ರಾಜ್ಯದಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ವ್ಯಾಪಕ | 88,559 ಹೆಕ್ಟೇರ್ ಪ್ರದೇಶಕ್ಕೆ ವಿಸ್ತರಣೆ – ₹577 ಕೋಟಿ ನೆರವಿಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ

January 28, 2026
10:32 PM

ಕರ್ನಾಟಕದಲ್ಲಿ ಅಡಿಕೆ ಬೆಳೆಗಾರರಿಗೆ ತೀವ್ರ ಸಂಕಟ ತಂದೊಡ್ಡಿರುವ ಎಲೆ ಚುಕ್ಕೆ ರೋಗ (Leaf Spot Disease) ವ್ಯಾಪಕವಾಗಿ ಹರಡಿದ್ದು, ರಾಜ್ಯದ ಮಲೆನಾಡು, ಕರಾವಳಿ ಮತ್ತು ಶಿವಮೊಗ್ಗ ಪ್ರದೇಶಗಳಲ್ಲಿ ಒಟ್ಟು 88,559 ಹೆಕ್ಟೇರ್ ಪ್ರದೇಶದಲ್ಲಿ ರೋಗ ಕಂಡುಬಂದಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಅವರು ಎಲೆಚುಕ್ಕಿ ಹಾಗೂ ಕೀಟಬಾಧೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪರವಾಗಿ ಮಾಹಿತಿ ನೀಡಿದರು. ಶಿವಮೊಗ್ಗ–ಚಿಕ್ಕಮಗಳೂರು–ದಕ್ಷಿಣ ಕನ್ನಡದಲ್ಲಿ ಎಲೆಚುಕ್ಕಿ ರೋಗ ಗಂಭೀರ ಪರಿಣಾಮ ಬೀರಿದ್ದು ಸಚಿವರ ಪ್ರಕಾರ, ರೋಗದಿಂದ ಅತ್ಯಧಿಕವಾಗಿ ಹಾನಿಗೊಳಗಾದ ಜಿಲ್ಲೆಗಳಪೈಕಿ ಶಿವಮೊಗ್ಗ : 32,124 ಎಕರೆ, ಚಿಕ್ಕಮಗಳೂರು : 25,210 ಎಕರೆ, ದಕ್ಷಿಣ ಕನ್ನಡ : 20,830 ಎಕರೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗದ ಲಕ್ಷಣಗಳು ದಾಖಲಾಗಿವೆ.

ರಾಜ್ಯ ಸರ್ಕಾರವು ಅಡಿಕೆ ಬೆಳೆ ಮೇಲೆ ಪರಿಣಾಮ ಬೀರಿರುವ ಎಲೆ ಚುಕ್ಕೆ ರೋಗ, ಹಳದಿ ಎಲೆ ರೋಗ (Yellow Leaf Disease), ಕೊಳೆ ರೋಗ (Rot Disease) ನಿಯಂತ್ರಣಕ್ಕಾಗಿ ₹577.76 ಕೋಟಿ ಮೊತ್ತದ ನೆರವು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಿದೆ ಎಂದು ಸಚಿವರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೋಗ ಹತೋಟಿಗೆ ಕೈಗೊಳ್ಳುವ ಪ್ರಮುಖ ಕ್ರಮಗಳು: ರೋಗಗ್ರಸ್ತ ಭಾಗಗಳನ್ನು ತೆಗೆದು ನಾಶಪಡಿಸುವ ಫೈಟೋಸ್ಯಾನಿಟರಿ ಕ್ರಮಗಳು, ಸಸ್ಯ ರಕ್ಷಣಾ ಔಷಧಿ ಬಳಕೆ,  ಸಮಗ್ರ ಪೋಷಕಾಂಶ ನಿರ್ವಹಣೆ (Integrated Nutrient Management). ತಜ್ಞರಿಂದ ಬೆಳೆಗಾರರಿಗೆ ಮಾರ್ಗದರ್ಶನ ಕೂಡಾ ನೀಡಲಾಗುತ್ತಿದೆ.  ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯದ ತಜ್ಞರು ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಅಡಿಕೆ ರೈತರಿಗೆ ಪೋಷಕಾಂಶ ನಿರ್ವಹಣೆ , ನೀರಿನ ಕಾಲುವೆ ನಿರ್ಮಾಣ, ಹಸಿರು ಗೊಬ್ಬರ ಬಳಕೆ,  ರಸಗೊಬ್ಬರ ಪೂರೈಕೆ ಬಗ್ಗೆ ನಿರಂತರ ಮಾಹಿತಿ ನೀಡುತ್ತಿದ್ದಾರೆ ಎಂದು ಸಚಿವರು ಹೇಳಿದರು. ತೋಟಗಾರಿಕಾ ಇಲಾಖೆಯಲ್ಲಿ ಈ ರೋಗದಿಂದ ಉಂಟಾಗುವ ಬೆಳೆ ನಷ್ಟಕ್ಕೆ ನೇರ ಪರಿಹಾರ ನೀಡುವ ಪ್ರತ್ಯೇಕ ಯೋಜನೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ರೋಗ ಸಂಬಂಧಿತ ನಷ್ಟವನ್ನು ಪರೋಕ್ಷವಾಗಿ ಒಳಗೊಂಡಿದೆ ಎಂದು ಮಾಹಿತಿ ನೀಡಿದರು.

ಅಡಿಕೆ ಕರ್ನಾಟಕದ ಮಲೆನಾಡು–ಕರಾವಳಿ ಭಾಗದ ಪ್ರಮುಖ ನಗದು ಬೆಳೆ. ಆದರೆ ಎಲೆ ಚುಕ್ಕೆ ಮತ್ತು ಹಳದಿ ಎಲೆ ರೋಗಗಳು ವರ್ಷದಿಂದ ವರ್ಷಕ್ಕೆ ಗಂಭೀರವಾಗುತ್ತಿದ್ದು, ರೈತರ ಬದುಕಿನ ಮೇಲೆ ದೊಡ್ಡ ಹೊಡೆತ ನೀಡುತ್ತಿದೆ. ಹೀಗಾಗಿ ರೋಗ ನಿಯಂತ್ರಣದ ಜೊತೆಗೇ ಅಗತ್ಯ ಕ್ರಮಗಳೂ ಬೇಕಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ
March 15, 2026
11:39 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror