ಅಡಿಕೆ ಎಲೆಚುಕ್ಕಿ ರೋಗ-ಹಳದಿ ಎಲೆ ರೋಗ | ಇನ್ನೂ ಮುಗಿದಿಲ್ಲವೇ ವೈಜ್ಞಾನಿಕ ಅಧ್ಯಯನ, ವಿಜ್ಞಾನಿಗಳ ಜೊತೆ ಚರ್ಚೆ….! | ಹಾಗಿದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೃಷಿ ಸಚಿವರು ಹೇಳಿದ್ದು ಏನು ?

October 15, 2023
11:18 PM
ಅಡಿಕೆ ಹಳದಿ ಎಲೆ ರೋಗ ಹಾಗೂ ಎಲೆಚುಕ್ಕಿ ರೋಗದ ವಿಚಾರದಲ್ಲಿ ಕಳೆದ 5 ವರ್ಷಗಳಿಂದಲೂ ಅಧ್ಯಯನ ಹಾಗೂ ತಜ್ಞರ ಸಮಿತಿ ನೇಮಕ, ವರದಿ ಪಡೆಯುವುದು ನಡೆಯುತ್ತಲೇ ಇದೆ. ಇನ್ನೂ ಕೂಡಾ ಈ  ಸಮಿತಿಯ ಕೆಲಸ ಏನಾಗುತ್ತಿದೆ ? ಸಚಿವರು ಹಾಗಿದ್ದರೆ ಹೇಳಿದ್ದೇನು..?

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಭಾನುವಾರ ಭೇಟಿ ನೀಡಿ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದರು. ಅದಾದ ಬಳಿಕ ಮಾಧ್ಯಮ ಪ್ರನಿಧಿಗಳೊಂದಿಗೆ ಮಾತನಾಡಿ, ಅಡಿಕೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಕ ಮಾಡಲಾಗಿದೆ. ವರದಿ ಬಂದ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವರು, ಶಿವಮೊಗ್ಗ, ದಕ್ಷಿಣಕನ್ನಡ ಹಾಗೂ ಉಡುಪಿ ಭಾಗದಲ್ಲಿ ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗ ನಿಯಂತ್ರಣಕ್ಕೆ  ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಈ ರೋಗಗಳಿಂದ ಈ ಭಾಗದ ರೈತರು ಸಮಸ್ಯೆಗೆ ಒಳಗಾಗಿದ್ದಾರೆ, ಆದ್ದರಿಂದ ಈ ರೋಗ ನಿಯಂತ್ರಣಕ್ಕೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಹಳದಿ ರೋಗ ಮತ್ತು ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಕ ಮಾಡಲಾಗಿದೆ. ವರದಿ ಬಂದ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಕಾಂಗ್ರೆಸ್‌ ಸರ್ಕಾರ ಅನೇಕ ವಿನೂತನ ಯೋಜನೆಗಳನ್ನು ರೈತರಿಗಾಗಿ ಜಾರಿ ಮಾಡಿದೆ. ರೈತರ ಹಿತಕ್ಕಾಗಿ ಇನ್ನಷ್ಟು ವಿಶೇಷ ಯೋಜನೆಗಳನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

Advertisement

ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂಬುದಾಗಿ ಗುರುತಿಸಲಾಗಿದೆ. ಹೆಚ್ಚುವರಿಯಾಗಿ ಮತ್ತೆ 21 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗುತ್ತದೆ. ಈ ತಾಲೂಕುಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲಾಗುವುದು.ಈಗಾಗಲೇ ರಾಜ್ಯದ 90% ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ.ಇನ್ನು ಕೇವಲ 20 ತಾಲೂಕುಗಳನ್ನು ಮಾತ್ರ ಬರ ಪೀಡಿತ ಎಂದು ಘೋಷಿಸಲಾಗಿಲ್ಲ.ಅಲ್ಲೂ ಬರದ ಛಾಯೆ ಇದೆ ಎಂದು ತಿಳಿದು ಬಂದಲ್ಲಿ ಮುಂದಿನ ಹಂತದಲ್ಲಿ ಈ ತಾಲೂಕುಗಳನ್ನು ಕೂಡಾ ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗುತ್ತದೆ ಎಂದರು.

ಇನ್ನೂ ಮುಗಿದಿಲ್ಲವೇ ವೈಜ್ಞಾನಿಕ ಅಧ್ಯಯನ, ವಿಜ್ಞಾನಿಗಳ ಜೊತೆ ಚರ್ಚೆ….!

Advertisement

ಅಡಿಕೆ ಹಳದಿ ಎಲೆ ರೋಗ ಹಾಗೂ ಎಲೆಚುಕ್ಕಿ ರೋಗದ ವಿಚಾರದಲ್ಲಿ ಕಳೆದ 5 ವರ್ಷಗಳಿಂದಲೂ ಅಧ್ಯಯನ ಹಾಗೂ ತಜ್ಞರ ಸಮಿತಿ ನೇಮಕ, ವರದಿ ಪಡೆಯುವುದು ನಡೆಯುತ್ತಲೇ ಇದೆ. ಇನ್ನೂ ಕೂಡಾ ಈ  ಹಳದಿ ರೋಗ ಮತ್ತು ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಕ ಮಾಡುವುದು ನಿಲ್ಲಲೂ ಇಲ್ಲ, ಅಧ್ಯಯನ ವರದಿ ಪ್ರಕಟವೂ ಆಗಿಲ್ಲ…!. ಈ ಹಿಂದಿನ ಸರ್ಕಾರವೂ ಇದೇ ಹೇಳಿಕೆ ನೀಡಿತ್ತು. ಸುಳ್ಯಕ್ಕೆ ಅಂದಿನ ಕೃಷಿ ಸಚಿವರು ಭೇಟಿ ನೀಡಿದಾಗಲೂ ಇದೇ ಹೇಳಿಕೆ ನೀಡಿದ್ದರು. ಅಡಿಕೆ ಹಳದಿ ಎಲೆ ರೋಗಕ್ಕೆ ಸಂಬಂಧಿಸಿದಂತೆ ಇದುವರೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಆಗಿರುವ ಬೆಳವಣಿಗೆಗಳು ಹಾಗಿದ್ದರೆ ಏನು ಎಂಬುದು ಪ್ರಶ್ನೆಯಾಗಿದೆ.

ಕಳೆದ ಬಾರಿ ಸುಳ್ಯಕ್ಕೆ ಭೇಟಿ ನೀಡಿದ್ದ ತೋಟಗಾರಿಕಾ ಸಚಿವರು ಅಡಿಕೆ ಸೋಗೆಯನ್ನು ಇಸ್ರೇಲ್‌ ಕಳುಹಿಸಲಾಗುವುದು ಎಂದಿದ್ದರು. ಅದಾದ ಬಳಿಕ ಹಳದಿ ಎಲೆ ರೋಗ, ಎಲೆಚುಕ್ಕಿ ರೋಗದ ಅಧ್ಯಯನಕ್ಕೆ ತಂಡ ರಚನೆಯಾಗಿ ಸುಳ್ಯ, ಶೃಂಗೇರಿ, ಶಿವಮೊಗ್ಗ ಸೇರಿದಂತೆ ವಿವಿಧ ಕಡೆಗೆ ವಿಜ್ಞಾನಿಗಳ ತಂಡ ಭೇಟಿಯೂ ನೀಡಿತ್ತು. ಅದಾದ ಬಳಿಕ ಆ ಸಮಿತಿ ವರದಿಯನ್ನು ಇದುವರೆಗೂ ನೀಡಿಲ್ಲವೇ ಅಥವಾ ಇನ್ನೊಂದು ಹೊಸ ಸಮಿತಿ ರಚನೆಯಾಗಿದೆಯೆ..? . ಈ ಸರ್ಕಾರಗಳು ರೈತರನ್ನು ಸಮಾಧಾನ ಪಡಿಸುತ್ತಿದೆಯೇ, ನಿಜಕ್ಕೂ ಕಾಳಜಿಯಿಂದ ಕೆಲಸ ಮಾಡುತ್ತಿದೆಯೇ…?

Advertisement

An expert committee has been appointed to study Arecanut leaf spot disease and yellow leaf disease. Agriculture Minister Cheluvarayaswamy said that action will be taken as soon as the report is received.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ| 21-11-2024 | ಮಳೆಯ ಸಾಧ್ಯತೆ ಕಡಿಮೆ | ನ.26 ಸುಮಾರಿಗೆ ಚಂಡಮಾರುತ ಸಾಧ್ಯತೆ |
November 21, 2024
2:52 PM
by: ಸಾಯಿಶೇಖರ್ ಕರಿಕಳ
ದ ಕ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ
November 20, 2024
8:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-11-2024 | ರಾಜ್ಯದಲ್ಲಿ ಒಣಹವೆ | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ |
November 20, 2024
5:38 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಕೈಗಾರಿಕೆಗಳಲ್ಲಿ ಹಸಿರು ತಂತ್ರಜ್ಞಾನ ಅಳವಡಿಸಲು ಆದ್ಯತೆ | ಮುಖ್ಯಮಂತ್ರಿ ಸಿದ್ದರಾಮಯ್ಯ
November 20, 2024
5:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror