ಅಡಿಕೆ ಎಲೆಚುಕ್ಕಿ ರೋಗ ಹಾಗೂ ರೋಗ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮವು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಗುತ್ತಿಗಾರು ಸಹಕಾರಿ ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.
ಸಭಾಧ್ಯಕ್ಷತೆಯನ್ನು ಸಹಕಾರಿ ಸಂದ ಅಧ್ಯಕ್ಷ ವೆಂಕಟ್ ದಂಬೆಕೋಡಿ ವಹಿಸಿದ್ದರು. ಸಹಕಾರಿ ಸಂಘದ ನಿರ್ದೇಶಕ, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ ವಿ ತೀರ್ಥರಾಮ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತಿಥಿಗಳಾಗಿ ಸಹಕಾರಿ ಸಂಘದ ನಿರ್ದೇಶಕ, ರಬ್ಬರ್ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್, ಗ್ರಾಪಂ ಅಧ್ಯಕ್ಷೆ ರೇವತಿ ಆಚಳ್ಳಿ, ದೇವಚಳ್ಳ ಗ್ರಾಪಂ ಅಧ್ಯಕೆ ಸುಲೋಚನಾ ದೇವ, ತೋಟಗಾರಿಕಾ ತಾಲೂಕು ಅಧಿಕಾರಿ ಸುಹಾನ , ಪಂಜ ಪರಿವಾರ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ, ಗುತ್ತಿಗಾರು ಸಹಕಾರಿ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಿಪಿಸಿಆರ್‌ಐ ವಿಜ್ಞಾನಿ ಡಾ.ಭವಿಷ್ಯ ಅವರು ಮಾಹಿತಿ ನೀಡುವರು.
ತೋಟಗಾರಿಕಾ ಇಲಾಖೆ, ಐಸಿಸಿಒಎ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಸಹಯೋಗದೊಂದಿಗೆ ಮಾಹಿತಿ ಕಾರ್ಯಕ್ರಮ ಆಯೋಜನೆಗೊಂಡಿತ್ತು.