Advertisement
ಸುದ್ದಿಗಳು

#Arecanut | ಅಡಿಕೆ ಎಲೆ ಚುಕ್ಕಿ ರೋಗದ ಸಮಸ್ಯೆ | ಸಚಿವರ ನೇತೃತ್ವದಲ್ಲಿ ಸಭೆ |

Share
ಮಲೆನಾಡು ಹಾಗೂ ಕರಾವಳಿ ಭಾಗದ ಕಡೆಗಳಲ್ಲಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕಿ ರೋಗದ ಸಮಸ್ಯೆ ಕಂಡುಬಂದಿದ್ದು, ಇದರಿಂದಾಗಿ ರೈತರಿಗೆ ಹಲವು ಸಂಕಷ್ಟ ಎದುರಾಗಿದೆ. ಈ ವಿಚಾರದ ಬಗ್ಗೆ ಶುಕ್ರವಾರ ಸಚಿವರ ಜೊತೆಗೆ ಸಭೆ ನಡೆಯಿತು.
ಎಲೆಚುಕ್ಕಿ ರೋಗದಿಂದ ಉಂಟಾದ ಸಮಸ್ಯೆ ಹಾಗೂ ನಷ್ಟದ ಬಗ್ಗೆ ಸಮೀಕ್ಷೆ ನಡೆಸುವುದು ಹಾಗೆ ಅಡಿಕೆ ಬೆಳೆಗಾರರಿಗೆ ಉಚಿತ ಔಷಧ, ದೋಟಿ ನೀಡಲಾಗುವುದು. ಅಡಿಕೆಗೆ ಪರ್ಯಾಯವಾಗಿ ಇಲಾಖೆ ಗುರುತಿಸಿರುವ ಬೆಳೆಯನ್ನು ಬೆಳೆಯಲು ಅವಕಾಶ ಹಾಗೂ ರಿಯಾಯಿತಿ ಕಲ್ಪಿಸಿ , ನಿರ್ಧಾರ ರೈತರು ಕೈಗೊಳ್ಳಲು ತೀರ್ಮಾನಿಸಲಾಗಿದೆ. ಸರ್ಕಾರದಿಂದ ಯಾವ ರೀತಿಯಲ್ಲಿ ಅಡಿಕೆ ಬೆಳೆಗಾರರಿಗೆ ನೆರವು ಕಲ್ಪಿಸಬಹುದೆನ್ನುವ ಬಗ್ಗೆಯೂ ಸಿಎಂ ಜೊತೆ ಚರ್ಚಿಸಲು ನಿರ್ಧರಿಸಲಾಗಿದೆ.
ಈ ಸಂದರ್ಭದಲ್ಲಿ ಅಡಿಕೆ ಟಾಸ್ ಪೋರ್ಸ್ ಅಧ್ಯಕ್ಷ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ, ತೋಟಗಾರಿಕೆ ಸಚಿವ ಮುನಿರತ್ನ , ಮೀನುಗಾರಿಕೆ ಸಚಿವ ಎಸ್.ಅಂಗಾರ , ತೋಟಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಎಲೆ ಚುಕ್ಕಿ ರೋಗದಿಂದಾಗಿ ಮಲೆನಾಡು, ಕರಾವಳಿಯ ಜಿಲ್ಲೆಗಳ ಅಡಿಕೆ ತೋಟಗಳಲ್ಲಿ ಮರಗಳಿಗೆ ಹಾನಿಯಾಗುತ್ತಿದೆ. ಇದರಿಂದಾಗಿ ಬೆಳೆಗಾರರು ಆತಂಕಗೊಂಡಿದ್ದಾರೆ. ಈ ವರ್ಷ ಮಳೆಯೂ ಹೆಚ್ಚಾಗಿದ್ದು, ಕೊಳೆ ರೋಗ ಸಹ ಅಡಿಕೆಯನ್ನು ಕಾಡುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

6 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

6 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

6 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

15 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

15 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

17 hours ago