ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಭಾನುವಾರ ಭೇಟಿ ನೀಡಿ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದರು. ಅದಾದ ಬಳಿಕ ಮಾಧ್ಯಮ ಪ್ರನಿಧಿಗಳೊಂದಿಗೆ ಮಾತನಾಡಿ, ಅಡಿಕೆ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಕ ಮಾಡಲಾಗಿದೆ. ವರದಿ ಬಂದ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವರು, ಶಿವಮೊಗ್ಗ, ದಕ್ಷಿಣಕನ್ನಡ ಹಾಗೂ ಉಡುಪಿ ಭಾಗದಲ್ಲಿ ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗ ನಿಯಂತ್ರಣಕ್ಕೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಈ ರೋಗಗಳಿಂದ ಈ ಭಾಗದ ರೈತರು ಸಮಸ್ಯೆಗೆ ಒಳಗಾಗಿದ್ದಾರೆ, ಆದ್ದರಿಂದ ಈ ರೋಗ ನಿಯಂತ್ರಣಕ್ಕೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಹಳದಿ ರೋಗ ಮತ್ತು ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಕ ಮಾಡಲಾಗಿದೆ. ವರದಿ ಬಂದ ತಕ್ಷಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಕಾಂಗ್ರೆಸ್ ಸರ್ಕಾರ ಅನೇಕ ವಿನೂತನ ಯೋಜನೆಗಳನ್ನು ರೈತರಿಗಾಗಿ ಜಾರಿ ಮಾಡಿದೆ. ರೈತರ ಹಿತಕ್ಕಾಗಿ ಇನ್ನಷ್ಟು ವಿಶೇಷ ಯೋಜನೆಗಳನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂಬುದಾಗಿ ಗುರುತಿಸಲಾಗಿದೆ. ಹೆಚ್ಚುವರಿಯಾಗಿ ಮತ್ತೆ 21 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗುತ್ತದೆ. ಈ ತಾಲೂಕುಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲಾಗುವುದು.ಈಗಾಗಲೇ ರಾಜ್ಯದ 90% ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ.ಇನ್ನು ಕೇವಲ 20 ತಾಲೂಕುಗಳನ್ನು ಮಾತ್ರ ಬರ ಪೀಡಿತ ಎಂದು ಘೋಷಿಸಲಾಗಿಲ್ಲ.ಅಲ್ಲೂ ಬರದ ಛಾಯೆ ಇದೆ ಎಂದು ತಿಳಿದು ಬಂದಲ್ಲಿ ಮುಂದಿನ ಹಂತದಲ್ಲಿ ಈ ತಾಲೂಕುಗಳನ್ನು ಕೂಡಾ ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗುತ್ತದೆ ಎಂದರು.
ಇನ್ನೂ ಮುಗಿದಿಲ್ಲವೇ ವೈಜ್ಞಾನಿಕ ಅಧ್ಯಯನ, ವಿಜ್ಞಾನಿಗಳ ಜೊತೆ ಚರ್ಚೆ….!
ಅಡಿಕೆ ಹಳದಿ ಎಲೆ ರೋಗ ಹಾಗೂ ಎಲೆಚುಕ್ಕಿ ರೋಗದ ವಿಚಾರದಲ್ಲಿ ಕಳೆದ 5 ವರ್ಷಗಳಿಂದಲೂ ಅಧ್ಯಯನ ಹಾಗೂ ತಜ್ಞರ ಸಮಿತಿ ನೇಮಕ, ವರದಿ ಪಡೆಯುವುದು ನಡೆಯುತ್ತಲೇ ಇದೆ. ಇನ್ನೂ ಕೂಡಾ ಈ ಹಳದಿ ರೋಗ ಮತ್ತು ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಕ ಮಾಡುವುದು ನಿಲ್ಲಲೂ ಇಲ್ಲ, ಅಧ್ಯಯನ ವರದಿ ಪ್ರಕಟವೂ ಆಗಿಲ್ಲ…!. ಈ ಹಿಂದಿನ ಸರ್ಕಾರವೂ ಇದೇ ಹೇಳಿಕೆ ನೀಡಿತ್ತು. ಸುಳ್ಯಕ್ಕೆ ಅಂದಿನ ಕೃಷಿ ಸಚಿವರು ಭೇಟಿ ನೀಡಿದಾಗಲೂ ಇದೇ ಹೇಳಿಕೆ ನೀಡಿದ್ದರು. ಅಡಿಕೆ ಹಳದಿ ಎಲೆ ರೋಗಕ್ಕೆ ಸಂಬಂಧಿಸಿದಂತೆ ಇದುವರೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಆಗಿರುವ ಬೆಳವಣಿಗೆಗಳು ಹಾಗಿದ್ದರೆ ಏನು ಎಂಬುದು ಪ್ರಶ್ನೆಯಾಗಿದೆ.
ಕಳೆದ ಬಾರಿ ಸುಳ್ಯಕ್ಕೆ ಭೇಟಿ ನೀಡಿದ್ದ ತೋಟಗಾರಿಕಾ ಸಚಿವರು ಅಡಿಕೆ ಸೋಗೆಯನ್ನು ಇಸ್ರೇಲ್ ಕಳುಹಿಸಲಾಗುವುದು ಎಂದಿದ್ದರು. ಅದಾದ ಬಳಿಕ ಹಳದಿ ಎಲೆ ರೋಗ, ಎಲೆಚುಕ್ಕಿ ರೋಗದ ಅಧ್ಯಯನಕ್ಕೆ ತಂಡ ರಚನೆಯಾಗಿ ಸುಳ್ಯ, ಶೃಂಗೇರಿ, ಶಿವಮೊಗ್ಗ ಸೇರಿದಂತೆ ವಿವಿಧ ಕಡೆಗೆ ವಿಜ್ಞಾನಿಗಳ ತಂಡ ಭೇಟಿಯೂ ನೀಡಿತ್ತು. ಅದಾದ ಬಳಿಕ ಆ ಸಮಿತಿ ವರದಿಯನ್ನು ಇದುವರೆಗೂ ನೀಡಿಲ್ಲವೇ ಅಥವಾ ಇನ್ನೊಂದು ಹೊಸ ಸಮಿತಿ ರಚನೆಯಾಗಿದೆಯೆ..? . ಈ ಸರ್ಕಾರಗಳು ರೈತರನ್ನು ಸಮಾಧಾನ ಪಡಿಸುತ್ತಿದೆಯೇ, ನಿಜಕ್ಕೂ ಕಾಳಜಿಯಿಂದ ಕೆಲಸ ಮಾಡುತ್ತಿದೆಯೇ…?
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…