಲಾಗುತ್ತಿದೆಯಷ್ಟೇ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಪರವಾಗಿದೆ. ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗದಂತೆ ಹಿಂದೆಯೂ ಕೆಲಸ ಮಾಡಿದೆ. ಅಡಿಕೆ ಆಮದು ಮೇಲೆ ಅಧಿಕ ತೆರಿಗೆ ವಿಧಿಸಿದ ಕಾರಣದಿಂದ ಅಡಿಕೆ ಆಮದು ತಡೆಯಾಗಿತ್ತು ಹಾಗೂ ಅಡಿಕೆ ಇಂದು 450 ರಿಂದ 500 ರೂ. ಬೆಲೆಗೆ ಮಾರಾಟವಾಗುತ್ತಿದೆ ಎಂದ ಶೋಭಾ ಕರಂದ್ಲಾಜೆ ಅಡಿಕೆ ಕಳ್ಳಸಾಗಾಣಿಕೆಗೂ ಸರ್ಕಾರ ಕ್ರಮ ಕೈಗೊಂಡಿತ್ತು. ಈಗ ಭೂತಾನ್ ದೇಶದಿಂದ ಆಮದು ಕಾರಣದಿಂದ ಭಾರತದ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರದು ಎಂದು ಅವರು ಹೇಳಿದ್ದಾರೆ.
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…