Advertisement
MIRROR FOCUS

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

Share

ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ರೋಗದ ತೀವ್ರ ಹಾವಳಿಯಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಿನ್ನೆಲೆ, ಕೃಷಿ ಮಾಧ್ಯಮಿಕ ಸಾಲ ಹಾಗೂ ಕೆ.ಸಿ.ಸಿ (KCC) ಸಾಲದ ಮರುಪಾವತಿ ಅವಧಿಯನ್ನು ಮುಂದೂಡುವ ಕುರಿತು ನಿರ್ಣಯ ಸಿದ್ಧಪಡಿಸಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೆ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಾರವಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲೆಚುಕ್ಕಿ ರೋಗದ ಬಾಧೆಯಿಂದ ಜಿಲ್ಲೆಯ ಅನೇಕ ಅಡಿಕೆ ತೋಟಗಳಲ್ಲಿ ಉತ್ಪಾದನೆ ಕುಸಿತವಾಗಿದ್ದು, ರೈತರು ಗಂಭೀರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರಿಂದ ಸಾಲ ಮರುಪಾವತಿ ಅವಧಿ ವಿಸ್ತರಣೆಗಾಗಿ ಮನವಿಗಳು ಬಂದಿರುವುದಾಗಿ ಅವರು ಹೇಳಿದರು.

ರೈತ ಸಂಘಗಳು ಹಾಗೂ ಸಹಕಾರ ಸಂಘಗಳ ಮೂಲಕ ಬಂದ ಮನವಿಗಳ ಪ್ರಕಾರ, ಏಪ್ರಿಲ್ 15ಕ್ಕೆ ಮರುಪಾವತಿಸಬೇಕಾದ ಕೃಷಿ ಮಾಧ್ಯಮಿಕ ಸಾಲದ ಕಂತುಗಳನ್ನು ಒಂದು ವರ್ಷದ ಅವಧಿಗೆ ಮುಂದೂಡಬೇಕು ಹಾಗೂ ಏಪ್ರಿಲ್ 30ಕ್ಕೆ ಮರುಪಾವತಿಸಬೇಕಾದ ಕೆ.ಸಿ.ಸಿ (Kisan Credit Card) ಸಾಲದ ಅವಧಿಯನ್ನು ಒಂದು ವರ್ಷ ವಿಸ್ತರಿಸಬೇಕು ಎಂದು ವಿನಂತಿಸಲಾಗಿದೆ.

ಈ ಮನವಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ ಅವರು, ಸಂಬಂಧಿತ ಬ್ಯಾಂಕ್ ಅಧಿಕಾರಿಗಳು ಅಗತ್ಯ ನಿರ್ಣಯವನ್ನು ಸಿದ್ಧಪಡಿಸಿ ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಸಲ್ಲಿಸುವಂತೆ ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಕ್ರಮದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ತಾತ್ಕಾಲಿಕವಾಗಿ ಆರ್ಥಿಕ ಉಸಿರು ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

Due to severe impact of leaf spot disease on arecanut plantations in Uttara Kannada district, farmers are facing financial distress. The Zilla Panchayat CEO Dr. Dilish Shashi has instructed lead bank officials to prepare a proposal to the Reserve Bank of India seeking a one-year extension for repayment of agricultural term loans and KCC loans.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

15 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago