Advertisement
MIRROR FOCUS

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

Share

ಅಡಿಕೆ ಮರಗಳಿಗೆ ತಗುಲುತ್ತಿರುವ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತ  ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಕ್ಯಾ.ಬೃಜೇಶ್‌ ಚೌಟ, ಅಡಿಕೆ ಬೆಳೆಯ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲು ಸಮಾಲೋಚನಾ ಸಭೆ ನಡೆಸಲಾಗುವುದು ಎಂದು ಹೇಳಿದರು.

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ICAR-CPCRI ಮತ್ತು ಸ್ಥಳೀಯ ಸಹಕಾರಿ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಡಿಕೆ ಬೆಳೆಗೆ ಎದುರಾಗಿರುವ ವಿವಿಧ ರೋಗಗಳು, ಮಾರುಕಟ್ಟೆ ಸಮಸ್ಯೆಗಳು ಸೇರಿದಂತೆ ಹಲವು ಸವಾಲುಗಳನ್ನು ಸಮಗ್ರವಾಗಿ ಚರ್ಚಿಸುವ ಅಗತ್ಯವಿದೆ. ಸಮಸ್ಯೆಗಳ ಬಗ್ಗೆ ಚರ್ಚಿಸಲು ಅಡಿಕೆ ಬೆಳೆಯುವ ಪ್ರದೇಶದ ಶಾಸಕರನ್ನು ಸೇರಿಸಿಕೊಂಡು ಸಮಾಲೋಚನಾ ಸಭೆ ನಡೆಸಲಾಗುವುದು ಎಂದರು.

ಅಡಿಕೆ ರೋಗ ನಿಯಂತ್ರಣಕ್ಕಾಗಿ ಈಗಾಗಲೇ ವಿಜ್ಞಾನಿಗಳು ನಡೆಸಿರುವ ಪ್ರಾತ್ಯಕ್ಷಿಕೆ ತೋಟಗಳ ಫಲಿತಾಂಶ ಆಧರಿಸಿ ಕ್ರಿಯಾ ಯೋಜನೆ ರೂಪಿಸಬೇಕಿದೆ. ಇದಕ್ಕಾಗಿ ಸಮುದಾಯದ ಸಹಭಾಗಿತ್ವ ಅತ್ಯಂತ ಮುಖ್ಯ ಎಂದು ಅವರು ಹೇಳಿದರು. ಜಿಲ್ಲೆಯ ಮಟ್ಟದಲ್ಲಿ ಶಾಸಕರೊಂದಿಗೆ ವಿಶೇಷ ಸಭೆ ನಡೆಸುವ ಉದ್ದೇಶ ಇದೆ ಎಂದು ತಿಳಿಸಿದರು.

ಇಂದಿನ ಕೃಷಿ ಸ್ಮಾರ್ಟ್ ಆಗಬೇಕಿದ್ದು, ವಿಜ್ಞಾನಿಗಳ ಸಲಹೆಗಳನ್ನು ಅನುಸರಿಸುವುದು ಅನಿವಾರ್ಯವಾಗಿದೆ. ನಕಲಿ ರಾಸಾಯನಿಕಗಳ ಬಗ್ಗೆ ಕೃಷಿಕರು ಜಾಗೃತರಾಗಬೇಕು. ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಮಿಶ್ರ ಬೆಳೆಯತ್ತವೂ ಗಮನ ಹರಿಸುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಿಪಿಸಿಆರ್‌ಐ ನಿರ್ದೇಶಕ ಡಾ. ಕೆ.ಬಾಲಚಂದ್ರ ಹೆಬ್ಬಾರ್ ಮಾತನಾಡಿ, ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮುದಾಯ ಮಟ್ಟದಲ್ಲಿ ಕ್ರಮಗಳನ್ನು ಅಳವಡಿಸುವುದು ಮುಖ್ಯ ಎಂದರು. ಈಗಾಗಲೇ ಮಾದರಿ ತೋಟಗಳನ್ನು ರೂಪಿಸಲಾಗಿದೆ. ಇದೇ ಮಾದರಿಯನ್ನು ಇತರ ಪ್ರದೇಶಗಳಲ್ಲಿಯೂ ಅನುಸರಿಸಿದರೆ ರೋಗ ನಿಯಂತ್ರಣ ಸಾಧ್ಯವಿದೆ ಎಂದು ಹೇಳಿದರು.

ಸಿಪಿಸಿಆರ್‌ಐ ಕಾಸರಗೋಡು ಕ್ಯೂಆರ್‌ಟಿ ಅಧ್ಯಕ್ಷ ಡಾ. ಟಿ. ಜಾನಕಿರಾಮ್ ಅವರು ಕಳೆದ ಐದು ವರ್ಷಗಳಲ್ಲಿ ಅಡಿಕೆ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ನಡೆದಿದೆ. ಹೊಸ ತಳಿಗಳ ಅಭಿವೃದ್ಧಿಯೂ ಆಗಿದೆ. ರೈತರು, ವಿಜ್ಞಾನಿಗಳು ಮತ್ತು ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ರೋಗ ನಿಯಂತ್ರಣ ಸಾಧ್ಯ ಎಂದರು.

ಕ್ಯಾಂಪ್ಕೊ ಅಧ್ಯಕ್ಷ ಸತೀಶ್ಚಂದ್ರ ಅವರು ಅಡಿಕೆ ಬೆಳೆಯು ವಿವಿಧ ರೋಗಗಳಿಂದ ಸಂಕಷ್ಟದಲ್ಲಿದ್ದು, ಎಲ್ಲರೂ ಸೇರಿ ರೈತರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ಸೇರಿದಂತೆ ಹಲವರು ಮಾತನಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವಿಜ್ಞಾನಿ ಡಾ. ವಿನಾಯಕ ಹೆಗ್ಡೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಪ್ರಾತ್ಯಕ್ಷಿಕೆ ತೋಟದ ಕೃಷಿಕರಾದ ಸುಬ್ರಹ್ಮಣ್ಯ ಪ್ರಸಾದ್ ಚಣಿಲ ಹಾಗೂ ಗಿರೀಶ್ ಗೌಡ ನಡುಗಲ್ಲು ತಮ್ಮ ಅನುಭವ ಹಂಚಿಕೊಂಡರು.

ಕಾರ್ಯಕ್ರಮದ ಅಂಗವಾಗಿ ಚಣಿಲ ಪ್ರದೇಶದ ಪ್ರಾತ್ಯಕ್ಷಿಕೆ ತೋಟಗಳಿಗೆ ಸಂಸದ ಬೃಜೇಶ್‌ ಚೌಟ ಹಾಗೂ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡವು  ಕ್ಷೇತ್ರ ಭೇಟಿ ನಡೆಸಿದರು. ಅಡಿಕೆ ಬೆಳೆಗಾರರು ಹಾಗೂ ಪ್ರಮುಖರು ಈ ಭೇಟಿಯಲ್ಲಿ ಭಾಗವಹಿಸಿದರು.

ಎಲೆ ಚುಕ್ಕಿ ರೋಗವು ಸಾಮಾನ್ಯವಾಗಿ ಮಳೆ ಜಾಸ್ತಿಯಾಗಿ ಅದರ ತೇವಾಂಶದಿಂದ ಗಾಳಿ ಮೂಲಕ ಅಡಿಕೆ ಮರಗಳಿಗೆ ವೇಗವಾಗಿ ಹರಡುತ್ತದೆ. ಮಳೆ ಜಾಸ್ತಿ ಸೇರಿದಂತೆ ಹವಾಮಾನ ಬದಲಾವಣೆ ಕೂಡ ಎಲೆಚುಕ್ಕಿ ರೋಗ ವ್ಯಾಪಕಕ್ಕೆ ಒಂದು ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಪ್ರಸಾದ್‌ ಅವರ ಅಡಿಕೆ ತೋಟದಲ್ಲಿ ಅಧ್ಯಯನದ ದೃಷ್ಟಿಯಿಂದ ಅಟೋಮ್ಯೆಟಿಕ್‌ ವೆದರ್‌  ಸ್ಟೇಷನ್‌ ಕೂಡ ಅಳವಡಿಸಲಾಗಿದೆ. ಇದರಿಂದ ಎಷ್ಟು ಪ್ರಯಾಣದ ಮಳೆಯಾಗಿದೆ, ತೇವಾಂಶ, ತಾಪಮಾನ ಸೇರಿದಂತೆ ಹವಾಮಾನ ಬದಲಾವಣೆಯಿಂದ ಈ ಎಲೆಚುಕ್ಕಿ ರೋಗ ಯಾವ ರೀತಿ ಹರಡುತ್ತದೆ ಎಂಬುದರ ಅಧ್ಯಯನ ಕೂಡ ಇದರಿಂದ ಸಾಧ್ಯವಾಗಲಿದೆ.

A program on arecanut leaf spot disease management was held at Guthigaru, Sullia. MP Captain Brijesh Chowta emphasized the need for a community-based action plan to tackle arecanut diseases and market challenges. Scientists and farmers highlighted the importance of collective efforts, scientific practices, and model plantations to control the disease effectively.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

5 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

9 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago