ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡು ಕೃಷಿಕರು ಕಂಗಾಲಾಗಿದ್ದಾರೆ. ಹೀಗಾಗಿ ಸೂಕ್ತ ಪರಿಹಾರ ನೀಡಲು ಅಡಿಕೆ ಬೆಳೆಗಾರರ ಸಂಘಟನೆಗಳು ಈಗಾಗಲೇ ಒತ್ತಾಯಿಸಿವೆ. ಇದೀಗ ಸರ್ಕಾರದ ಮೇಲೆ ಒತ್ತಡ ಹೇರಲು ಅ.3 ರಂದು ತೀರ್ಥಹಳ್ಳಿ ಪಟ್ಟಣದ ಕೆಟಿಕೆ ಸಭಾಂಗಣದಲ್ಲಿ ರೈತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಕೃಷಿಕ ಸಮಾಜದ ಅಧ್ಯಕ್ಷ ಬಾಳೇಹಳ್ಳಿ ಪ್ರಭಾಕರ್ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ಎಲೆಚುಕ್ಕೆ ರೋಗ ವ್ಯಾಪಕವಾಗಿದೆ. ಇದೀಗ ತೀರ್ಥಹಳ್ಳಿ ತಾಲೂಕಿನಾದ್ಯಂತ ಅಡಿಕೆಗೆ ವ್ಯಾಪಿಸುತ್ತಿರುವ ಮಾರಣಾಂತಿಕ ಎಲೆ ಚುಕ್ಕೆ ರೋಗ ರೈತರ ಕಂಗಾಲಾಗಿದ್ದಾರೆ. ಮಲೆನಾಡಿನ ರೈತರು ಅನೇಕ ಸಮಸ್ಯೆಗಳಿಂದ ನಲುಗಿದ್ದು, ಸರ್ಕಾರವನ್ನು ಎಚ್ಚರಿಸಲು ರೈತರ ಸಮಾವೇಶಕ್ಕೆ ಕೃಷಿಕ ಸಮಾಜ ಸಜ್ಜುಗೊಂಡಿದೆ. ಸಮಾವೇಶದಲ್ಲಿ ರೂತರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು. ಮಲೆನಾಡಿನ ಬಹುತೇಕ ಅಡಿಕೆ ಬೆಳೆಗಾರರ ಪ್ರದೇಶದಲ್ಲಿ ಅಡಿಕೆ ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ ಎಂದು ಅವರು ಹೇಳಿದರು.