ಈ ಬಾರಿಯ ಮಳೆಯಿಂದಾಗಿ ಅಡಿಕೆಗೆ ಕೊಳೆರೋಗ ಬಾಧಿಸಿದೆ. ಇದೀಗ ಬೆಳೆ ವಿಮೆ ಪಾವತಿಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಬೇಕು ಎಂದು ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆಯಲ್ಲಿ ನಿರ್ಣಯ ಮಾಡಲಾಗಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಅಧ್ಯಕ್ಷತೆಯನ್ನು ನಡೆದ ಸಂಘದ ಮಹಾಸಭೆಯಲ್ಲಿ ಈ ನಿರ್ಣಯ ಮಾಡಲಾಗಿದೆ. ಈ ಬಾರಿಯ ಮಳೆಯಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿದೆ. ಹೀಗಾಗಿ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ. ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಅಡಿಕೆ ಬೆಳೆಗಾರರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಬೆಳೆ ವಿಮೆಯನ್ನೂ ಸಂಘದ ಸದಸ್ಯರು ಪಾವತಿ ಮಾಡಿದ್ದಾರೆ. ಈಗ ಅತಿ ಶೀಘ್ರದಲ್ಲಿ ಬೆಳೆ ವಿಮೆ ಪಾವತಿಗೆ ಶೀಫ್ರದಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ಮಹಾಸಭೆ ನಿರ್ಣಯಿಸಿತು. ಸಂಘದ ನಿರ್ದೇಶಕ ಮುಳಿಯ ಕೇಶವ ಭಟ್ ಹಾಗೂ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ದ ಕ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅವರು ವಿಷಯ ಪ್ರಸ್ತಾಪಿಸಿ , ಅಡಿಕೆ ಬೆಳೆಗಾರರಿಗೆ ಈ ಬಾರಿ ವಿಪರೀತ ನಷ್ಟವಾಗಿದೆ, ಪರಿಹಾರ ಲಭ್ಯವಾಗಬೇಕು, ಇದಕ್ಕಾಗಿ ತಕ್ಷಣದ ಕ್ರಮ ಅಗತ್ಯ ಎಂದರು. ಈಗ ಅತಿ ಶೀಘ್ರದಲ್ಲಿ ಬೆಳೆ ವಿಮೆ ಪಾವತಿಗೆ ಶೀಫ್ರದಲ್ಲಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲು ಕ್ರಮ ಕೈಗೊಳ್ಳಲು ಈ ಬಗ್ಗೆ ಮಹಾಸಭೆಯಲ್ಲಿ ನಿರ್ಣಯವಾಗಬೇಕು ಎಂದು ಒತ್ತಾಯಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…