ಅಡಿಕೆ ಎಲೆ ಚುಕ್ಕಿ ರೋಗ | ಈ ಬಾರಿ ಕೆಲವು ಕಡೆ ಗಂಭೀರ | ಕೆಲವು ಕಡೆ ನಿಯಂತ್ರಣ | ಎಚ್ಚರಿಕೆ ಅಗತ್ಯ |

October 6, 2023
2:53 PM
ಅಡಿಕೆ ಎಲೆ ಚುಕ್ಕಿ ರೋಗ ಈ ಬಾರಿ ಕೆಲವು ಪ್ರದೇಶಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ. ಸೂಕ್ತ ಔಷಧಿ ಸಿಂಪಡಣೆಗೆ ಇಲಾಖೆ ಸಲಹೆ ನೀಡಿದೆ. ಈ ನಡುವೆ ಕರಾವಳಿ ಹಾಗೂ ಮಲೆನಾಡಿನ 7 ಜಿಲ್ಲೆಗಳಲ್ಲಿ 53,977.04 ಹೆಕ್ಟೇರ್ ಪ್ರದೇಶಗಳಲ್ಲಿರುವ ಅಡಿಕೆ ತೋಟಗಳು ಎಲೆಚುಕ್ಕಿ ರೋಗದ ಬಾಧೆಯಿಂದ ಹಾನಿಗೊಂಡಿವೆ ಎಂದು ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಕಳೆದ ವರ್ಷ ಅಡಿಕೆ ಬೆಳೆಗಾರರನ್ನು ಕಾಡಿದ್ದ ಎಲೆ ಚುಕ್ಕಿ ರೋಗ ಈ ಬಾರಿ ಕೆಲವು ಪ್ರದೇಶಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ. ಇನ್ನೂ ಕೆಲವು ಪ್ರದೇಶಗಳಲ್ಲಿ ನಿಯಂತ್ರಣದಲ್ಲಿದೆ. ಹೀಗಿದ್ದರೂ ಅಡಿಕೆ ಬೆಳೆಗಾರರು ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕಿದೆ.

Advertisement
Advertisement

ದಾವಣಗೆರೆ ಜಿಲ್ಲೆಯಲ್ಲಿ ಕಾಣಸಿಕೊಂಡಿರುವ ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗದ ಬಗ್ಗೆ ರೈತರು ಈ ಬಾರಿ ಆತಂಕ ಪಡುವ ಅಗತ್ಯವಿಲ್ಲ ಎಂದು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಬಸವನಗೌಡ ಎಂ.ಜಿ. ಬಸವನಾಳ್ ಗ್ರಾಮದಲ್ಲಿ ಹಮ್ಮಿಕೊಂಡ ಅಡಿಕೆ ಬೆಳೆಯ ಸಮಗ್ರ ಮಾಹಿತಿ ಶಿಬಿರದಲ್ಲಿ ಮಾಹಿತಿ ನೀಡಿದ್ದರು. ಈ ಬಾರಿ ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಹಾಗೂ ವಾತಾವರಣದಲ್ಲಿ ಆದ್ರತೆ ಹೆಚ್ಚಿರುವ ಕಡೆ ಎಲೆ ಚುಕ್ಕೆಯ ಹಾನಿ ಪರಿಣಾಮಕಾರಿಯಾಗಿರುತ್ತದೆ. ದಾವಣಗೆರೆ ಜಿಲ್ಲೆಯಲ್ಲಿ ಈ ವರ್ಷ ಮಳೆಯ ಪ್ರಮಾಣ ಕಡಿಮೆ ಹಾಗೂ ಶುಷ್ಕ ವಾತಾವರಣವಿದೆ. ಇಲ್ಲಿ ಇದರ ತೀವ್ರತೆ ಕಡಿಮೆ ಹಾಗಾಗಿ ರೈತರು ಆತಂಕಕ್ಕೆ ಒಳಗಾಗದೇ ಭಾದಿತ ತೋಟಗಳಲ್ಲಿ ಹೆಕ್ಸಾಕೊನೋಜೋಲ್ 1 ಮಿಲೀ / ಪ್ರತೀ ಲೀಟರ್ ನೀರಿಗೆ ಬೆರಸಿ ಸಿಂಪಡಿಸಬೇಕೆಂದು ಮಾಹಿತಿ ನೀಡಿದರು.

Advertisement

ಆದರೆ ಈ ಬಾರಿ ಶಿರಸಿ, ಸಾಗರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಎಲೆಚುಕ್ಕಿ ರೋಗ ವಿಸ್ತರಣೆಯಾಗಿದೆ.ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಈ ಬಾರಿ ಕೂಡಾ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದೆ. ರೋಗ ನಿಯಂತ್ರಣಕ್ಕೆ ಅಡಿಕೆ ಬಳೆಗಾರರು ಪ್ರಯತ್ನ ಪಡುತ್ತಿದ್ದಾರೆ. ರೋಗದ ಬಗ್ಗೆ ಆತಂಕ ಪಡಬೇಕಾಗಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ. ಅಡಿಕೆ ಬೆಳೆಗಾರರು ಸೂಕ್ತ ಔಷಧಿ ಸಿಂಪಡಣೆಯ ಕಾರ್ಯದಲ್ಲಿದ್ದಾರೆ ಎಂದು ಹೇಳುತ್ತಾರೆ ಅಡಿಕೆ ಬೆಳೆಗಾರರ ಗಜಾನನ ಹೆಗಡೆ.

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಈ ಬಾರಿ ಎಲೆ ಚುಕ್ಕಿ ರೋಗ ಕಂಡುಬಂದಿದೆ.ಕರಾವಳಿ ಹಾಗೂ ಮಲೆನಾಡಿನಲ್ಲಿ  ಅಡಿಕೆಗೆ ವ್ಯಾಪಕವಾಗಿ ಹರಡಿರುವ ಎಲೆಚುಕ್ಕಿ ರೋಗದಿಂದ ತೊಂದರೆ ಅನುಭವಿಸಿರುವ ಅಡಿಕೆ ಬೆಳೆಗಾರರಿಗೆ 225 ಕೋಟಿ ರೂ.ಗಳ ಪರಿಹಾರಕ್ಕೆ ಪ್ರಸ್ತಾವನೆಯನ್ನು ಕೇಂದ್ರ  ಸರ್ಕಾರಕ್ಕೆ ಸಲ್ಲಿಸಲಾಗಿದೆ.

Advertisement

ಕರಾವಳಿ ಹಾಗೂ ಮಲೆನಾಡಿನ 7 ಜಿಲ್ಲೆಗಳಲ್ಲಿ 53,977.04 ಹೆಕ್ಟೇರ್ ಪ್ರದೇಶಗಳಲ್ಲಿರುವ ಅಡಿಕೆ ತೋಟಗಳು ಎಲೆಚುಕ್ಕಿ ರೋಗದ ಬಾಧೆಯಿಂದ ಹಾನಿಗೊಂಡಿವೆ. ಸಂತ್ರಸ್ತ ಅಡಿಕೆ ಬೆಳೆಗಾರರಿಗೆ ಪರಿಹಾರಕ್ಕೆ ಕಾಸರಗೋಡಿನ ಕೇಂದ್ರೀಯ ಸಂಶೋಧನಾ ಸಂಸ್ಥೆ (ಸಿಪಿಸಿಆರ್‌ಐ) ನೇತೃತ್ವದ ರಾಷ್ಟ್ರೀಯ ವೈಜ್ಞಾನಿಕ ಸಮಿತಿ ಶಿಫಾರಸು ಮಾಡಿದೆ.

ಕಳೆದ ಬಾರಿ ವ್ಯಾಪಕವಾಗಿ ಎಲೆಚುಕ್ಕಿ ರೋಗ ಹರಡಿರುವ ವೇಳೆ ಅಧ್ಯಯನ ನಡೆಸಲಾಗಿತ್ತು. ರಾಷ್ಟ್ರೀಯ ವೈಜ್ಞಾನಿಕ ಸಮಿತಿಯು ಎಲೆಚುಕ್ಕಿ ರೋಗ ಬಾಧಿತ ಪ್ರದೇಶಗಳಿಗೂ ಭೇಟಿ ನೀಡಿ ಅಧ್ಯಯನ ನಡೆಸಿ ಸಮಗ್ರ ವರದಿ ಸಿದ್ಧಪಡಿಸಿ, ಕಳೆದ ಸೆಪ್ಟೆಂಬರ್‌ನಲ್ಲಿ ಕೇಂದ್ರ ಕೃಷಿ ಸಚಿವಾಲಯ ಹಾಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.ವರದಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಒಟ್ಟು 7 ಜಿಲ್ಲೆಗಳಲ್ಲಿ ಎಲೆಚುಕ್ಕಿ ರೋಗದಿಂದಾಗಿ 3,92 504 ಹೆಕ್ಟೇರ್ ಅಡಿಕೆ ಬೆಳೆಯುವ ಪ್ರದೇಶಗಳ ಪೈಕಿ 53,977 ಹೆಕ್ಟೇರ್ ಪ್ರದೇಶಗಳಲ್ಲಿರುವ ಅಡಿಕೆ ಬೆಳೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Advertisement

ನಿಯಂತ್ರಣಕ್ಕೆ ಔಷಧಿ: ಎಲೆಚುಕ್ಕಿ ರೋಗ ಬಾಧಿತ ಅಡಿಕೆ ತೋಟಗಳಿಗೆ ಜೂನ್-ಆಗಸ್ಟ್ ಅವಧಿಯಲ್ಲಿ ಮೊದಲ ಹಂತದಲ್ಲಿ ಬೋರ್ಡೋ ಸಿಂಪಡಿಸಲು ಶಿಫಾರಸು ಮಾಡಲಾಗಿದೆ. ಎರಡನೇ ಹಂತದಲ್ಲಿ ಅಂದರೆ ಸೆಪ್ಟೆಂಬರ್ -ಅಕ್ಟೋಬರ್ ಅವಧಿಯಲ್ಲಿ ಪ್ರೋಪಿಕೊನಜೋಲ್ ಅಥವಾ ಟೆಬುಕೊನಜೋಲ್ ಅಥವಾ ಹೆಕ್ಸಾಕೊನಜೋಲ್‌ನ್ನು ಸಿಂಪಡಿಸುವಂತೆ ಸಲಹೆ ನೀಡಲಾಗಿದೆ.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?
May 15, 2025
10:06 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?
May 15, 2025
7:45 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …
May 14, 2025
9:43 PM
by: ಪ್ರಬಂಧ ಅಂಬುತೀರ್ಥ
ಅಡಿಕೆ ಧಾರಣೆ ಏರುಪೇರು ಯಾಕಾಗಿ?
May 14, 2025
2:43 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group