ಬರ್ಮಾದಿಂದ ಅಕ್ರಮ ಅಡಿಕೆ ಆಮದು ಮತ್ತೆ ತಡೆ | 18 ಪ್ರಕರಣದಲ್ಲಿ 22 ಮಂದಿ ಬಂಧನ | 5 ಕೋಟಿ ಮೌಲ್ಯದ ಅಡಿಕೆ ವಶ |

December 20, 2021
9:57 PM

ಅಸ್ಸಾಂ ರಾಜ್ಯದ ಹೈಲಕಂಡಿ ಪ್ರದೇಶದಲ್ಲಿ ಬರ್ಮಾದಿಂದ ಅಕ್ರಮ ಸಾಗಾಟ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. ಹೈಲಕಂಡಿ ಜಿಲ್ಲೆಯ ಪೊಲೀಸರು ಅಡಿಕೆ ಅಕ್ರಮ ಸಾಗಾಟ ಪ್ರಕರಣ ಬೇಧಿಸಿ ಒಟ್ಟು 18 ಪ್ರಕರಣ ದಾಖಲಿದ್ದು 22 ಮಂದಿಯನ್ನು ಬಂಧಿಸಿದ್ದಾರೆ. ಒಟ್ಟು 5 ಕೋಟಿ ಮೌಲ್ಯದ 1,700 ಕ್ವಿಂಟಾಲ್ ಬರ್ಮಾ ಅಡಿಕೆಯನ್ನು  ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement
Advertisement

ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣದ ಬಗ್ಗೆ ಹೈಲಕಂಡಿ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಉಪಾಧ್ಯಾಯ ಮಾಧ್ಯಮಗಳಿಗೆ ಮಾಹಿತಿ ನೀಡಿ, 1,700 ಕ್ವಿಂಟಾಲ್ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ 24 ಗಂಟೆಗಳಲ್ಲಿ ಹೈಲಕಂಡಿ ಜಿಲ್ಲೆಯಾದ್ಯಂತ ದಾಳಿ ನಡೆಸಲಾಗಿದ್ದು, ಅಡಿಕೆಯ ಎಲ್ಲಾ ಗೋದಾಮುಗಳನ್ನು ಸೀಲ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈಗಾಗಲೇ ಸೀಲ್‌ ಮಾಡಲಾಗಿರುವ ಗೋದಾಮುಗಳಲ್ಲಿ  ಬರ್ಮಾ ಅಡಿಕೆ ಅಕ್ರಮವಾಗಿ ಆಮದಾಗಿ ಬಳಿಕ ಅಲ್ಲಿ ಅಡಿಕೆಯ ವಿಲೇವಾರಿ ಹಾಗೂ ಪ್ರತ್ಯೇಕಿಸುವ ಕೆಲಸ ನಡೆಯುತ್ತದೆ ಎನ್ನುವ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ. ಅಸ್ಸಾಂ ರಾಜ್ಯದ ಮುಖ್ಯಮಂತ್ರಿ  ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಯಂತೆ ಎಲ್ಲಾ ರೀತಿಯ ಅಕ್ರಮ ವ್ಯಾಪಾರವನ್ನು ತಡೆಯಲು  ದಾಳಿ ನಡೆಸಲಾಗುತ್ತಿದೆ ಎಂದು ಹೈಲಕಂಡಿ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಉಪಾಧ್ಯಾಯ ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror