ಅಡಿಕೆ ಮಾರುಕಟ್ಟೆ ಮತ್ತೆ ಹಿನ್ನಡೆ | ನಿರಂತರವಾಗಿ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ | 100 ಕ್ಕೂ ಹೆಚ್ಚು ಅಡಿಕೆ ಚೀಲ ವಶಕ್ಕೆ |

March 16, 2023
8:00 AM

ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣುತ್ತಿಲ್ಲ. ಕಾರಣಗಳು ಹಲವು. ಈ ನಡುವೆಯೇ ಬರ್ಮಾ ಅಡಿಕೆಯು ನಿರಂತರವಾಗಿ ಕಳ್ಳ ಸಾಗಾಣಿಕೆ ಮೂಲಕ ಆಗಮನವಾಗುತ್ತಿದೆ. ಕಳೆದ ಒಂದು ವಾರದಲ್ಲಿ  ಎರಡು ಬಾರಿ ಅಡಿಕೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಳೆದ ವಾರ 100 ಕ್ಕೂ ಹೆಚ್ಚು ಅಡಿಕೆ ಚೀಲ ವಶಕ್ಕೆ ತೆಗೆದುಕೊಂಡರೆ , ಅದಾದ ಬಳಿಕ ಮತ್ತೆ 22 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ.

Advertisement
Advertisement

ಅಕ್ರಮವಾಗಿ ಅಡಿಕೆ ಕಳ್ಳಸಾಗಣೆಯು ಮಿಜೋರಾಂ ರಾಜ್ಯದ ಕಳವಳಕ್ಕೆ  ಕಾರಣವಾಗಿದೆ. ‘ಈಶಾನ್ಯದ ಸೆಂಟಿನೆಲ್ಸ್’ ಎಂದು ಸರಿಯಾಗಿ ನಾಮಕರಣಗೊಂಡಿರುವ ಅಸ್ಸಾಂ ರೈಫಲ್ಸ್ ಮಿಜೋರಾಂನಲ್ಲಿ ಕಳ್ಳಸಾಗಣೆ  ವಿರುದ್ಧ ಕಾರ್ಯಾಚರಣೆಗಳನ್ನು ಪ್ರಾರಂಭಿಸುವಲ್ಲಿ ಯಶಸ್ವಿಯಾಗಿದೆ.ಈಚೆಗೆ ಸುಮಾರು 22.4 ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ.

Advertisement

ಅದಕ್ಕೂ ಮೊದಲು ಅಸ್ಸಾಂನ ಗೌರಿಪುರದಲ್ಲಿ 101 ಗೋಣಿ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಗೌರಿಪುರ ಪ್ರದೇಶದ ಕಾಲಿಬರಿ ಎಂಬಲ್ಲಿ ಪೊಲೀಸರು ಅಪಾರ ಪ್ರಮಾಣದ ಅಡಿಕೆಯೊಂದಿಗೆ ಮೂವರನ್ನು ಬಂಧಿಸಿದ್ದಾರೆ. ಬರ್ಪೇಟಾದಿಂದ ಪಶ್ಚಿಮ ಬಂಗಾಳಕ್ಕೆ ಬರ್ಮಾದ ಅಡಿಕೆ ಸಾಗಣೆ ಮಾಡಲಾಗುತ್ತಿದೆ ಎಂದು ವಿಚಾರಣೆ ವೇಳೆ ತಿಳಿದುಬಂದಿತ್ತು.

ಇದಕ್ಕೂ ಮೊದಲು ಫೆಬ್ರವರಿ 25 ರಂದು ಅಸ್ಸಾಂ ಪೊಲೀಸರು ಅಸ್ಸಾಂನ ಹೈಲ್ಕಂಡಿ ಜಿಲ್ಲೆಯ ಬಿಲೈಪುರ್ ಗ್ರಾಮದಲ್ಲಿ 104 ಚೀಲ ಬರ್ಮಾ ಅಡಿಕೆಯನ್ನು ವಶಪಡಿಸಿಕೊಂಡಿದ್ದರು.

Advertisement

ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆ ಅಕ್ರಮವಾಗಿ ಭಾರತದೊಳಕ್ಕೆ ಆಗಮನವಾಗುತ್ತಿದೆ. ಇದರಿಂದ ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ
July 26, 2024
11:51 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ ಮಾತು ನಡೆಯುತ್ತಿಲ್ಲ : ರೈತರು ಇಂತ ಕಡೆ ಪ್ರಶ್ನಿಸುವಂತಾಗಬೇಕು
July 26, 2024
11:35 PM
by: The Rural Mirror ಸುದ್ದಿಜಾಲ
ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ
July 26, 2024
3:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 26-07-2024 | ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ | ಜುಲೈ 31 ರ ತನಕವೂ ಗಾಳಿ ಸಹಿತ ಮಳೆ ಸಾಧ್ಯತೆ |
July 26, 2024
12:40 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror