ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕೃತವಾದ ಮಾಹಿತಿಯನ್ನು ವಾಣಿಜ್ಯ ಇಲಾಖೆ ನೀಡಿದ್ದು. ಆಮದು ದರ 251 ರೂಪಾಯಿಯಿಂದ 351 ರೂಪಾಯಿಗೆ ಏರಿಕೆ ಮಾಡಲಾಗುತ್ತಿದೆ. ಇದರಿಂದಾಗಿ ಆಮದು ಅಡಿಕೆ ದರ ಮುಂದೆ 351 ರೂಪಾಯಿ ನಿಗದಿಯಾಗಲಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಪರಿಣಾಮ ಬೀರಲಿದ್ದು. ದೇಶದ ಅಡಿಕೆ ಧಾರಣೆ ಏರಿಕೆ ಕಾಣುವ ನಿರೀಕ್ಷೆ ಇದೆ.
ಅಡಿಕೆ ಆಮದು ದರ ಏರಿಕೆ ಮಾಡಬೇಕು ಎಂದು ಅಡಿಕೆ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಸತತ ಪ್ರಯತ್ನ ಮಾಡಿತ್ತು. ಈಚೆಗೆ ಪುತ್ತೂರಿನಲ್ಲಿ ನಡೆದ ಕೃಷಿ ಯಂತ್ರ ಮೇಳದಲ್ಲೂ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದ್ದರು. ಇದೀಗ ಕೇಂದ್ರದ ವಾಣಿಜ್ಯ ಇಲಾಖೆಯು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಮಂಗಳವಾರ ನೋಟಿಫೀಕೇಶನ್ ಹೊರಡಿಸಿದೆ. ಈ ಮೂಲಕ ವಿದೇಶಿ ಅಡಿಕೆ ಆಮದು ಮೇಲೆ ಕಡಿವಾಣ ಬೀಳುವ ನಿರೀಕ್ಷೆ ಇದೆ.
ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯು ವಿವಿಧ ಕಾರಣಗಳಿಂದಾಗಿ ಇಳಿಕೆಯ ಹಾದಿಯಲ್ಲಿತ್ತು. ಇದೀಗ ಆಮದು ದರ ಏರಿಕೆಯ ನಂತರ ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಾಣುವ ನಿರೀಕ್ಷೆ ಇದೆ. ಹೊಸ ಚಾಲಿ ಅಡಿಕೆ ಹಾಗೂ ಹಳೆ ಎರಡರಲ್ಲೂ ಧಾರಣೆ ಏರಿಕೆಯ ನಿರೀಕ್ಷೆ ಇದೆ.
ರೂರಲ್ ಮಿರರ್ ನಿರೀಕ್ಷೆಯ ವರದಿ :
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…