ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

August 3, 2025
12:10 PM
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ ಕೊಳೆರೋಗಕ್ಕೆ ಹಾನಿಯಾಗಿರುವ ಬಗ್ಗೆ ಹೆಚ್ಚಿನ ಮಂದಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಾರಿಯ ಭಾರೀ ಮಳೆಗೆ ಅಡಿಕೆ ಕೊಳೆರೋಗ ವ್ಯಾಪಕವಾಗಿದೆ. ಮೇ. 17 ಸುಮಾರಿಗೆ ಆರಂಭವಾದ ಮಳೆಯು ನಿರಂತರವಾಗಿ ಜುಲೈ ಅಂತ್ಯದವರೆಗೆ ಸುರಿದಿದೆ. ಪರಿಣಾಮವಾಗಿ ಅಡಿಕೆ ಕೊಳೆರೋಗ ವ್ಯಾಪಕವಾಗಿ ಬಾಧಿಸಿದೆ. ಈ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ದ ರೂರಲ್‌ ಮಿರರ್.ಕಾಂ ಸಮೀಕ್ಷೆ ನಡೆಸಿತ್ತು. ಈ ಮಾಹಿತಿ ಪ್ರಕಾರ ಶೇ.95 ರಷ್ಟು ಅಡಿಕೆ ಬೆಳೆಗಾರರು ಕೊಳೆರೋಗ ಬಾಧಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನಷ್ಟು ಕೊಳೆರೋಗ ಹರಡಿರುವ ಬಗ್ಗೆ ಅಂದಾಜಿಸಲಾಗಿದೆ.

ಸಮೀಕ್ಷೆಯಲ್ಲಿ ಇದುವರೆಗೆ 430 ರಷ್ಟು ಅಡಿಕೆ ಬೆಳೆಗಾರರು ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಿ ಲಭ್ಯವಾದ ಮಾಹಿತಿ ಪ್ರಕಾರ ಶೇ.95 ರಷ್ಟು ಅಡಿಕೆ ಬೆಳೆಗಾರರು ಕೊಳೆರೋಗ ಬಾಧಿಸಿದೆ ಎಂದು ಮಾಹಿತಿ ನೀಡಿದ್ದು, ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ ಕೊಳೆರೋಗಕ್ಕೆ ಹಾನಿಯಾಗಿರುವ ಬಗ್ಗೆ ಹೆಚ್ಚಿನ ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ಅಂದರೆ ಈ ಬಾರಿ ಕೊಳೆರೋಗದಿಂದ ವ್ಯಾಪಕವಾಗಿ ಅಡಿಕೆ ಹಾನಿಯಾಗಿರುವುದು ಇಲ್ಲಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಉತ್ತರಕನ್ನಡ, ಶಿವಮೊಗ್ಗ , ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ತುಮಕೂರು ಜಿಲ್ಲೆಗಳ ಅಡಿಕೆ ಬೆಳೆಗಾರರು ಸಮೀಕ್ಷೆಯಲ್ಲಿ ಭಾಗವಹಿಸಿದ್ದಾರೆ.

ಜುಲೈ 31 ಕ್ಕೆ ಸಮೀಕ್ಷೆ ಕೊನೆಗೊಳಿಸುವ ಬಗ್ಗೆ ನಿರ್ಧರಿಸಲಾಗಿತ್ತು, ಆದರೆ ಆಗಸ್ಟ್‌ ಮೊದಲ ವಾರದಲ್ಲಿ ಬಿಸಿಲಿನ ವಾತಾವರಣ ಕಂಡು ಬಂದ ಹಿನ್ನೆಲೆಯಲ್ಲಿ, ಇನ್ನಷ್ಟು ಕೊಳೆರೋಗ ಬಾಧಿಸಿರುವ ತೋಟಗಳು ಕಂಡುಬರುವ ಸಾಧ್ಯತೆ ಇದೆ ಎಂದು ಅಡಿಕೆ ಬೆಳೆಗಾರರ ಸಂಘದ ಸದಸ್ಯರು ಮಾಹಿತಿ ನೀಡಿದ್ದು,  ಇನ್ನೂ 10 ದಿನಗಳ ಕಾಲ ಸಮೀಕ್ಷೆ ಮುಂದುವರಿಸುವ ಬಗ್ಗೆ ತಿಳಿಸಿದ್ದಾರೆ. ಹೀಗಾಗಿ ಆ.10 ರವರೆಗೆ ಸಮೀಕ್ಷೆಯನ್ನು ಮುಂದುವರಿಸಲಾಗಿದೆ. ನಂತರ ಸಮಗ್ರವಾದ ಮಾಹಿತಿಯನ್ನು “ದ ರೂರಲ್‌ ಮಿರರ್‌.ಕಾಂ” ನಲ್ಲಿ ತೆರೆದಿಡಲಾಗುತ್ತದೆ.  ಬಳಿಕ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ಶಾಸಕರು, ಸಂಸದರುಗಳ ಹಾಗೂ ಸರ್ಕಾರದ ಗಮನ ಸೆಳೆಯಲಾಗುತ್ತದೆ. ಅದಾದ ಬಳಿಕ ಕೊಳೆರೋಗ ಇಲ್ಲದೇ ಇರುವ ಕೃಷಿಕರ ಕೃಷಿ ಕ್ರಮಗಳ ಬಗ್ಗೆ ಹಾಗೂ ಸಮಗ್ರ ಕೃಷಿ ಚಟುವಟಿಕೆಗಳ ಬಗ್ಗೆ ವಿಜ್ಞಾನಿಗಳ ಜೊತೆಗೆ ಚರ್ಚಿಸಿ ಉತ್ತಮ ಕೃಷಿ ಕ್ರಮಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಲು ಸಮೀಕ್ಷಾ ತಂಡವು ಯೋಜನೆ ಹಾಕಿಕೊಂಡಿದೆ. ಸಮೀಕ್ಷೆಯಲ್ಲಿ ಇದುವರೆಗೆ ಭಾಗವಹಿಸದೇ ಇರುವ ಕೃಷಿಕರು ಲಿಂಕ್‌ ಮೂಲಕ ಕೊಳೆರೋಗದ ಮಾಹಿತಿಯನ್ನು ನೀಡಲು ಮತ್ತೊಮ್ಮೆ ಮನವಿ ಮಾಡಲಾಗುತ್ತಿದೆ.(ಈಗಾಗಲೇ ಒಮ್ಮೆ ಪ್ರತಿಕ್ರಿಯೆ ನೀಡಿದವರಿಗೆ ಮತ್ತೆ ಅವಕಾಶಗಳು ಇಲ್ಲ) ಲಿಂಕ್‌ ಇಲ್ಲಿದೆ…. https://forms.gle/iWXV9sfLH5TJcbvT7

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror